Crime : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪರಸ್ಪರ ಮಾರಕಾಸ್ತ್ರಗಳಿಂದ ಹಲ್ಲೆ : ಇಬ್ಬರು ಸಾವು
ಶಿವಮೊಗ್ಗ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪರಸ್ಪರ ಹೊಡೆದಾಡಿಕೊಂಡು ಇಬ್ಬರು ಯುವಕರು ಸಾವನಪ್ಪಿರುವ ಘಟನೆ ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗ ಹೊರವಲಯದ ಸೂಳೆಬೈಲು ಶಾಂತಿನಗರ 7 ನೇ ಕ್ರಾಸ್ ನಲ್ಲಿ ಈ ಘಟನೆ ನಡೆದಿದೆ..
ಸಲೀಮ್ ಅಹಮದ್ (22) ಹಾಗೂ ಅಬ್ದುಲ್ ದಸ್ತಗಿರಿ (23) ಕೊಲೆಯಾದ ಯುವಕರಾಗಿದ್ದಾರೆ.. ಕೌಟುಂಬಿಕ ವೈಷಮ್ಯಕ್ಕೆ ಸಂಬಂಧಿಸಿದಂತೆ ನಿನ್ನೆ ತಡರಾತ್ರಿ ಇಬ್ಬರ ನಡುವೆ ಗಲಾಟೆ ಆರಂಭವಾಗಿದೆ.. ಈ ವೇಳೆ ಮಾರಕಾಸ್ತ್ರಗಳಿಂದ ಒಬ್ಬರಿಗೊಬ್ಬರು ಹಲ್ಲೆ ಮಾಡಿಕೊಂಡಿದ್ದು ಮೃತಪಟ್ಟಿದ್ದಾರೆ..
ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.. ಆದ್ರೆ ಚಿಕಿತ್ಸೆ ಫಲಿಸದೆ ಇಬ್ಬರು ಯುವಕರೂ ಮೃತಪಟ್ಟಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.








