H D Kumaraswamy | ಬಿಜೆಪಿಗರು ತಮ್ಮ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡ್ತಿಲ್ಲ hijab h-d-kumaraswamy-slams bjp leaders Saaksha Tv
ರಾಮನಗರ : ಬಿಜೆಪಿ ನಾಯಕರು ಅವರು ಜನ್ಮಕೊಟ್ಟ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡುತ್ತಿಲ್ಲ.
ಬದಲಿಗೆ ಅಮಾಯಕ, ಬಡ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಹಿಜಾಬ್ ವಿವಾದದ ಕುರಿತು ರಾಷ್ಟ್ರೀಯ ಪಕ್ಷಗಳ ವಿರುದ್ಧ ಕಿಡಿಕಾರಿರುವ ಕುಮಾರಸ್ವಾಮಿ, ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಹಿಜಾಬ್ ಪ್ರಕರಣದಲ್ಲಿ ಅಮಾಯಕ ಮಕ್ಕಳ ಬದುಕಿನ ಜೊತೆಗೆ ಚೆಲ್ಲಾಟ ಆಡುತ್ತಿವೆ.
ಈ ಸಂಘರ್ಷ ದೊಡ್ಡ ದೊಡ್ಡ ಖಾಸಗಿ ಶಾಲೆಗಳಲ್ಲಿ ನಡೆಯುತ್ತಿದೆಯಾ ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ – ಬಿಜೆಪಿ ನಾಯಕರು ಮಕ್ಕಳು ಯಾರೂ ಸರ್ಕಾರಿ ಶಾಲೆಗಳಲ್ಲಿ ಅವರ ಮಕ್ಕಳನ್ನು ಓದಿಸುತ್ತಿಲ್ಲ. ಅವರೆಲ್ಲಾ ಸಹ ಖಾಸಗಿ ಶಾಲೆಗಳಲ್ಲಿ ಓದಿಸುತ್ತಿದ್ದಾರೆ.
ಬಿಜೆಪಿ ನಾಯಕರು ಅವರು ಜನ್ಮಕೊಟ್ಟ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡ್ತಿಲ್ಲ. ಬದಲಿಗೆ ಅಮಾಯಕ ಮಕ್ಕಳಿಗೆ ಕೇಸರಿ ಶಾಲು ಹಾಕಿಸಿ ಹೋರಾಟ ಮಾಡ್ತಿದ್ದಾರೆ ಎಂದು ಆರೋಪಿಸಿದರು.









