NEET ಪರೀಕ್ಷೆ ವಿಳಂಬ, ಕೋರ್ಸ್ ಬಿಟ್ಟ ವಿದ್ಯಾರ್ಥಿಗಳ ಶುಲ್ಕ ವಾಪಸ್
ನೀಟ್ ಪರೀಕ್ಷೆಗೆ ವಿಳಂಬವಾದ ಕಾರಣ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ್ದ ದಂಡ ಶುಲ್ಕವನ್ನ ಹಿಂದಿರುಗಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ ನಾರಾಯಣ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ಕೊಟ್ಟಿದ್ದಾರೆ. NEET Delay: fee returning to students who withdrawing course said dr ashwaththanarayana
ಈ ಬಾರಿಯ NEET ಪರೀಕ್ಷೆ ವಿಳಂಬವಾದ ಕಾರಣ ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದು ಈಗ ವೈದ್ಯಕೀಯ ಕೋರ್ಸ್‌ಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕ ರದ್ದುಪಡಿಸಲಾಗಿದೆ. ವಿದ್ಯಾರ್ಥಿಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನೂ ಹಿಂದಿರುಗಿಸಲು ಸೂಚಿಸಲಾಗಿದ್ದು ಈ ವಿನಾಯಿತಿ ಈ ವರ್ಷಕ್ಕೆ ಮಾತ್ರ ಅನ್ವಯವಾಗುತ್ತದೆ. ಟ್ವೀಟ್ ಮಾಡಿದ್ದಾರೆ.
ಸಾಮಾನ್ಯವಾಗಿ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಸೀಟು ಹಂಚಿಕೆ ಒಟ್ಟಿಗೆ ನಡೆಯುತ್ತಿತ್ತು. ಆದರೆ ನೀಟ್ ಪರೀಕ್ಷಾ ವಿಚಾರ ಕೋರ್ಟ್ ಮೆಟ್ಟಿಲೇರಿದ್ದರಿಂದ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ವಿಳಂಬವಾಗಿತ್ತು. ಹಾಗಾಗಿ ಈಗಾಗಲೇ ಎಂಜಿನಿಯರಿಂಗ್ ಪ್ರವೇಶಾತಿ ಪಡೆದಿರುವವರಿಗೆ ಈಗ ವೈದ್ಯಕೀಯ ಸೀಟು ಸಿಕ್ಕಿದ್ದರೆ ಅಲ್ಲಿಗೆ ಹೋಗಬಹುದು ಅದಕ್ಕೆ ಯಾವುದೇ ದಂಡ ಶುಲ್ಕವನ್ನ ವಿಧಿಸಲಾಗುವುದಿಲ್ಲ. ಈ ವರ್ಷ ಮಾತ್ರ ವಿನಾಯಿತಿ ನೀಡಲಾಗಿದೆ..








