ಈ ಬಜೆಟ್‍ನಲ್ಲಿ ಆರ್ಥಿಕತೆಗೆ ಬೂಸ್ಟ್ ಕೊಡುವ ಪ್ರಯತ್ನ ಮಾಡುತ್ತೇವೆ: ಸಿಎಂ ಬೊಮ್ಮಾಯಿ Saaksha Tv
ಹುಬ್ಬಳ್ಳಿ: ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಚಿಂತನೆ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎರಡು ವರ್ಷದಲ್ಲಿ ರಾಜ್ಯದಲ್ಲಿ ಆರ್ಥಿಕತೆ ಬಹಳ ನಷ್ಟ ಆಗಿದೆ. ಈ ಬಜೆಟ್‍ನಲ್ಲಿ ಅದಕ್ಕೆ ಬೂಸ್ಟ್ ಕೊಡುವ ಪ್ರಯತ್ನ ಮಾಡುತ್ತೇವೆ. ಆರ್ಥಿಕ ಅಭಿವೃದ್ಧಿ, ಜನಕಲ್ಯಾಣ ಹಾಗೂ ಶಿಸ್ತು ಎಲ್ಲವನ್ನೂ ದೃಷ್ಠಿಯಲ್ಲಿಟ್ಟುಕೊಂಡು ಬಜೆಟ್ ಮಂಡನೆಯಾಗಲಿದೆ ಎಂದು ಹೇಳಿದರು.
ಈಗಾಗಲೇ ಜಿಲ್ಲಾಧಿಕಾರಿಗಳು, ಆಡಳಿತ ಮಂಡಳಿಗಳು ಮತ್ತು ಪ್ರಮುಖ ಧಾರ್ಮಿಕ ಮುಖಂಡರೊಂದಿಗೆ ಶಾಂತಿ ಸಭೆಯನ್ನು ನಡೆಸಿದ್ದಾರೆ. ನಾಳೆ ಶಾಂತಿಯುತವಾಗಿ ತರಗತಿಗಳನ್ನು ಆರಂಭಿಸಲಾಗುತ್ತದೆ. ಶಾಲಾ-ಕಾಲೇಜು ಆರಂಭ ನಮ್ಮ ಮೊದಲ ಆದ್ಯತೆ ಎಂದರು.
ನಾಳೆಯಿಂದ ಪ್ರೌಢ ಶಾಲೆಗಳು ಆರಂಭಗೊಳ್ಳುತ್ತಿದ್ದು, ಪರಿಸ್ಥಿತಿ ನೋಡಿಕೊಂಡು ಕಾಲೇಜು ಆರಂಭದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಮೊದಲಿನಂತೆ ಸೌಹಾರ್ದಯುತವಾದ ವಾತಾವರಣದಲ್ಲಿ ಶಾಲೆಗಳು ನಡೆಯಬೇಕು. ಹಿಜಾಬ್-ಕೇಸರಿ ಶಾಲು ಸಂಘರ್ಷದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹಾಕುವ ಪೋಸ್ಟ್ ಬಗ್ಗೆ ಪೊಲೀಸರು ಗಮನಿಸುತ್ತಿದ್ದಾರೆ. ಪ್ರಚೋದನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.