ಕಿಡಿಗೇಡಿಗಳು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ : ನಟ ಧನ್ವೀರ್ Saaksha Tv
ಬೈ ಟು ಲವ್ ಚಿತ್ರದ ನಾಯಕ ಧನ್ವಿರ್ ಚಿತ್ರದ ಪ್ರಚಾರದಲ್ಲಿ ಬ್ಯುಸಿ ಇದ್ದು, ಆದರೆ ಇವರ ವಿರುದ್ಧ ಆರೋಪ ಒಂದು ಕೇಳಿ ಬಂದಿತ್ತು. ಗುರುವಾರ ಫೆ 17 ರಂದು ಅಭಿಮಾನಿಯೊಬ್ಬರ ಮೇಲೆ ಹಲ್ಲೆ ಮಾಡಿದ ಆರೋಪದಡಿ ಅವರ ವಿರುದ್ಧ ಉಪ್ಪಾರ ಪೇಟೆ ಪೋಲಿಸ್ ಠಾಣೆಯಲ್ಲಿ ಅಭಿಮಾನಿ ದೂರು ದಾಖಲಿಸಿದ್ದರು.
ಈ ಕುರಿತು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಧನ್ವಿರ್ ಕೆಲವು ಕಿಡಿಕೇಡಿಗಳು ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಯಾರು ಮಾಡುತ್ತಿದ್ದಾರೆ ಅಂತ ನನಗೆ ಗೊತ್ತು. ಘಟನೆ ಬಗ್ಗೆ ಎಲ್ಲಾ ಸಾಕ್ಷಿಗಳನ್ನು ಸಂಗ್ರಹಿಸುತ್ತಿದ್ದೇನೆ. ಎಲ್ಲದಕ್ಕೂ ಬೆಂಗಳೂರಿನಲ್ಲಿ ಉತ್ತರ ನೀಡುತ್ತೇನೆ ಅಂತ ಯುವ ನಟ ಧನ್ವೀರ್ ಹೇಳಿಕೆ ನೀಡಿದ್ದಾರೆ.
ಸದ್ಯ ನಾನು ಬೈಟು ಲವ್ ಚಿತ್ರದ ಪ್ರಚಾರದಲ್ಲಿದ್ದೇನೆ. ಇದರ ಬಗ್ಗೆ ಮಾತ್ರ ಗಮನ ಹರಿಸುತ್ತೇನೆ. ಹಲ್ಲೆಯ ಘಟನೆ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಎಲ್ಲಾ ಪ್ರಶ್ನೆಗೆ ಉತ್ತರ ನೀಡುತ್ತೇನೆ ಎಂದಿದ್ದಾರೆ.









