ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳ ಸಾವು, ಇಬ್ಬರಿಗೆ ಗಾಯ Saaksha Tv
ಹಾವೇರಿ: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಹಾಗೂ ಚಾಲಕ ಸೇರಿ ಮೂವರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಸುತ್ತಕೋಟಿ ಗ್ರಾಮದ ಬಳಿ ನಡೆದಿದೆ.
48 ವರ್ಷದ ಶಿಕ್ಷಕ ಪ್ರಕಾಶ, 10 ವರ್ಷದ ಶಾಲಿನಿ ಮತ್ತು 8 ವರ್ಷದ ಯಶೋಧಾ ಮೃತ ದುರ್ದೈವಿಗಳು. ಘಟನೆಯಲ್ಲಿ ಕಾರನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಶೋದಾ ಮತ್ತು ಶಾಲಿನಿ ಜಮೀನಿನಲ್ಲಿ ಕುಳಿತಿದ್ದರು. ಈ ವೇಳೆ ಚಾಲಕ ಪ್ರಕಾಶ್ ಅವರ ನಿಯಂತ್ರಣ ತಪ್ಪಿ ಕಾರು ಜಮೀನಿನಲ್ಲಿ ನುಗಿದ್ದು, ಜಮೀನಿನಲ್ಲಿ ಕುಳತಿದ್ದ ಮಕ್ಕಳಿಗೆ ಕಾರು ಡಿಕ್ಕಿ ಹೊಡೆದಿದೆ. ಮಕ್ಕಳಿಗೆ ಡಿಕ್ಕಿ ಹೊಡೆದು ನಂತರ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ.
ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಕ್ಕಳನ್ನು ಹಿರೇಕರೂರು ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಂಸಭಾವಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಂಸಭಾವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.








