ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ ಓರ್ವ ಭಯೋತ್ಪಾದಕನ ಬಂಧನ Saaksha Tv
ಜಮ್ಮು ಕಾಶ್ಮೀರ: ಭಾರತೀಯ ಸೇನೆ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ ಓರ್ವ ಭಯೋತ್ಪಾದಕನನ್ನು ಬಂಧಿಸಿದೆ.
ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಜಮ್ಮು ಕಾಶ್ಮೀರ ಪೊಲೀಸರು ಹಂದ್ವಾರ ಪ್ರದೇಶದಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರನ್ನು ಬಂಧಿಸಲಾಗಿದೆ. ಬಂಧಿತ ಉಗ್ರನಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
21 ರಾಷ್ಟ್ರೀಯ ರೈಫಲ್ಸ್ ಮತ್ತು ಸಿಆರ್ಪಿಎಫ್ನ 92ನೇ ಬೆಟಾಲಿಯನ್ ಜಮ್ಮು ಕಾಶ್ಮೀರ ಪೊಲೀಸರಿಗೆ ಕುಪ್ವಾರದ ಉಪಜಿಲ್ಲೆಯಾದ ಹಂದ್ವಾರಾದ ರಾಜವಾರ್ ಪ್ರದೇಶದಲ್ಲಿ ಭಯೋತ್ಪಾದಕರ ಚಲನವಲನಗಳ ಬಗ್ಗೆ ಮಾಹಿತಿ ದೊರೆಯಿತು. ಮಾಹಿತಿಯನ್ನು ಆಧಾರಿಸಿ ಜಂಟಿ ಸುಲ್ತಾನ್‌ಪೋರಾ ಸೇತುವೆಯ ಬಳಿ ಶೋಧ ನಡೆಸುತ್ತಿದ್ದರು.
ವಾಹನ ತಪಾಸಣೆ ವೇಳೆ ಉಬೈದ್ ಬಶೀರ್ ವಾನಿ ಎಂದು ಗುರುತಿಸಲಾದ ವ್ಯಕ್ತಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಆತನನ್ನು ಹಿಡಿದ ಭದ್ರತಾ ಪಡೆಗಳು ವಿಚಾರಣೆ ನಡೆಸಿದಾಗ ಆತ ಜೈಶ್-ಎ-ಮೊಹಮ್ಮದ್ ಸಂಘಟನೆಗೆ ಸೇರಿದ ಭಯೋತ್ಪಾದಕ ಎಂದು ತಿಳಿದುಬಂದಿದೆ. ಆತನಿಂದ ಐದು ಪಿಸ್ತೂಲ್ ಮತ್ತು ಮ್ಯಾಗಜೀನ್ ಮತ್ತು ಐದು ಪಿಸ್ತೂಲ್ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಹಂದ್ವಾರ ಪ್ರದೇಶದಲ್ಲಿ ದಾಳಿ ನಡೆಸಲು ಬಂದಿದ್ದಾಗಿ ಭಯೋತ್ಪಾದಕ ಒಪ್ಪಿಕೊಂಡಿದ್ದಾನೆ. ಇದರ ಜೊತೆಗೆ ಗಡಿಯುದ್ದಕ್ಕೂ ಪಾಕಿಸ್ತಾನದ ಹ್ಯಾಂಡ್ಲರ್ಗಳಿದ್ದು, ಅವರ ನಿರ್ದೇಶನದ ಮೇಲೆ ಕೆಲಸ ಮಾಡುತ್ತಿದ್ದೆ. ಅಲ್ಲದೇ ಇದಲ್ಲದೇ ದಾಳಿ ನಡೆಸುವ ಯೋಜನೆಯೊಂದಿಗೆ ಆ ಪ್ರದೇಶಕ್ಕೆ ಭೇಟಿ ನೀಡಿರುವುದಾಗಿಯೂ ತಪ್ಪೊಪ್ಪಿಕೊಂಡಿದ್ದಾನೆ ಎಂಬುದಾಗಿ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಅದೇ ರೀತಿ, ಜೆ & ಕೆ ನಲ್ಲಿ ಭದ್ರತಾ ಪಡೆಗಳು ಪ್ರಾರಂಭಿಸಿದ ಮತ್ತೊಂದು ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯಲ್ಲಿ, ಶನಿವಾರ ಪುಲ್ವಾಮಾ ಮತ್ತು ಶ್ರೀನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಇಬ್ಬರು ಭಯೋತ್ಪಾದಕ ಸಹಚರರನ್ನು ಪಡೆಗಳು ಬಂಧಿಸಿವೆ. ಇಬ್ಬರು ಭಯೋತ್ಪಾದಕರ ಪೈಕಿ ಒಬ್ಬ ಸಹಚರನನ್ನು ನಿಷೇಧಿತ ಜೆಇಎಂ ಸಂಘಟನೆಯೊಂದಿಗೆ ನಂಟು ಹೊಂದಿರುವುದನ್ನು ಗುರುತಿಸಲಾಗಿದ್ದು, ಆತನ ಬಳಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳು ಪತ್ತೆಯಾಗಿವೆ. ಎಲ್‌ಇಟಿ/ಟಿಆರ್‌ಎಫ್‌ಗೆ ಸೇರಿದ ಮತ್ತೊಬ್ಬ ಈದ್ಗಾ ಪ್ರದೇಶದಲ್ಲಿ ಪತ್ತೆಯಾಗಿದ್ದು, ಆತನಿಂದ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ.