ಹೈಕೋರ್ಟ್ ಆದೇಶ ಉಲ್ಲಂಘಿಸಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು Saaksha Tv
ಬೆಂಗಳೂರು: ಇಂದು ರಾಜ್ಯಾದ್ಯಂತ ಪಿಯು, ಪದವಿ ಕಾಲೇಜುಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿನಿಯರು ಹೈಕೋರ್ಟ್ ಆದೇಶ ಉಲಂಘಿಸಿ ಹಿಜಾಬ್ ಧರಿಸಿ ಕಾಲೇಜುಗಳಿಗೆ ಬಂದಿದ್ದಾರೆ.
ಹಿಜಾಬ್ ಧರಿಸಿ ಬಂದಂತ ವಿದ್ಯಾರ್ಥಿಗಳು ಪ್ರಾಂಶುಪಾಲರು, ಉಪನ್ಯಾಸಕರೊಂದಿಗೆ ವಾಗ್ವಾದ ನಡೆಸಿರೋ, ಗಲಾಟೆ ಮಾಡಿರೋ ಘಟನೆಗಳು ರಾಜ್ಯಾಧ್ಯಂತ ವರದಿಯಾಗಿದೆ. ಈ ಮೂಲಕ ರಾಜ್ಯದಲ್ಲಿ ಇಂದು ಆರಂಭಗೊಂಡಂತ ಪಿಯು, ಪದವಿ ಕಾಲೇಜುಗಳಲ್ಲಿ ಮೊದಲ ದಿನವೇ ಹಿಜಾಬ್ ಸಂಘರ್ಷ ತಾರಕಕ್ಕೇರಿದೆ.
ವಿಜಯಪುರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದಂತ ವಿದ್ಯಾರ್ಥಿಗಳು, ತರಗತಿಗೂ ಹಾಜರಾದರು. ತರಗತಿಯಲ್ಲಿ ವಿದ್ಯಾರ್ಥಿನಿಗಳಿಗೆ ಹಿಜಾಬ್ ಧರಿಸಬಾರದು. ತೆಗೆಯಿರಿ ಎಂದಂತ ಪ್ರಾಂಶುಪಾಲರ ಜೊತೆಗೆ ವಾಗ್ವಾದಕ್ಕೆ ವಿದ್ಯಾರ್ಥಿನಿಯರು ಇಳಿದರು. ನಾವು ಹಿಜಾಬ್ ಧರಿಸಿಯೇ ಕಾಲೇಜಿಗೆ ಬರೋದು. ಯಾವುದೇ ಕಾರಣಕ್ಕೂ ತೆಗೆಯೋದಿಲ್ಲ ಎಂದು ಪ್ರತಿಭಟಿಸಿದರು.
ಹಾಗೇ ಬಳ್ಳಾರಿಯ ಸರಳಾದೇವಿ ಕಾಲೇಜಿನಲ್ಲಿಯೂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಯೇ ಕಾಲೇಜಿಗೆ ಆಗಮಿಸಿದರು. ಹಿಜಾಬ್ ತೆಗೆಯುವಂತೆ ಸೂಚಿಸಿದಂತ ಕಾಲೇಜು ಸಿಬ್ಬಂದಿಗಳೊಂದಿಗೆ ವಾಗ್ವಾದಕ್ಕೂ ಇಳಿದರು. ಯಾವುದೇ ಕಾರಣಕ್ಕೂ ಕೋರ್ಟ್ ಅಂತಿಮ ಆದೇಶ ಬರೋವರೆಗೆ ಹಿಜಾಬ್ ತೆಗೆಯೋದಿಲ್ಲ ಎಂಬುದಾಗಿ ಖಡಕ್ ಉತ್ತರ ನೀಡಿದ್ದಾರೆ.
ಇನ್ನೂ ದಾವಣಗೆರೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಬಂದಂತ ವಿದ್ಯಾರ್ಥಿನಿಯರನ್ನು, ಹಿಜಾಬ್ ತೆಗೆಯುವಂತೆ ಸಿಬ್ಬಂದಿಗಳು ತಿಳಿಸಲಾಯಿತು. ಆದರೆ ಬುರ್ಕಾ ಬೇಕಾದರೆ ತೆಗೆಯುತ್ತೇವೆ. ನಾವು ಯಾವುದೇ ಕಾರಣಕ್ಕೂ ಹಿಜಾಬ್ ತೆಗೆಯೋದಿಲ್ಲ ಎಂಬುದಾಗಿ ಗಲಾಟೆ ನಡೆಸಿದ್ದಾರೆ.
ಶಿವಮೊಗ್ಗದಲ್ಲಿಯೂ ಹಿಜಾಬ್ ಸಂಘರ್ಷ ತಾರಕಕ್ಕೇರಿದ್ದು ಹಿಜಾಬ್ ಧರಿಸಿ ಡಿವಿಎಸ್ ಕಾಲೇಜಿಗೆ ವಿದ್ಯಾರ್ಥನಿಯರು ಬಂದಿದ್ದಾರೆ. ಈ ವಿದ್ಯಾರ್ಥಿನಿಯರಿಗೆ ಸ್ವತಃ ಜಿಲ್ಲಾಧಿಕಾರಿ ಸೆಲ್ವಮಣಿಯವರು ಸೂಚಿಸಿದರೂ, ಹಿಜಾಬ್ ತೆಗೆಯೋದಿಲ್ಲ ಎಂದು ವಿದ್ಯಾರ್ಥಿನಿಯರು ತಿಳಿಸಿದ್ದಾರೆ. ಅಲ್ಲದೇ ಹಿಜಾಬ್ ತೆಗೆಯದೇ ಇದ್ದರೇ ಮನೆಗೆ ವಾಪಾಸ್ ಹೋಗಿ ಎಂದಂತ ಕಾಲೇಜಿನ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಈ ಬಳಿಕ ಐವರು ವಿದ್ಯಾರ್ಥಿನಿಯರು ಮನೆಗೆ ವಾಪಾಸ್ ಮರಳಿದ್ದಾರೆ.
ಇದಲ್ಲದೇ ವಿವಿಧ ಜಿಲ್ಲೆಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ನಿಷೇಧಾಜ್ಞೆಯ ನಡುವೆಯೂ ಹಿಜಾಬ್ ಧರಿಸೋದಕ್ಕೆ ಅನುಮತಿ ನೀಡುವಂತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಜೊತೆಗೆ ಕಾಲೇಜಿನ ಮುಂದೆ ಧರಣಿ ನಡೆಸುತ್ತಿರೋದು ಕಂಡು ಬಂದಿದೆ.