Virat Kohli : ಶೂನ್ಯ ಸುತ್ತುವುದರಲ್ಲೂ ವಿರಾಟ್ ದಾಖಲೆ virat kohli duck out list saaksha tv
ವೆಸ್ಟ್ ಇಂಡೀಸ್ ವಿರುದ್ದದ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಸಂಪೂರ್ಣವಾಗಿ ಎಡವಿದ್ದಾರೆ.
ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ವಿರಾಟ್ ಶೂನ್ಯ ಸುತ್ತಿದ್ದಾರೆ. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ 15 ಬಾರಿ ಶೂನ್ಯಕ್ಕೆ ಔಟ್ ಆದಂತೆ ಆಗಿದೆ.
ಸೆಹ್ವಾಗ್ ಮತ್ತು ಸುರೇಶ್ ರೈನಾ 14 ಬಾರಿ ಶೂನ್ಯಕ್ಕೆ ಔಟಾಗಿದ್ರು. ಇದೀಗ ವಿರಾಟ್ ಕೊಹ್ಲಿ ಈ ಆಟಗಾರರನ್ನು ಹಿಂದಿಕ್ಕಿದ್ದಾರೆ.
ಇನ್ನು ಅತಿ ಹೆಚ್ಚು ಬಾರಿ ಶೂನ್ಯಕ್ಕೆ ಔಟ್ ಆದವರ ಪಟ್ಟಿಯಲ್ಲಿ ಸಚಿನ್ ತೆಂಡುಲ್ಕರ್ ಮೊದಲ ಸ್ಥಾನದಲ್ಲಿದ್ದಾರೆ.
ಸಚಿನ್ ಭಾರತದ ಪರ ಗರಿಷ್ಠ 20 ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಯುವರಾಜ್ ಸಿಂಗ್ 18 ಬಾರಿ ಮತ್ತು ಸೌರವ್ ಗಂಗೂಲಿ 16 ಬಾರಿ ಶೂನ್ಯ ಸುತ್ತಿದ್ದಾರೆ.
ಇನ್ನು ಅಹ್ಮದಾಬಾದ್ ನಲ್ಲಿ ನಡೆಯುತ್ತಿರುವ ವಿಂಡೀಸ್ ವಿರುದ್ಧದ ಸರಣಿಯಲ್ಲಿ ವಿರಾಟ್ ಕೊಹ್ಲಿ ವಿಫಲರಾಗಿದ್ದಾರೆ.
ಮೊದಲ ಪಂದ್ಯದಲ್ಲಿ ವಿರಾಟ್ ಕೊಹ್ಲಿ 8 ರನ್ ಗಳಿಸಿದ್ದರು. ಇದಾದ ಬಳಿಕ ಎರಡನೇ ಪಂದ್ಯದಲ್ಲಿ 18 ರನ್ ಸಾಧಿಸಿದ್ದು, ಅಂತಿಮ ಪಂದ್ಯದಲ್ಲಿ ವಿರಾಟ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.









