ರಾಜ್ಯದಲ್ಲಿ ಬಯೋಮೆಟ್ರಿಕ್ ಹಾಜರಾತಿ ಪುನರಾರಂಭ Saaksha Tv
ಬೆಂಗಳೂರು : ರಾಜ್ಯದಲ್ಲಿ ಪುನರಾರಂಭಗೊಂಡ ಬಯೋಮೆಟ್ರಿಕ್ ಹಾಜರಾತಿ.
ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿದ್ದ ಕಾರಣ ಬಯೋಮೆಟ್ರಿಕ್ ಹಾಜರಾತಿಗೆ ತಾತ್ಕಾಲಿಕವಾಗಿ ವಿನಾಯಿತಿ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಸರಕಾರಿ ಕಚೇರಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಬಯೋಮೆಟ್ರಿಕ್ ಹಾರಾತಿಯನ್ನು ದಾಖಲಿಸುತ್ತಿರಲ್ಲ. ಸದ್ಯ ಕೊರೊನಾ ಸೋಂಕಿನ ಪ್ರಮಾಣವು ಕಡಿಮೆಯಾಗಿದ್ದು, ಬಯೋಮೆಟ್ರಿಕ್ ಹಾಜರಾತಿದಾಖಲಿಸುವಂತೆ ಸರಕಾರ ಸುತ್ತೋಲೆ ಹೊರಡಿಸಿದೆ.
ಕೊರೊನಾ ಪ್ರಕರಣಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಸಚಿವಾಲಯ ಮತ್ತು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬಯೋಮೆಟ್ರಿಕ್ ಹಾಜರಾತಿದಾಖಲಿಸುವಂತೆ ಸರಕಾರ ಸುತ್ತೋಲೆ ಕಳುಹಿಸಿದೆ.








