ಸಂಪುಟ ಸಭೆಯ ಪ್ರಮುಖ ಅಂಶಗಳು Saaksha Tv
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಂಪುಟ ಸಭೆ ನಡೆದಿದ್ದು, ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಇಂದು ಮಧ್ಯಾಹ್ನ 12:30 ಸಂಪುಟ ಸಭೆ ನಡೆದಿದ್ದು, ಈ ಸಭೆಯಲ್ಲಿ ಕರ್ನಾಟಕ ರಾಜ್ಯದಲ್ಲಿ 2021-22ನೇ ಸಾಲಿನಿಂದ ಪ್ರಧಾನಮಂತ್ರಿ ಕೃಷಿ ಸಿಂಚಯಿ ಯೋಜನೆ-ಜಲಾನಯನ ಅಭಿವೃದ್ಧಿ ಘಟಕ 2.0 ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ ಮಾಡಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ತೀರ್ಮಾನ
ಕರ್ನಾಟಕ ಸಿವಿಲ್ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) (1ನೇ ತಿದ್ದುಪಡಿ) ನಿಯಮಗಳು, 2022ಕ್ಕೆ ಅನುಮೋದನೆ
ಕರ್ನಾಟಕ ಸುವಿಲ್ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) (2ನೇ ತಿದ್ದುಪಡಿ) ನಿಯಮಗಳು, 2022 ಅನುಮೋದನೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲಾಸ್ಪತ್ರೆ, ತಾಲೂಕು ಮಟ್ಟದ ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮೆಡಿಕಲ್ ಗ್ಯಾಸ್ ಪೈಪ್‌ಲೈನ್ ಅಳವಡಿಸುವ ಕಾಮಗಾರಿ ಹಾಗೂ ಸಂಬಂಧಿಸಿದ ಸಿವಿಲ್ ಮತ್ತು ವಿದ್ಯುತ್ ಕಾಮಗಾರಿಗಳ ರೂ. 222.41 ಕೋಟಿಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ
ಮೈಸೂರಿನ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಯ ಆವರಣದಲ್ಲಿ ಕೈಗೊಂಡಿರುವ ಮೈಸೂರು ಜಿಲ್ಲಾ ಆಸ್ಪತ್ರೆ ನಿರ್ಮಾಣ ಕಾಮಗಾರಿಯ ರೂ. 96.66 ಕೋಟಿಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಯ ರೂ. 135.00 ಕೋಟಿ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ
ಬೆಂಗಳೂರು ದಕ್ಷಿಣ ತಾಲೂಕು ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ-275ರಿಂದ ಕಂಬಿಪುರ ಕಾರುಬೆಲೆ ಜಿಲ್ಲಾ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಯ ರೂ. 13.88 ಕೋಟಿಗಳ ಪರಿಷ್ಕೃತ ಅಂದಾಜು ಪಟ್ಟಿ (ಭೂಸ್ವಾಧೀನ ವೆಚ್ಚ ಸೇರಿ)ಗೆ ಅನುಮೋದನೆ
ಬೆಂಗಳೂರು ಪೂರ್ವ ತಾಲೂಕು, ವರ್ತೂರು ಹೋಬಳಿ, ಮುನ್ನೇಕೊಳಾಲು ಗ್ರಾಮದ ಸ.ನಂ. 41ರಲ್ಲಿ 4-00 ಎಕರೆ ಜಮೀನನ್ನು ಶ್ರೀ ಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್ಗೆ ಮಂಜೂರು
ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮದ ಸರ್ವೆ ನಂ. 35/*/* ವಿಸ್ತೀರ್ಣ 01-02 ಎಕರೆ ಮತ್ತು ಸರ್ವೆ ನಂ. 37/*/* ವಿಸ್ತೀರ್ಣ 01-31 ಎಕರೆ ಒಟ್ಟು 02-33 ಎಕರೆ ಸರ್ಕಾರಿ ಜಮೀನನ್ನು ಶ್ರೀ ರಾಘವೇಂದ್ರ ಸ್ವಾಮಿ ಮಠ, ನಂಜನಗೂಡು, ಮಂತ್ರಾಲಯ ಕ್ಯಾಂಪ್ಗೆ ಮಂಜೂರು
ಕರ್ನಾಟಕ ಸಾಮಾನ್ಯ ಸೇವೆ (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಆಡಳಿತ ಶಾಖೆ) (ವೃಂದ ಮತ್ತು ನೇಮಕಾತಿ) (ತಿದ್ದುಪಡಿ) ನಿಯಮಗಳು, 2021ಕ್ಕೆ ಅನುಮೋದನೆ
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಲ್ಲಪ್ಪನಹಳ್ಳಿ ಮತ್ತು ಇತರೆ 19 ಜನವಸತಿಗಳಿಗೆ ಜಲ್ ಜೀವನ್ ಮಿಷನ್ ಯೋಜನೆ ಅಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 10.74 ಕೋಟಿಗಳ ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಯೂಡ್ ಮತ್ತು ಇತರೆ 7 ಗ್ರಾಮಗಳಿಗೆ (17 ಜನವಸತಿಗಳು) ಜಲ್ ಜೀವನ್ ಮಿಷನ್ ಯೋಜನೆ ಅಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 35 ಕೋಟಿಗಳ ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡುವುದು
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಆನೆಕನ್ನಂಬಾಡಿ ಮತ್ತು ಇತರೆ 55 ಜನವಸತಿಗಳಿಗೆ ಜಲ್ ಜೀವನ್ ಮಿಷನ್ ಯೋಜನೆ ಅಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 30.23 ಕೋಟಿಗಳ ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ
ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆ (ಪರಿಶಿಷ್ಟ ಜಾತಿ ಕಲ್ಯಾಣ) ಸೇವೆಗಳು (ವೃಂದ ಮತ್ತು ನೇಮಕಾತಿ) ನಿಯಮಗಳು, 2022ಗೆ ಅನುಮೋದನೆ
ನಂದಿ ಬೆಟ್ಟದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ (DBFOT) ಆಧಾರದ ಮೇಲೆ ರೂ. 93.40 ಕೋಟಿಗಳ ಅಂದಾಜು ವೆಚ್ಚದ ಪ್ರಯಾಣಿಕರ ರೋಪ್ ವೇಗಳ ಅಭಿವೃದ್ಧಿ ಮತ್ತು ಕಾರ್ಯಾಚರಣೆಗಾಗಿ ಖಾಸಗಿ ಪಾಲುದಾರರ ಆಯ್ಕೆಗೆ ಟೆಂಡರ್ ಆಹ್ವಾನಿಸಲು ಆಡಳಿತಾತ್ಮಕ ಅನುಮೋದನೆ
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 60 ವಾರ್ಡ್‌ಗಳಲ್ಲಿ ಪ್ರಾಥಮಿಕ ಕಸ ಸಂಗ್ರಹಣೆ ಮತ್ತು ಸಾಗಾಣಿಕೆ ಕಾರ್ಯವನ್ನು ನಿರ್ವಹಿಸುತ್ತಿರುವ ಮೆ| ಆಂಟೋನಿ ವೇಸ್ಟ್ ಹ್ಯಾಂಡಲಿಂಗ್ ಸೆಲ್ ಪ್ರೈ ಲಿಮಿಟೆಡ್, ಮುಂಬೈ ಇವರ ಗುತ್ತಿಗೆ ಅವಧಿಯನ್ನು ವಿಸ್ತರಿಸಲು ತೀರ್ಮಾನ
ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೂವಿನ ಹಡಗಲಿ ಪಟ್ಟಣದ ಸ.ನಂ. 269/ಎ2ಬಿರಲ್ಲಿನ 0.50 ಎಕರೆ ಜಮೀನನ್ನು ತಾಲೂಕು ಕುರುಬರ ಸಂಘದ ಅಧ್ಯಕ್ಷರ ಹೆಸರಿಗೆ ಮಂಜೂರು ಮಾಡಿ ಖಾತೆ ಮಾಡಲು ಅನುಮೋದನೆ








