ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ!! Saaksha Tv
ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಸಾಧ್ಯತೆ ಇದ್ದು, ಇದು ಜನತೆಗೆ ದರ ಏರಿಕೆ ಬಿಸಿ ತಟ್ಟುವ ಸಾಧ್ಯತೆಯಿದೆ.
ಹೆಸ್ಕಾಂಗಳಿಂದ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಬೆಲೆ ಏರಿಕೆ ಮಾಡುವಂತೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಪ್ರತಿ ಯೂನಿಟ್ಗೆ 1.50 ರೂ. ವಿದ್ಯುತ್ ದರ ಏರಿಕೆ ಮಾಡುವಂತೆ ಪ್ರಸ್ತಾವನೆಯಲ್ಲಿ ತಿಳಿಸಿದ್ದಾರೆ. ದರ ಹೆಚ್ಚಳಕ್ಕೆ ವಿದ್ಯುತ್ ಕಂಪನಿಗಳು ನಷ್ಟದ ಕಾರಣ ಹೇಳಿವೆ.
ಈ ಸಂಬಂಧ ಕೆಇಆರ್ಸಿ ನಾಳೆಯಿಂದ ಗ್ರಾಹಕರ ಅಹವಾಲು ಸ್ವೀಕರಿಸಲಿದೆ. ನಾಳೆಯಿಂದ 3 ದಿನ ದರ ಪರಿಷ್ಕರಣೆ ಪರಿಶೀಲನಾ ಕಾರ್ಯ ನಡೆಯಲಿದ್ದು, ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ದರ ಏರಿಕೆಯಾಗುವ ಸಾಧ್ಯತೆಯಿದೆ.
ಕಳೆದ ವರ್ಷ ಕೂಡ 1.39 ಪೈಸೆಗೆ ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಆದರೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಪರಿಷ್ಕರಣೆ ಮಾಡಿದ್ದು ಕೇವಲ 30 ಪೈಸೆ. ಈ ವರ್ಷವೂ 1.50 ಪೈಸೆ ದರ ಏರಿಕೆಗೆ ಪ್ರಸ್ತಾವನೆ ನೀಡಲಾಗಿದ್ದು, ಎಷ್ಟು ದರ ಏರಿಕೆಯಾಗುತ್ತದೆ ಎಂದು ಕಾದು ನೋಡಬೇಕು.
ಈಗಾಗಲೇ ರಾಜ್ಯದ ಜನ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಇದರ ಬೆನ್ನಲ್ಲೇ ವಿದ್ಯುತ್ ದರ ಏರಿಕೆಯಿಂದ ಮತ್ತೊಂದು ಶಾಕ್ ಎದುರಾಗುತ್ತದೆ.









