ತುರ್ತು ವಿಚಾರಣೆಯನ್ನು ನಿರಾಕರಿಸಿದ “ಸುಪ್ರೀಂ” Saaksha Tv
ನವದೆಹಲಿ: ಕರ್ನಾಟಕದಲ್ಲಿ ಭುಗಿಲೆದ್ದಿರುವ ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಮಧ್ಯಪ್ರವೇಶಿಸಿ ತುರ್ತು ವಿಚಾರಣೆ ನಡೆಸಬೇಕು ಎಂದು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ.
ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್, ಸುಪ್ರೀಂಕೋರ್ಟ್ ಮಧ್ಯಪ್ರವೇಶಿಸಿ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿಕೊಂಡಿದ್ದರು.
ಇದಕ್ಕೆ ಸುಪ್ರಿಂಕೋರ್ಟ್ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ವಿಚಾರಣೆ ನಡೆಸಲಿದೆ. ಈ ಹಂತದಲ್ಲಿ ಏಕೆ ಮಧ್ಯಪ್ರವೇಶಿಸಬೇಕೆಂದು ಪ್ರಶ್ನಿಸಿ ಮನವಿಯನ್ನು ನಿರಾಕರಿಸಿದೆ.
ಹಿಜಾಬ್ ನಿರ್ಬಂಧಿಸಿರುವ ಶಿಕ್ಷಣ ಸಂಸ್ಥೆಗಳ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆಗೆ ಹೈಕೋರ್ಟ್ ಬುಧವಾರ ವಿಶೇಷ ಪೀಠ ರಚನೆ ಮಾಡಿದೆ. ಈ ಪೀಠದಲ್ಲಿ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ.ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾ.ಖಾಜಿ ಜೈಬುನ್ನೀಸಾ ಇದ್ದಾರೆ.









