ADVERTISEMENT
Saturday, July 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಸಿಎಲ್ಪಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು

Namratha Rao by Namratha Rao
February 16, 2022
in Newsbeat, Politics, ರಾಜಕೀಯ
Share on FacebookShare on TwitterShare on WhatsappShare on Telegram

ಸಿಎಲ್ಪಿ ಕಚೇರಿಯಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳಾದ ನಾವು ಈ ದೇಶದ ಗೌರವ, ಸ್ವಾಭಿಮಾನ ಉಳಿಸಲು ಕೆಲಸ ಮಾಡುತ್ತಿದ್ದೇವೆ.

Related posts

santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

July 18, 2026
fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

July 18, 2026

ನಾವು ಭಾರತೀಯರು. ನಮ್ಮ ದೇಶ, ರಾಷ್ಟ್ರಧ್ವಜ ರಕ್ಷಣೆ ವಿಚಾರದಲ್ಲಿ ನಮಗೆ ನಮ್ಮದೇ ಆದ ಜವಾಬ್ದಾರಿ ಇದೆ. ಅದನ್ನು ಸಂವಿಧಾನ ಪರಿಚ್ಛೇದ 51 ಎ ಮೂಲಕ ಕೊಟ್ಟಿದೆ.

ಸಂವಿಧಾನಕ್ಕೆ ಬದ್ಧರಾಗಿ, ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆ ಗೌರವಿಸಬೇಕು ಎಂದು ಇದರಲ್ಲಿ ಸ್ಪಷ್ಟವಾಗಿ ತಿಳಿಸಿದೆ.

ನಾವು ಜನಪ್ರತಿನಿಧಿಗಳಾಗಿ ಚುನಾವಣೆಗೆ ಸ್ಪರ್ಧಿಸುವಾಗ, ಶಾಸಕರಾಗಿ ಆಯ್ಕೆಯಾದ ಮೇಲೆ, ಸಚಿವರಾದ ನಂತರ ಸಂವಿಧಾನದ ಆಶಯ ಹಾಗೂ ಮಾರ್ಗದರ್ಶನದಲ್ಲಿ ಕೆಲಸ ಮಾಡುವಂತೆ ರಾಜ್ಯಪಾಲರು ಪ್ರಮಾಣ ವಚನ ಬೋಧಿಸುತ್ತಾರೆ. ನಾವು ದೇವರ ಹಾಗೂ ನಾವು ನಂಬಿಕೆ ಇಟ್ಟಿರುವವರ ಮೇಲೆ ಪ್ರಮಾಣ ಮಾಡುತ್ತೇವೆ.

ಈ ರೀತಿ ಪ್ರಮಾಣ ಮಾಡಿ ಅಧಿಕಾರಕ್ಕೆ ಬಂದವರು ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜ ಇಳಿಸಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಸಚಿವ ಈಶ್ವರಪ್ಪ ಅವರು ಹೇಳಿರುವುದನ್ನು ಮಾಧ್ಯಮಗಳು ತೋರಿಸಿವೆ.

ರಾಜ್ಯಪಾಲರು ಆ ಕೂಡಲೇ ಅವರನ್ನು ವಜಾಗೊಳಿಸಬೇಕಿತ್ತು. ಮುಖ್ಯಮಂತ್ರಿಗಳು ಸಚಿವರಿಂದ ರಾಜೀನಾಮೆ ಪಡೆಯಬೇಕಿತ್ತು. ಮುಖ್ಯ ಕಾರ್ಯದರ್ಶಿ ಆಗಲಿ, ಪೊಲೀಸ್ ಮಹಾ ನಿರ್ದೇಶಕರಾಗಲಿ ಸ್ವಯಂ ಪ್ರೇರಿತವಾಗಿ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿಕೊಳ್ಳಬೇಕಿತ್ತು. ಆದರೆ ಇದ್ಯಾವುದೂ ಆಗಿಲ್ಲ.

ನಮ್ಮ ಕಾರ್ಯಕರ್ತರು, ನಾಯಕರು ಬಿಜೆಪಿ ನಾಯಕರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಅವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಿ ಜೈಲಿಗೆ ಹಾಕಿದ್ದು ನಡೆದಿದೆ. ಅವರನ್ನು ನಾವು ಜೈಲಿನಿಂದ ಬಿಡಿಸಿಕೊಂಡು ಬಂದ ಅನೇಕ ಉದಾಹರಣೆಗಳಿವೆ.

ಇದೇ ವಿಧಾನಸಭೆಯಲ್ಲಿ ರೈತರ ಹೋರಾಟವನ್ನು ಕಾಂಗ್ರೆಸ್ ಕೃಪಾಪೋಷಿತ ನಾಟಕ ಎಂದು ಮುಖ್ಯಮಂತ್ರಿಗಳೇ ಹೇಳಿದ್ದು, ಮುಖ್ಯಮಂತ್ರಿಗಳು ನೈತಿಕ ಪೊಲೀಸ್ ಗಿರಿ ಸಮರ್ಥಿಸಿಕೊಂಡಿದ್ದರು.

ಈ ಎಲ್ಲ ಪ್ರಕರಣಗಳ ಪರಿಣಾಮವಾಗಿ ಇಂದು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವಂತಹ ವಾತಾವರಣ ಸೃಷ್ಟಿಯಾಗಿದೆ.

ರಾಷ್ಟ್ರಧ್ವಜ ಹಾರಾಡುವ ಕಂಬದಲ್ಲಿ ಕೇಸರಿ ಧ್ವಜ ಹಾರಿಸಿದರು. ನಂತರ ಮಕ್ಕಳಿಗೆ ಕೇಸರಿ ಶಾಲು ಹಂಚಿದ್ದು ನಾನೇ, ನಾನು ಶಾಲುಗಳನ್ನು ಅಯೋಧ್ಯೆಯಿಂದ ತರಿಸಿಕೊಟ್ಟೆ ಎಂದು ಸಚಿವರೇ ಒಪ್ಪಿಕೊಂಡಿದ್ದಾರೆ.

ವಿಧಾನಸಭೆಯಲ್ಲಿ ಈ ವಿಚಾರ ಪ್ರಸ್ತಾವನೆ ಆದ ನಂತರವೂ ಅವರು ಅದನ್ನೇ ಹೇಳುತ್ತಿದ್ದಾರೆ ಎಂದು ಮಾಧ್ಯಮಗಳು ತಿಳಿಸಿವೆ. ಇಷ್ಟಾದರೂ ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿಲ್ಲ ಎಂದರೆ ಏನರ್ಥ?

ಅವರಿಂದ ದೇಶಕ್ಕೆ ಅಪಮಾನ ಆಗಲು ಅವಕಾಶ ನೀಡುತ್ತಿರುವುದೇಕೆ? ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಮ್ಮ ಕರ್ತವ್ಯ ಏನು? ನೀವು, ನಾವೆಲ್ಲ ಸೇರಿ ಇಂತಹ ದೇಶದ್ರೋಹಿಗಳ ವಿರುದ್ಧ ಹೋರಾಟ ಮಾಡಬೇಕು. ಇದು ನಮ್ಮ ಜವಾಬ್ದಾರಿ.

ಹೀಗಾಗಿ ಈಶ್ವರಪ್ಪ ಅವರ ರಾಜೀನಾಮೆ ಪಡೆದು, ಅವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರಲ್ಲಿ ಮನವಿ ಮಾಡುತ್ತೇನೆ.

ನಾವು ಇಂದು ವಿಧಾನಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದು, ಈ ವಿಚಾರ ಚರ್ಚೆ ಆಗದೇ, ಸರ್ಕಾರ ಉತ್ತರ ನೀಡುವ ಮುನ್ನವೇ ಸ್ಪೀಕರ್ ಅವರು ಆ ಸಚಿವರಿಗೆ ಉತ್ತರ ನೀಡಲು ಅವಕಾಶ ನೀಡಿದ್ದಾರೆ.

ಸ್ಪೀಕರ್ ಅವರು ಪಕ್ಷಾತೀತವಾಗಿದ್ದಾರೆ ಎಂದು ಭಾವಿಸಿದ್ದೆವು. ಆದರೆ, ಅವರು ಆ ರೀತಿ ನಡೆದುಕೊಂಡಿಲ್ಲ. ಇದು ಆರ್ ಎಸ್ ಎಸ್, ಬಿಜೆಪಿ ಅಜೆಂಡಾನಾ? ಸ್ಪೀಕರ್ ಅವರು ಏಕಪಕ್ಷೀಯವಾಗಿ ಒಂದು ಪಕ್ಷದ ಸದಸ್ಯರಂತೆ ನಡೆದುಕೊಳ್ಳುತ್ತಿದ್ದಾರೆ.

ನಾಳೆ ಬೆಳಗ್ಗೆ ಒಳಗಾಗಿ ಸಚಿವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇವೆ. ಇಲ್ಲದಿದ್ದರೆ ಸದನದ ಒಳಗೆ, ಹೊರಗೆ ಹೋರಾಟ ಮಾಡುತ್ತೇವೆ.

Tags: #saakshatvDK Shivakumarsessions 2022
ShareTweetSendShare
Join us on:

Related Posts

santhosh menon new

ksca- ಬಿಸಿಸಿಐ ವಿರುದ್ಧ ಮೆನನ್ ಕಾನೂನು ಸಮರ – “ಸಂತೋಷ”ದ ಅಧಿಕಾರಕ್ಕಾಗಿ ಕರ್ನಾಟಕ ಕ್ರಿಕೆಟ್ ಬಲಿಯಾಗಬೇಕಾ..?

by admin
July 18, 2026
0

                                       ...

fifa world cup trophy old and new

fifa trophy : ಹಿಟ್ಲರ್ ಕೈಗೆ ಸಿಗದೆ..ಸಾಕು ನಾಯಿಯಿಂದ ಕಳ್ಳರ ಕೈಯಿಂದ ತಪ್ಪಿಸಿಕೊಂಡು..ಲೂಟಿಕೋರರ ದಾಳಿಗೆ ನಲುಗಿ ಹೋದ ಜಗದೇಕ ಸುಂದ್ರಿ..!

by admin
July 18, 2026
0

ಈಕೆ ಅಂತಿಂಥ ಚೆಲುವೆಯಲ್ಲ..! ಶಿಲ್ಪಿಯ ಕೈಯಲ್ಲಿ ಅರಳಿದ ಅಪ್ರತಿಮ ರೂಪಸಿ..! ಹೌದು, ಸರ್ವಾಧಿಕಾರಿ ಹಿಟ್ಲರ್‍ನ ಕೈ ಹಿಡಿಯಲಿಲ್ಲ. ಆಂಗ್ಲರ ಮೋಹದ ಬಲೆಗೂ ಬೀಳಲಿಲ್ಲ. ಕಳ್ಳರ ಕೈಗೆ ಸಿಲುಕಿದಾಗ...

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

ಪಿಯುಸಿ ಪಾಸಾದವರಿಗೆ ಸುವರ್ಣಾವಕಾಶ ಕರ್ನಾಟಕ ಲೋಕಾಯುಕ್ತದಲ್ಲಿ ವಿವಿಧ ಹುದ್ದೆಗಳ ನೇಮಕಾತಿ ಇಂದೇ ಅರ್ಜಿ ಸಲ್ಲಿಸಿ

by Shwetha
July 18, 2026
0

ಉದ್ಯೋಗಾಕಾಂಕ್ಷಿಗಳಿಗೆ ಇಲ್ಲಿದೆ ಒಂದು ಸಿಹಿ ಸುದ್ದಿ. ನೀವು ಕೇವಲ ಪಿಯುಸಿ ಪಾಸಾಗಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲೇ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಯಲ್ಲಿ ಕೆಲಸ ಪಡೆಯಬೇಕೆಂದು ಬಯಸುತ್ತಿದ್ದರೆ ನಿಮಗಾಗಿ ಒಂದು...

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by Shwetha
July 18, 2026
0

ಜುಲೈ 20ರಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ದೇಶದ ರಾಜಕೀಯ ವಲಯದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಆಡಳಿತಾರೂಢ ಎನ್‌ಡಿಎ ಹಾಗೂ ವಿರೋಧ ಪಕ್ಷಗಳ ಒಕ್ಕೂಟದ ನಡುವೆ ತೀವ್ರ ವಾಕ್ಸಮರ...

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

ಮೊಟ್ಟೆ ದರದಲ್ಲಿ ನಿರಂತರ ಏರಿಕೆ; ಉತ್ಪಾದನೆ ಕುಸಿತದಿಂದ ಗ್ರಾಹಕರಿಗೆ ಬೆಲೆ ಬರೆ

by Shwetha
July 18, 2026
0

ರಾಜ್ಯದಲ್ಲಿ ಕೋಳಿ ಮೊಟ್ಟೆಯ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದ್ದು, ಗ್ರಾಹಕರಿಗೆ ಹೆಚ್ಚುವರಿ ಹೊರೆ ಉಂಟಾಗಿದೆ. ಕೆಲವೇ ವಾರಗಳ ಹಿಂದೆ 5 ರಿಂದ 6 ರೂಪಾಯಿಗೆ ದೊರೆಯುತ್ತಿದ್ದ ಮೊಟ್ಟೆ ಇದೀಗ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram