ಭಾರತೀಯ ನೌಕಾಪಡೆಯ 1531 ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ Saaksha Tv
Indian Navy Recruitment 2022: ಭಾರತೀಯ ನೌಕಾಪಡೆಯು 1531 ಟ್ರೇಡ್ಸ್‌ಮ್ಯಾನ್ ಸ್ಕಿಲ್ಡ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ನೌಕಾಪಡೆಯ ಅಧಿಕೃತ ವೆಬ್‌ಸೈಟ್ joinindiannavy.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಗಳು: ಟ್ರೇಡ್ಸ್‌ಮ್ಯಾನ್ – 1531 ಹುದ್ದೆಗಳು
ವಿದ್ಯಾಹರ್ತೆ: ಅಭ್ಯರ್ಥಿಗಳು ಇಂಗ್ಲಿಷ್ ಜ್ಞಾನದೊಂದಿಗೆ ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10 ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಸಂಬಂಧಿತ ವಿಷಯದಲ್ಲಿ ಅಪ್ರೆಂಟಿಸ್ ತರಬೇತಿಯನ್ನು ಪೂರ್ಣಗೊಳಿಸಿದ ಅಥವಾ ಮೆಕ್ಯಾನಿಕ್ ಆಗಿ ಸೇವೆ ಸಲ್ಲಿಸಿದ ಅಥವಾ ಎರಡು ವರ್ಷಗಳ ನಿಯಮಿತ ಸೇವೆಯೊಂದಿಗೆ ಸೇನೆ, ನೌಕಾಪಡೆ ಮತ್ತು ವಾಯುಪಡೆಯ ಸೂಕ್ತ ತಾಂತ್ರಿಕ ಶಾಖೆಯಲ್ಲಿ ಸೇವೆ ಸಲ್ಲಿಸಿದ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ವಯೋಮಿತಿ: 18 ರಿಂದ 25 ವರ್ಷಗಳ ಒಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. (ಸರ್ಕಾರದ ನಿಯಮಗಳ ಪ್ರಕಾರ ಮೀಸಲಾತಿ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದೆ).
ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ 19,900 ದಿಂದ 63,200 ರೂ. ವರೆಗೂ ವೇತನವನ್ನು ಪಾವತಿಸಲಾಗುತ್ತದೆ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 31 ಮಾರ್ಚ್ 2022.








