ಅಕ್ರಮವಾಗಿ ಹಸು ಸಾಗಿಸಲು ಯತ್ನ : ಖಾಕಿ ವಶಕ್ಕೆ ವಾಹನ
ಬೆಂಗಳೂರು : ಅಕ್ರಮವಾಗಿ ಹಸು ಮತ್ತು ಎಮ್ಮೆಗಳನ್ನು ಸಾಗಿಸುತ್ತಿದ್ದ ವಾಹನವನ್ನು ಹಿಂದೂ ಸಂಘಟನಾಕಾರರು ತಡೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಂಗಳೂರಿನ ನೈಸ್ ರಸ್ತೆಯಲ್ಲಿ ಹಸು ಮತ್ತು ಎಮ್ಮೆಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು.
ಇದರ ಖಚಿತ ಮಾಹಿತಿ ಮೇರೆಗೆ ಹಿಂದೂಪರ ಸಂಘಟನೆ ಕಾರ್ಯಕರ್ತರು ವಾಹನವನ್ನ ನಿಲ್ಲಿಸಿದ್ದಾರೆ.
ವಾಹನವನ್ನ ನಿಲ್ಲಿಸುತ್ತಿದ್ದಂತೆ ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ.
ಬಳಿಕ ಹಿಂದೂಪರ ಸಂಘಟನಾಕಾರರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸದ್ಯ ವಾಹನವನ್ನು ಕೆಂಗೇರಿ ಪೊಲೀಸರು ವಶಕ್ಕೆ ಪಡೆದು ಎಂಟು ಎಮ್ಮೆಗಳನ್ನು ರಕ್ಷಿಸಿದ್ದಾರೆ.









