shivamogga-bajrang dal activist murder : ಶಾಂತಿ ಕಾಡುವಂತೆ ಸಿದ್ದರಾಮಯ್ಯ ಮನವಿ shivamogga-bajrang-dal-activist-murder-Siddaramaiah reaction
ಬೆಂಗಳೂರು : ಶಿವಮೊಗ್ಗದಲ್ಲಿ ನಡೆದ ಯುವಕನ ಹತ್ಯೆ ಅತ್ಯಂತ ಖಂಡನೀಯ. ಪೊಲೀಸರು ತಕ್ಷಣ ಹಂತಕರನ್ನು ಪತ್ತೆ ಹಚ್ಚಿ ಬಂಧಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಶಿವಮೊಗ್ಗದಲ್ಲಿ ನಡೆದ ಯುವಕನ ಹತ್ಯೆ ಅತ್ಯಂತ ಖಂಡನೀಯ. ಪೊಲೀಸರು ತಕ್ಷಣ ಹಂತಕರನ್ನು ಪತ್ತೆ ಹಚ್ಚಿ ಬಂಧಿಸಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೈಯಕ್ತಿಕವಾಗಿ ನಿಗಾ ವಹಿಸಿ ಪ್ರಚೋದನಕಾರಿ ಚಟುವಟಿಕೆಗಳಿಗೆ ಅವಕಾಶ ನೀಡದೆ ಬಿಗಿಬಂದೋಬಸ್ತ್ಗೆ ವ್ಯವಸ್ಥೆ ಮಾಡಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಶಿವಮೊಗ್ಗದ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆಪರಾಧಿಗಳು ಯಾವುದೇ ಸಂಘಟನೆಗೆ ಸೇರಿದ್ದರೂ ಅವರನ್ನು ತಕ್ಷಣ ಬಂಧಿಸಿ ಗಲ್ಲು ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಬಿಜೆಪಿ ಸರ್ಕಾರವನ್ನು ಆಗ್ರಹಿಸುತ್ತೇನೆ.
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿರುವುದಕ್ಕೆ ಗೃಹ ಸಚಿವರ ಜಿಲ್ಲೆಯಲ್ಲಿಯೇ ನಡೆದ ಅವರದ್ದೇ ಪರಿವಾರದ ಯುವಕನ ಹತ್ಯೆಯೇ ಸಾಕ್ಷಿ. ಸ್ವಂತ ಜಿಲ್ಲೆಯಲ್ಲಿಯೇ ಇಂತಹ ಕೃತ್ಯ ನಡೆದಿರುವುದರಿಂದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರಿಗೆ ಸಚಿವ ಸ್ಥಾನದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ, ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಇದು ಮಾದಕದ್ರವ್ಯದ ಅಮಲಿನಲ್ಲಿ ನಡೆದಿರುವ ಕೃತ್ಯ ಎಂದು @BJP4Karnataka ವಿಧಾನ ಪರಿಷತ್ ಸದಸ್ಯರು ಹೇಳಿರುವುದನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಳ್ಳಬೇಕು. ಅತ್ಯಂತ ಅಪಾಯಕಾರಿಯಾದ ಡ್ರಗ್ ಜಾಲದ ಬಗ್ಗೆಯೂ ತನಿಖೆ ನಡೆಯಲಿ.
5/7#ಶಿವಮೊಗ್ಗ— Siddaramaiah (@siddaramaiah) February 21, 2022
ನಾವು ಅಹಿಂಸೆಯಲ್ಲಿ ನಂಬಿಕೆ ಇಟ್ಟವರು. ಯಾರದ್ದೇ ಕೊಲೆಯಾದರೂ ತಪ್ಪಿತಸ್ಥರಿಗೆ ಕಠಿಣವಾದ ಶಿಕ್ಷೆಯಾಗಬೇಕು ಎಂಬುದು ನನ್ನ ನಿಲುವು. ಹರ್ಷ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮೃತ ದುರ್ದೈವಿಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಹರ್ಷ ಕೊಲೆ ಆರೋಪಿಗಳು ಯಾವುದೇ ಪಕ್ಷ, ಸಮುದಾಯ, ಸಂಘಟನೆಗಳಿಗೆ ಸೇರಿದ್ದರೂ ಬಿಜೆಪಿ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಪರಿಸ್ಥಿತಿ ಬಿಗಡಾಯಿಸದಂತೆ ನೋಡಿಕೊಳ್ಳಬೇಕು.
ಇದು ಮಾದಕದ್ರವ್ಯದ ಅಮಲಿನಲ್ಲಿ ನಡೆದಿರುವ ಕೃತ್ಯ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯರು ಹೇಳಿರುವುದನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಳ್ಳಬೇಕು. ಅತ್ಯಂತ ಅಪಾಯಕಾರಿಯಾದ ಡ್ರಗ್ ಜಾಲದ ಬಗ್ಗೆಯೂ ತನಿಖೆ ನಡೆಯಲಿ.
ಶಿವಮೊಗ್ಗ ಜಿಲ್ಲೆ ಬಿಜೆಪಿ ಪಕ್ಷದ ಘಟಾನುಘಟಿ ನಾಯಕರು ಇರುವ ಜಿಲ್ಲೆ. ಸಚಿವ ಈಶ್ವರಪ್ಪ, ಮಾಜಿ ಮುಖ್ಯಮಂತ್ರಿ ಬಿ,ಎಸ್,ಯಡಿಯೂರಪ್ಪ ಹಾಗೂ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಜಿಲ್ಲೆಯ ಪರಿಸ್ಥಿತಿಯೇ ಹೀಗಾದರೆ ಉಳಿದ ಕಡೆ ಹೇಗೆ?
ನಾವು ಅಹಿಂಸೆಯಲ್ಲಿ ನಂಬಿಕೆ ಇಟ್ಟವರು. ಯಾರದ್ದೇ ಕೊಲೆಯಾದರೂ ತಪ್ಪಿತಸ್ಥರಿಗೆ ಕಠಿಣವಾದ ಶಿಕ್ಷೆಯಾಗಬೇಕು ಎಂಬುದು ನನ್ನ ನಿಲುವು. ಹರ್ಷ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಮೃತ ದುರ್ದೈವಿಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
3/7#ಶಿವಮೊಗ್ಗ— Siddaramaiah (@siddaramaiah) February 21, 2022
ಪೊಲೀಸರು ಅಪರಾಧಿಗಳನ್ನು ಮೊದಲು ಬಂಧಿಸಿ ಕೂಲಂಕುಷವಾಗಿ ತನಿಖೆ ಮಾಡಲಿ. ಸರ್ಕಾರ ನಡೆಸುವವರು ಬೆಂಗಳೂರಿನಲ್ಲಿ ಕುಳಿತು ಕಾಂಗ್ರೆಸ್ ಅಥವಾ ಇನ್ಯಾರದೋ ಮೇಲೆ ಆರೋಪ ಮಾಡುವುದಲ್ಲ. ಆರೋಪಿಗಳು ಯಾರೇ ಆಗಿದ್ದರೂ ಬಂಧಿಸಿ ಶಿಕ್ಷೆಗೆ ಒಳಪಡಿಸಲಿ ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.








