1.4 ಕೋಟಿ ಬಾರಿ ವೀಕ್ಷಣೆ ಕಂಡ ಕಲಾವತಿ ಹಾಡು Saaksha Tv
ಸಿನಿಮಾ: ಟಾಲಿವುಡ್ ನ ಸೂಪರ್ ಸ್ಟಾರ್ ಮಹೇಶ್ ಬಾಬು ಅಭಿನಯದ ಸರ್ಕಾರು ವಾರಿ ಪಾಟ’ ಚಿತ್ರ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. ಈ ಚಿತ್ರದಲ್ಲಿ ಮಹೇಶ್ ಬಾಬು ಅವರು ಹಿಂದೆಂದೂ ಕಾಣಿಸಿಕೊಳ್ಳದ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೇ ಇದೇ ಮೊದಲ ಬಾರಿಗೆ ಮಹೇಶ್ ಬಾಬು ಹಾಗೂ ಕೀರ್ತಿ ಸುರೇಶ್ ಚಿತ್ರದಲ್ಲಿ ಒಂದಾಗಿದ್ದಾರೆ.
ಈ ಚಿತ್ರದ ಕಲಾವತಿ..’ ಹಾಡು ರಿಲೀಸ್ ಆಗಿದ್ದು, ಸೂಪರ್ ಹಿಟ್ ಆಗಿದೆ. ಈ ಹಾಡಿನಲ್ಲಿ ಮಹೇಶ್ ಬಾಬು ಹಾಗೂ ಕೀರ್ತಿ ಸುರೇಶ್ ಕಾಂಬಿನೇಷನ್ ಪ್ರೇಕ್ಷಕರಿಗೆ ಸಖತ್ ಇಷ್ಟವಾಗಿದೆ. ಈ ಹಾಡಿನಲ್ಲಿ ಮಹೇಶ್ ಬಾಬು ಮಸ್ತ್ ಸ್ಟೆಪ್ ಹಾಕಿದ್ದು ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಈ ಹಾಡು ಸದ್ಯ ಟ್ರೆಂಡ್ ನಲ್ಲಿದ್ದು ಕೋಟಿಕೋಟಿ ವೀಕ್ಷಣೆ ಕಾಣುತ್ತಿದೆ.
ಥಮನ್ ಎಸ್. ಅವರು ‘ಸರ್ಕಾರು ವಾರಿ ಪಾಟ’ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದು, ಸಿದ್ ಶ್ರೀರಾಮ್ ಅವರು ಈ ಹಾಡನ್ನು ಹಾಡಿದ್ದಾರೆ. ಈ ಚಿತ್ರದ ಹಾಡು ರಿಲೀಸ್ ಆದ ಒಂದೇ ದಿನಕ್ಕೆ 1.4 ಕೋಟಿ ಬಾರಿ ವೀಕ್ಷಣೆ ಕಂಡಿದೆ. 80 ಲಕ್ಷಕ್ಕೂ ಅಧಿಕ ಮಂದಿ ಈ ವಿಡಿಯೋ ಲೈಕ್ ಮಾಡಿದ್ದಾರೆ. ಈ ಹಾಡಿಗೆ ಬರೋಬ್ಬರಿ 90 ಸಾವಿರ ಕಮೆಂಟ್ಗಳು ಬಂದಿರೋದು ವಿಶೇಷ.
ಕೀರ್ತಿ ಸುರೇಶ್ ಅವರು ‘ಮಹಾನಟಿ’ ಚಿತ್ರದ ಮೂಲಕ ಸಾಕಷ್ಟು ಖ್ಯಾತಿ ಗಳಿಸಿಕೊಂಡವರು. ಆದರೆ, ಆ ಬಳಿಕ ಹಲವು ಸಿನಿಮಾಗಳಲ್ಲಿ ನಟಿಸಿದರೂ ಯಶಸ್ಸು ಸಿಗಲಿಲ್ಲ. ಈಗ ಈ ಸಿನಿಮಾ ಮೂಲಕ ದೊಡ್ಡ ಗೆಲುವಿನ ನಿರೀಕ್ಷೆಯಲ್ಲಿ ಅವರಿದ್ದಾರೆ.