ಕೋಲಾರ, ಮೇ21 : ವಾಲಿಬಾಲ್ ಆಟದ ವಿಚಾರಕ್ಕೆ ಗಲಾಟೆ ಆಗಿ ಮೂವರಿಗೆ ಚಾಕು ಇರಿದಿರುವ ಘಟನೆ ಕೋಲಾರ ತಾಲೂಕಿನ ಕೆ.ಬಿ. ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ವಾಲಿಬಾಲ್ ಕೋರ್ಟ್ ವಿಚಾರಕ್ಕೆ ಎರಡು ಗುಂಪುಗಳ ಮಧ್ಯೆ ಜಗಳ ನಡೆದಿದೆ. ಈ ವೇಳೆ ಒಂದು ಗುಂಪು ಖಾರದ ಪುಡಿ ಎರಚಿ ಮೂವರಿಗೆ ಚಾಕುವಿನಿಂದ ಇರಿದಿದೆ ಎಂದು ತಿಳಿದುಬಂದಿದೆ. ಈ ಘಟನೆಯಲ್ಲಿ 38 ವರ್ಷದ ಮಂಜುನಾಥ್, 28 ವರ್ಷದ ಅಮರೇಶ್, 24 ವರ್ಷದ ಮಣಿ ಎಂಬುವವರು ಚಾಕು ಇರಿತಕ್ಕೊಳಗಾದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಗಾಯಾಳುಗಳನ್ನು ಸ್ಥಳಾಂತರಿಸಲಾಗಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಈ ಮೂವರ ಬೆನ್ನು, ಹೊಟ್ಟೆ ಹಾಗೂ ಕಿಡ್ನಿ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದೆ. ವಿನೋದ್, ಮಂಜುನಾಥ್, ಮುನಿಯಪ್ಪ, ರಾಜಣ್ಣ, ಮುತ್ತು ಹಲ್ಲೆ ಮಾಡಿದ ಆರೋಪಿಗಳಾಗಿದ್ದಾರೆ. ಇನ್ನು ಈ ಸಂಬಂಧ ವೇಮಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
fifa worldcup2026-ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ CR & LM ಯಂತ್ರಗಳು
ಸಿಆರ್ & ಎಲ್‍ಎಂ..! ವಿಶ್ವ ಫುಟ್‍ಬಾಲ್ ಅಂಗಣದಲ್ಲಿ ಮಿಂಚಿನಂತೆ ಚಲಿಸುವ ಎರಡು ಅತ್ಯದ್ಭುತವಾದ ಮಾನವ ಯಂತ್ರಗಳು. ಹೌದು, 1985 ಮಾಡೆಲ್, ಪೋರ್ಚ್‍ಗಲ್ ಬ್ರ್ಯಾಂಡ್, ಚಾಸಿಸ್ ನಂಬರ್...








