Punjab Election – 5 ಗಂಟೆಯವರೆಗೆ ಶೇ.63.44ರಷ್ಟು ಮತದಾನ
ಪಂಜಾಬ್ ವಿಧಾನಸಭಾ ಚುನಾವಣೆ: ಪಂಜಾಬ್ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ರಾಜ್ಯದ 117 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದೆ. ರಾಜ್ಯದ 2.14 ಕೋಟಿ ಮತದಾರರು 1304 ಅಭ್ಯರ್ಥಿಗಳ ಭವಿಷ್ಯವನ್ನು ಇವಿಎಂಗಳಲ್ಲಿ ನಿರ್ಧರಿಸಲಿದ್ದಾರೆ.
ಪಂಜಾಬ್‌ನಲ್ಲಿ ಸಂಜೆ 5 ಗಂಟೆಯವರೆಗೆ ಶೇ.63.44ರಷ್ಟು ಮತದಾನವಾಗಿದೆ. ಮಾನ್ಸಾದಲ್ಲಿ ಗರಿಷ್ಠ ಮತದಾನ ನಡೆದಿದೆ ಇಲ್ಲಿ ಶೇ.73.45 ಮತದಾನ ನಡೆದಿದೆ. ಅದೇ ಸಮಯದಲ್ಲಿ ಮೊಹಾಲಿಯಲ್ಲಿ ಅತಿ ಕಡಿಮೆ ಮತದಾನವಾಗಿದ್ದು, ಶೇ.53.10ರಷ್ಟು ಮತದಾನವಾಗಿದೆ.
ಪಂಜಾಬ್ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದಾಗ ಮೋಗಾ ಜಿಲ್ಲೆಯ ಲಂಧೇಕೆ ಗ್ರಾಮದಲ್ಲಿ “ಸಂಶಯಾಸ್ಪದ ಚಟುವಟಿಕೆ” ನಡೆಸಲಾಗುತ್ತಿದೆ ಎಂಬ ಕಾರಣಕ್ಕೆ ಬಾಲಿವುಡ್ ನಟ ಮತ್ತು ಸಾಮಾಜಿಕ ಕಾರ್ಯಕರ್ತ ಸೋನು ಸೂದ್ ಕುಳಿತಿದ್ದ ಕಾರನ್ನ (SUV) ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ತಮ್ಮ ಪತ್ನಿಯೊಂದಿಗೆ ಅಮೃತಸರದಲ್ಲಿ ಮತದಾನ ಮಾಡಿದರು. ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್, ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್, ಕೇಂದ್ರದ ಮಾಜಿ ಸಚಿವೆ ಹರ್‌ಸಿಮ್ರತ್ ಕೌರ್ ಒಟ್ಟಿಗೆ ಮತ ಚಲಾಯಿಸಿದರು.
ಪಂಜಾಬ್ ಮಾಜಿ ಮುಖ್ಯಮಂತ್ರಿ ಮತ್ತು ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಕ್ಯಾಪ್ಟನ್ ಅಮರಿಂದರ್ ಸಿಂಗ್ ಮತ ಚಲಾಯಿಸಲು ಕುಟುಂಬ ಸಮೇತ ಆಗಮಿಸಿದ್ದಾರೆ. Punjab Election 2022: 63.44 percent polling till 5 pm in Punjab, slowest in Mohali








