Shivamogga | ಬಜರಂಗದ ಕಾರ್ಯಕರ್ತನ ಕೊಲೆ : ಶಾಂತಿ ಕಾಪಾಡುವಂತೆ ಸಿಎಂ ಮನವಿ shivamogga-cm basavaraja bommai reaction
ಬೆಂಗಳೂರು : ಶಿವಮೊಗ್ಗದಲ್ಲಿ ಬಜರಂಗದ ಕಾರ್ಯಕರ್ತನ ಕೊಲೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಂತಿ ಕಾಡುವಂತೆ ಮನವಿ ಮಾಡಿಕೊಂಡಿದ್ದಾರೆ. shivamogga-cm basavaraja bommai reaction saaksha tv
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ಸಂಘಟನೆಯ ಕಾರ್ಯಕರ್ತ ಹರ್ಷ ಅವರ ಕೊಲೆಯಾಗಿರುವುದು ಮನಸ್ಸಿಗೆ ಬೇಸರವಾಗಿದೆ ಎಂದಿದ್ದಾರೆ.
ತನಿಖೆ ಈಗಾಗಲೇ ಪ್ರಾರಂಭವಾಗಿದ್ದು, ಆರೋಪಿಗಳ ಸುಳಿವು ದೊರೆತಿದ್ದು, ಶೀಘ್ರದಲ್ಲಿಯೇ ಬಂಧಿಸಲಾಗುವುದು.
ಶಿವಮೊಗ್ಗದ ಜನತೆ ಯಾವುದೇ ಉದ್ವೇಗಕ್ಕೆ,ಪ್ರಚೋದನೆಗೆ ಒಳಗಾಗದೇ ಶಾಂತಿಯನ್ನು ಕಾಪಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.









