ಕಲಾತಪಸ್ವಿ ರಾಜೇಶ್ ಅವರ ನಿಧನಕ್ಕೆ ಗಣ್ಯರ ಸಂತಾಪ Saaksha Tv
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯನಟ ಕಲಾತಪಸ್ವಿ ರಾಜೇಶ್ ಅವರು ಇಂದು ಬೆಳಿಗ್ಗೆ ಕೊನೆಯುಸಿರು ಎಳೆದಿದ್ದಾರೆ. ಇವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿದ್ದಾರೆ.
ಚಲನಚಿತ್ರಕ್ಕೆ ಬಂದಾಗ ವಿದ್ಯಾಸಾಗರ್ ಹೆಸರಿತ್ತು, ಅಮೇಲೆ ರಾಜೇಶ್ ಆದರು. ಅವರ ಪಯಣ ಉತ್ತುಗಂಕೇರಿತ್ತು. ಅವರನ್ನ ಕಳೆದುಕೊಂಡಿದ್ದು ನೋವಿನ ಸಂಗತಿಯಾಗಿದೆ. ಅವರ ಜೊತೆ ಅಭಿನಯ ಮಾಡಿದ್ದು ನನ್ನ ಪುಣ್ಯ ಎಂದು ಹಿರಿಯ ಹಾಸ್ಯನಟ ದೊಡ್ಡಣ ಕಂಬನಿ ಮಿಡದಿದ್ದಾರೆ.
ಮುಖ್ಯಮಂತ್ರಿ ಬೊಮ್ಮಾಯಿ ರಾಜೇಶ್ ಅವರು ನಿಧನರಾದ ವಿಷಯ ತುಂಬಾ ನೋವುಂಟುಮಾಡಿದೆ. ಅಗಲಿದ ಹಿರಿಯ ಕಲಾ ಚೇತನದ ಆತ್ಮಕ್ಕೆ ಶಾಂತಿ ನೀಡಿ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ದೀರ್ಘಕಾಲದಿಂದ ನನ್ನ ಸ್ನೇಹಿತರಾಗಿದ್ದ ರಾಜೇಶ್ ಹುಟ್ಟು ಪ್ರತಿಭೆ ಮತ್ತು ಸ್ವಂತ ಪರಿಶ್ರಮದಿಂದ ಬೆಳೆದು ನಮ್ಮನ್ನೆಲ್ಲ ರಂಜಿಸಿದವರು. ಅವರ ಕುಟುಂಬದ ಸದಸ್ಯರಷ್ಟೇ ನಾನು ದುಃಖಿತನಾಗಿದ್ದೇನೆ. ಅವರ ಸಾವು ಆಘಾತಕಾರಿಯಾಗಿದೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರಂಗಭೂಮಿ ಹಿನ್ನೆಲೆಯಿಂದ ಬೆಳ್ಳಿತೆರೆ ಪ್ರವೇಶಿಸಿದ್ದ ರಾಜೇಶ್ ಅವರ ನಿಧನದಿಂದ ಚಿತ್ರರಂಗ ಹಿರಿಯ ನಟನನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ರಾಜೇಶ್ ಸಹಜ ಅಭಿನಯದಿಂದ ಕನ್ನಡ ಚಿತ್ರರಂಗವನ್ನು ಶ್ರೀಮಂತಗೊಳಿಸಿದ್ದರು, ಕನ್ನಡಿಗರ ಮನೆ-ಮನಗಳನ್ನು ತುಂಬಿಸಿದ್ದರು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.








