National – ನಿರ್ಮಾಣ ಹಂತದ ಸುರಂಗ ಕುಸಿತ – 7 ಜನರ ರಕ್ಷಣೆ…
ಬಾರ್ಗಿ ಕಾಲುವೆ ಯೋಜನೆಯ ನಿರ್ಮಾಣ ಹಂತದ ಸುರಂಗ ಕುಸಿದು ಬಿದ್ದು 9 ಕಾರ್ಮಿಕರು ಸಿಲುಕಿರುವ ಘಟನೆ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಸ್ಲಿಮ್ನಾಬಾದ್‌ನಲ್ಲಿ ನಡೆದಿದೆ.
ಪರಿಹಾರ ಕಾರ್ಯಾಚರಣೆಯಲ್ಲಿ ರಕ್ಷಣಾ ತಂಡ ಏಳು ಕಾರ್ಮಿಕರನ್ನ ರಕ್ಷಿಸಿದೆ. ಸ್ಥಳೀಯ ಅಧಿಕಾರಿಗಳ ಜೊತೆಗೆ ಎಸ್‌ಡಿಇಆರ್‌ಎಫ್ ತಂಡವು ಉಳಿದ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲು ಪ್ರಯತ್ನಿಸುತ್ತಿದೆ. ಜಿಲ್ಲಾಧಿಕಾರಿ ಹಾಗೂ ಎಸ್ಪಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.
ನರ್ಮದಾ ನದಿಯ ಬಾರ್ಗಿ ಅಣೆಕಟ್ಟಿನಿಂದ ಬನ್‌ಸಾಗರ್‌ವರೆಗೆ ಸುರಂಗವನ್ನು ನಿರ್ಮಿಸಲಾಗುತ್ತಿದೆ. ಈ ವೇಳೆ ಮಣ್ಣು ಕುಸಿದು ಅವಘಡ ಸಂಭವಿಸಿದೆ. ಕಾರ್ಮಿಕರನ್ನು ಸುಮಾರು 9 ಮೀಟರ್ ಕೆಳಗೆ ಸಿಲುಕಿಕೊಂಡಿದ್ದಾರೆ, ಗಾಯಗೊಂಡ ಕಾರ್ಮಿಕರನ್ನು ಜಬಲ್ಪುರ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಕಟ್ನಿ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.
ಕೆಳಗೆ ಸಿಲುಕಿರುವ ಕಾರ್ಮಿಕರು ಸುರಕ್ಷಿತವಾಗಿದ್ದಾರೆ ಎಂದು ಎನ್‌ವಿಡಿಎ (ನರ್ಮದಾ ವ್ಯಾಲಿ ಡೆವಲಪ್‌ಮೆಂಟ್ ಅಥಾರಿಟಿ) ಕಾರ್ಯನಿರ್ವಾಹಕ ಎಂಜಿನಿಯರ್ ಸಹಜ್ ಶ್ರೀವಾಸ್ತವ ತಿಳಿಸಿದ್ದಾರೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಕ್ಷಣಾ ತಂಡವು ಒಳಗೆ ಹೋಗಿ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದೆ ಮತ್ತು ಆಳದಲ್ಲಿರುವ ಕಾರ್ಮಿಕರಿಗೆ ಆಮ್ಲಜನಕದ ವ್ಯವಸ್ಥೆ ಮಾಡಲಾಗಿದೆ








