Punjab Election : ಮತದಾನಕ್ಕೂ ಮೊದಲು ಶಿವನಿಗೆ ಪೂಜೆ ಸಲ್ಲಿಸಿದ ಮುಖ್ಯಮಂತ್ರಿ
ಪಂಜಾಬ್ ರಾಜ್ಯ ವಿಧಾನಸಭಾ ಚುನಾವಣೆಯ ಮತದಾನದ ಆರಂಭಕ್ಕೂ ಮುನ್ನ ಖರಾರ್‌ನಲ್ಲಿರುವ ಶಿವ ದೇವಾಲಯದಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಚರಂಜಿತ್ ಸಿಂಗ್ ಚನ್ನಿ ಪಂಜಾಬ್ ನ ಚಮ್ಕೌರ್ ಸಾಹಿಬ್ ಮತ್ತು ಭದೌರ್ ನಲ್ಲಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ. ರಾಜ್ಯದಲ್ಲಿ ಮತದಾನ ಪ್ರಾರಂಭವಾಗುತ್ತಿದ್ದಂತೆ, ಚರಂಜಿತ್ ಸಿಂಗ್ ಚನ್ನಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವುದು ಕಂಡುಬಂದಿದೆ.
ಇದಕ್ಕೂ ಮುನ್ನ ಚರಂಜಿತ್ ಸಿಂಗ್ ಚನ್ನಿ ಗುರುದ್ವಾರ ಶ್ರೀ ಕತಲಗಢ ಸಾಹಿಬ್‌ಗೆ ಭೇಟಿ ನೀಡಿದರು.ಚಮ್ಕೌರ್ ಸಾಹಿಬ್ ಮತ್ತು ಭದೌರ್ ಕ್ಷೇತ್ರಗಳಿಂದ ಚರಂಜಿತ್ ಸಿಂಗ್ ಚನ್ನಿ ಸ್ಪರ್ಧಿಸುತ್ತಿದ್ದಾರೆ.
ಚರಂಜಿತ್ ಸಿಂಗ್ ಚನ್ನಿ ಅವರು ತಮ್ಮ ಸರ್ಕಾರವು ಅತ್ಯುತ್ತಮವಾದ ಕೆಲಸವನ್ನು ಮಾಡಿದೆ ಮತ್ತು ಈಗ ತಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಸರ್ವಶಕ್ತ ಮತ್ತು ಜನರ ಇಚ್ಛೆಯಾಗಿದೆ ಎಂದು ಮಾಧ್ಯಮಗಳಿಗೆ ಹೇಳಿದ್ದಾರೆ.
ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷದ ನಡುವಿನ ಚುನಾವಣಾ ಕಣದಲ್ಲಿ ಎರಡು ಕೋಟಿಗೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಚುನಾವಣಾ ಆಯೋಗದ ಪ್ರಕಾರ 23 ಜಿಲ್ಲೆಗಳ 117 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಮತದಾನ ನಡೆಯಲಿದೆ.








