ಈಶ್ವರಪ್ಪಗೆ ಕರೆ ಮಾಡಿಛೀಮಾರಿ ಹಾಕಿದ ಜೆ.ಪಿ ನಡ್ಡಾ Saaksha Tv
ನವದೆಹಲಿ: ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿಕೆ ನೀಡಿರುವ ಕೆ.ಎಸ್.ಈಶ್ವರಪ್ಪನವರಿಗೆ ಕಟುವಾಗಿ ಛೀಮಾರಿ ಹಾಕಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದ್ದಾರೆ.
ಖಾಸಗಿ ಸುದ್ದಿ ಸಂಸ್ಥೆ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಅವರು ಕೇಸರಿ ಧ್ವಜ ವಿವಾದ ದೆಹಲಿಯಲ್ಲಿರುವ ಬಿಜೆಪಿ ವರಿಷ್ಠರ ಗಮನಕ್ಕೂ ಬಂದಿದೆ. ಕೆಂಪುಕೋಟೆಯ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿಕೆ ನೀಡಿದ್ದ ಕರ್ನಾಟಕ ಸಚಿವ ಈಶ್ವರಪ್ಪನವರಿಗೆ ನಾನು ಕರೆ ಮಾಡಿ ಛೀಮಾರಿ ಹಾಕಿದ್ದೇನೆ ಎಂದು ಹೇಳಿದ್ದಾರೆ.
ಇದೇ ವೇಳೆ ಹಿಜಾಬ್ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಹಿಜಾಬ್ ಗಲಾಟೆಯನ್ನು ಪ್ರತಿಪಕ್ಷಗಳೇ ಹೆಚ್ಚಿಸುತ್ತಿವೆ. ನಾವು ಅಭಿವೃದ್ಧಿ ವಿಚಾರಗಳನ್ನಿಟ್ಟುಕೊಂಡು ಚುನಾವಣೆಯಲ್ಲಿ ಹೋರಾಟ ಮಾಡುತ್ತಿದ್ದರೆ, ಪ್ರತಿಪಕ್ಷಗಳು ಹಿಜಾಬ್ ನಂಥ ವಿಷಯಗಳನ್ನಿಟ್ಟುಕೊಂಡು ವಿವಾದ ದೊಡ್ಡದು ಮಾಡುತ್ತಿವೆ ಎಂದು ವಾಗ್ದಾಳಿ ನಡೆಸಿದ್ದಾರೆ.









