James Teaser : ಪುನೀತ್ ಕೊನೆಯ ಚಿತ್ರ ಜೇಮ್ಸ್ ಚಿತ್ರದ ಟೀಸರ್ ರಿಲೀಸ್ (ವೀಡಿಯೋ )
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ಚಿತ್ರದ ಟೀಸರ್ ರಿಲೀಸ್ ಆಗಿದೆ. ಪುನೀತ್ ರಾಜ್ ಕುಮಾರ್ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ..
1 ನಿಮಿಷ 27 ಸೆಕೆಂಡ್ ಗಳ ಟೀಸರ್ ನಲ್ಲಿ ಜೆಮ್ಸ್ ಸಣ್ಣ ಪರಿಚಯವಿದೆ. ಪಕ್ಕಾ ಆಕ್ಷನ್ ಸ್ವೀಕ್ವೆನ್ಸ್ ಗಳಲ್ಲಿ ಪುನೀತ್ ಸ್ಟೈಲಿಸ್ ಆಗಿ ಕಾಣಿಸಿಕೊಂಡಿದ್ದಾರೆ. ಪಿ ಆರ್ ಕೆ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಟೀಸರ್ ರಿಲೀಸ್ ಮಾಡಿದ್ದಾರೆ. ಪುನೀತ್ ಪಾತ್ರಕ್ಕೆ ಅಣ್ಣ ಶಿವರಾಜ್ ಕುಮಾರ್ ಧ್ವನಿ ನೀಡಿದ್ದಾರೆ.. ಟೀಸರ್ ನ ಕೊನೆಯಲ್ಲಿ ಪವರ್ ಫುಲ್ ಡೈಲಾಗ್ ಕೂಡ ಇದೆ.
ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬದಂದು ಅಂದರೆ ಮಾರ್ಚ್ 17ಕ್ಕೆ ಜೇಮ್ಸ್ ರಿಲೀಸ್ ಆಗಲಿದೆ. ಕನ್ನಡ ಮಾತ್ರವಲ್ಲದೆ ಹಲವು ಭಾಷೆಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ..
ರಾಜ್ ಕುಮಾರ್ ಪುತ್ರರಾದ ಪುನೀತ್ ರಾಜ್ ಕುಮಾರ್ ಶಿವರಾಜ್ ಕುಮಾರ್ ರಾಘವೇಂದ್ರ ರಾಜ್ ಕುಮಾರ್ ಮೂರು ಪುತ್ರರೂ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಎಲ್ಲರನ್ನೂ ಒಟ್ಟಿಗೆ ನೋಡುವ ಅಭಿಮಾನಿಗಳ ಆಸೆ ಅಪ್ಪು ಕೊನೆಯ ಚಿತ್ರದಲ್ಲಿ ಈಡೇರಲಿದೆ.








