ಹಿರಿಯ ನಟ ರಾಜೇಶ್ ಆರೋಗ್ಯ ಸ್ಥಿತಿ ಗಂಭೀರ – ಆಸ್ಪತ್ರೆಗೆ ದಾಖಲು…
ಕನ್ನಡ ಚಿತ್ರರಂಗದ ಹಿರಿಯ ನಟ ಕಲಾ ತಪಸ್ವಿ ರಾಜೇಶ್ ಅವರನ್ನು ತೀವ್ರ ಅನಾರೋಗ್ಯ ಕಾರಣದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 82 ವರ್ಷ ವಯಸ್ಸಿನ ರಾಜೇಶ್ ಅವರಿಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚಿತ್ರರಂಗದಲ್ಲಿ ಅಪಾರ ಅನುಭವ ಹೊಂದಿರುವ ರಾಜೇಶ್ ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಬೆಂಗಳೂರಿನ ಕಸ್ತೂರಬಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೆಂಟಿಲೇಟರ್ ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ.
ಕೆಲವೇ ಹೊತ್ತಿನಲ್ಲಿ ವೈದ್ಯರು ಸುದ್ದಿಗೋಷ್ಠಿ ನಡೆಸಲಿದ್ದು ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿಲಿದ್ದಾರೆ. Veteran actor Rajesh in critical condition – hospitalized
ರಾಜ್ ಕುಮಾರ್ ಉದಯ್ ಕುಮಾರ್ ಕಲ್ಯಾಣ್ ಕುಮಾರ್ ಸಮಕಾಲಿನರಾದ ಇವರು ಚಿತ್ರರಂಗಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಜನಿಸಿದ ಇವರ ಮೂಲ ಹೆಸರು ಮುನಿ ಚೌಡಪ್ಪ. ನಾಟಕಗಳಲ್ಲಿ ಅಭಿನಯಿಸುವಾಗ ವಿದ್ಯಾಸಾಗರ್ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದರು. 1960ರ ದಶಕದಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟ ಇವರನ್ನ ಚಿತ್ರರಂಗದಲ್ಲಿ’ ‘ಕಲಾತಪಸ್ವಿ’ ರಾಜೇಶ್ ಎಂದೇ ಕರೆಯುತ್ತಾರೆ. ನೂರಾರು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ.
‘ಕಪ್ಪು ಬಿಳುಪು’, ‘ಬೃಂದಾವನ’, ‘ಬೋರೆ ಗೌಡ ಬೆಂಗಳೂರಿಗೆ ಬಂದ ದೇವರದುಡ್ಡು’, ‘ಕಲಿಯುಗ’, ‘ಪಿತಾಮಹ’ ‘ಸೊಸೆ ತಂದ ಸೌಭಾಗ್ಯ ಸೇರಿಂತೆ ಹಲವು ಸಿನಿಮಾಗಳಲ್ಲಿ ಗಮನಾರ್ಹ ಪಾತ್ರ ನಿರ್ವಹಿಸಿದ್ದಾರೆ.