ವಿರೋಧ ಪಕ್ಷವಾಗಿ ಕೆಲಸ ಮಾಡುವ ನೈತಿಕತೆಯನ್ನು ಕಾಂಗ್ರೆಸ್ ಕಳೆದುಕೊಂಡಿದೆ: ಸಿಎಂ ಬೊಮ್ಮಾಯಿ Saaksha Tv
ಬೆಂಗಳೂರು: ವಿರೋಧ ಪಕ್ಷವಾಗಿ ಕೆಲಸ ಮಾಡುವ ನೈತಿಕತೆಯನ್ನು ಕಾಂಗ್ರೆಸ್ ಕಳೆದುಕೊಂಡಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕ ಮರಾಠ ವೆಲ್ಫೇರ್ ಅಸೋಶಿಯೇಷನ್ ವತಿಯಿಂದ ಸದಾಶಿವನಗರದ ಛತ್ರಪತಿ ಶಿವಾಜಿ ಮಹಾರಾಜರ ಸ್ಮಾರಕದ ಬಳಿ ಆಯೋಜಿಸಿರುವ ಛತ್ರಪತಿ ಶಿವಾಜಿ ಮಹಾರಾಜರ 395ನೇ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಆಡಳಿತ ಪಕ್ಷವಾಗಿ ಅಲ್ಲ, ವಿರೋಧ ಪಕ್ಷವಾಗಿ ಕೆಲಸ ಮಾಡುವ ನೈತಿಕತೆಯನ್ನು ಕಳೆದುಕೊಂಡಿದೆ ಎಂದು ಹೇಳಿದರು.
ಹೈಕೋರ್ಟ್ ಆದೇಶವನ್ನು ಎಲ್ಲರೂ ಪಾಲನೆ ಮಾಡಬೇಕು. ಹೊರಗಿನವರಿಂದ ಈ ರೀತಿಯ ಸಮಸ್ಯೆಗಳು ಆಗುತ್ತಿವೆ. ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಅಲ್ಲಿನ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತದೆ. ಕುಂಕುಮ, ತಿಲಕ ಕುರಿತು ಉಂಟಾಗಿರುವ ಸಮಸ್ಯೆಗಳ ಬಗ್ಗೆ ನಾನು ಮಾಹಿತಿ ಪಡೆಯುತ್ತೇನೆ. ಶಾಲಾ – ಕಾಲೇಜುಗಳ ಬಳಿ ಸೌಹಾರ್ದ ವಾತಾವರಣ ಮೂಡಿಸುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ಅಲ್ಲಿನ ಶಾಲಾ ಕಾಲೇಜು ಆಡಳಿತ ಮಂಡಳಿ ಮಾಡಲಿದೆ ಎಂದು ಹಿಜಾಬ್ ಸಂಘರ್ಷದ ಬಗ್ಗೆ ಪ್ರತಿಕ್ರಿಯಿಸಿದರು.









