ADVERTISEMENT
Wednesday, October 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

UP Election: ಉತ್ತರ ಪ್ರದೇಶದ ನಾಲ್ಕನೇ ಹಂತದ ಚುನಾವಣೆ

Vivek Biradar by Vivek Biradar
February 23, 2022
in National, Newsbeat, ದೇಶ - ವಿದೇಶ
UP Election Saaksha Tv
Share on FacebookShare on TwitterShare on WhatsappShare on Telegram

ಉತ್ತರ ಪ್ರದೇಶದ ನಾಲ್ಕನೇ ಹಂತದ ಚುನಾವಣೆ Saaksha Tv

ಲಕ್ನೋ: ಉತ್ತರ ಪ್ರದೇಶದ ನಾಲ್ಕನೇ ಹಂತದ 59 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದೆ.

Related posts

darshan-puttannaiah-sugarcane-farmers-price-hike-committee

 ದೆಹಲಿಯಲ್ಲಿ ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಧ್ವನಿ ಎತ್ತಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೇಂದ್ರದಿಂದ ಶೀಘ್ರವೇ ಮಹತ್ವದ ನಿರ್ಧಾರ ನಿರೀಕ್ಷೆ!

October 14, 2026
r-ashoka-demands-release-disability-honorarium-karnataka

ವಿಕಲಚೇತನರ ಗೌರವಧನ ತಡೆ ಅಮಾನವೀಯ ಎಂದ ಪ್ರತಿಪಕ್ಷದ ನಾಯಕ ಅಶೋಕ್ ಆಕ್ರೋಶ

October 14, 2026

ಇಂದು ರಾಜಧಾನಿ ಲಕ್ನೋ ಮತ್ತು ಲಖಿಂಪುರ ಖೇರಿ ಸೇರಿದಂತೆ ಸೋನಿಯಾ ಗಾಂಧಿ ಅವರ ಭದ್ರಕೋಟೆಯಾದ ರಾಯ್‌ ಬರೇಲಿಯ ಐದು ಕ್ಷೇತ್ರಗಳಲ್ಲಿ ಮತ್ತು ಪಿಲಿಭಿತ್, ಲಖಿಂಪುರ ಖೇರಿ, ಸೀತಾಪುರ್, ಹರ್ದೋಯಿ, ಉನ್ನಾವೋ, ಲಕ್ನೋ, ರಾಯ್ ಬರೇಲಿ, ಬಂದಾ ಮತ್ತು ಫತೇಪುರ್ ಜಿಲ್ಲೆಗಳಲ್ಲಿ ಕೂಡ ಚುನಾವಣೆ ನಡೆಯುತ್ತಿದೆ.

2017 ರಲ್ಲಿ 59 ಕ್ಷೇತ್ರಗಳಲ್ಲಿ ಬಿಜೆಪಿ 51 ಸ್ಥಾನಗಳನ್ನು ಗೆದ್ದುಕೊಂಡಿತು, ನಾಲ್ಕು ಸಮಾಜವಾದಿ ಪಕ್ಷಕ್ಕೆ, ಎರಡು ಕಾಂಗ್ರೆಸ್‌ಗೆ ಮತ್ತು ಎರಡು ಮಾಯಾವತಿಯ ಬಹುಜನ ಸಮಾಜ ಪಕ್ಷಕ್ಕೆ ಬಂದಿದ್ದವು. ಬಿಜೆಪಿಯ ಮಿತ್ರ ಪಕ್ಷವಾದ ಅಪ್ನಾ ದಳ (ಸೋನೆಲಾಲ್) ಒಂದು ಸ್ಥಾನವನ್ನು ಗಳಿಸಿತ್ತು.

ಲಖಿಂಪುರದ ಎಲ್ಲಾ 8 ಸ್ಥಾನಗಳು ಇದೀಗ ಬಿಜೆಪಿ ಬಳಿ ಇವೆ. ಬಿಜೆಪಿ ಮತ್ತು ಎಸ್‌ಪಿ ಎರಡೂ ಪಕ್ಷಗಳು ಲಖಿಂಪುರ ನಗರ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಸಿವೆ. 2017 ರ ಚುನಾವಣೆಯಲ್ಲಿ ಈ ಸ್ಥಾನವನ್ನು ಗೆದ್ದ ಬಿಜೆಪಿಯ ಯೋಗೇಶ್ ವರ್ಮಾ. ಮತ್ತು ಸಮಾಜವಾದಿ ಪಕ್ಷದ ಉತ್ಕರ್ಷ್ ವರ್ಮಾ ಮಧುರ್ ಅವರು ಕಣದಲ್ಲಿದ್ದಾರೆ. ಇನ್ನೂ ಕಾಂಗ್ರೆಸ್ ರವಿಶಂಕರ್ ತ್ರಿವೇದಿ ಅವರನ್ನು ಕಣಕ್ಕಿಳಿಸಿದೆ.

ಅಲ್ಲದೆ ಉತ್ತರ ಪ್ರದೇಶದ ಕಾನೂನು ಸಚಿವ ಬ್ರಜೇಶ್ ಪಾಠಕ್, ರಾಯ್ ಬರೇಲಿಯ ಹಾಲಿ ಶಾಸಕಿ ಅದಿತಿ ಸಿಂಗ್, ಜಾರಿ ನಿರ್ದೇಶನಾಲಯದ ಮಾಜಿ ಜಂಟಿ ನಿರ್ದೇಶಕ ರಾಜೇಶ್ವರ್ ಸಿಂಗ್ ಮತ್ತು ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿ ಆಶಾ ಸಿಂಗ್ ಸೇರಿದಂತೆ 624 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

ನಾಲ್ಕನೇ ಹಂತದಲ್ಲಿ 9 ಜಿಲ್ಲೆಗಳಲ್ಲಿ 13,817 ಮತ ಕೇಂದ್ರಗಳನ್ನ ತೆರೆಯಲಾಗಿದ್ದು, 24,643 ಮತ ಯಂತ್ರಗಳನ್ನು ಇಡಲಾಗಿದೆ. ಸುಗಮ ಮತದಾನಕ್ಕಾಗಿ ಹಾಗೂ ಚುನಾವಣಾ ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ 9 ಪೊಲೀಸ್ ವೀಕ್ಷಕರು, 57 ಸಾಮಾನ್ಯ ವೀಕ್ಷಕರು ಮತ್ತು 18 ವೆಚ್ಚ ವೀಕ್ಷಕರನ್ನು ಚುನಾವಣಾ ಆಯೋಗವು ನಿಯೋಜಿಸಿದೆ.

Election 2022 Saaksha Tv

ಇವಿಎಂಗಳ ಸ್ಟ್ರಾಂಗ್ ರೂಂಗಳ ಭದ್ರತೆಯ ಜವಾಬ್ದಾರಿಯನ್ನು ಅರೆಸೇನಾ ಪಡೆಗಳಿಗೆ ನೀಡಲಾಗಿದೆ. ಜೊತೆಗೆ 1 ಲಕ್ಷ 15 ಸಾವಿರದ 725 ಮತಗಟ್ಟೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈಗಾಗಲೇ ಎಲ್ಲಾ ಮತಗಟ್ಟೆಗಳ ಬಳಿ ಪೊಲೀಸ್​ ಸಿಬ್ಬಂದಿ ಆಯೋಜಿಸಲಾಗಿದ್ದು, ಹೆಚ್ಚುವರಿಯಾಗಿ 7,022 ಇನ್ಸ್‌ಪೆಕ್ಟರ್‌ಗಳು ಮತ್ತು ಸಬ್ ಇನ್‌ಸ್ಪೆಕ್ಟರ್‌ಗಳು ಹಾಗೂ 58,132 ಹೆಡ್ ಕಾನ್ಸ್​ಟೇಬಲ್‌ಗಳು ಮತ್ತು ಕಾನ್ಸ್​ಟೇಬಲ್‌ಗಳನ್ನು ನಿಯೋಜಿಸಲಾಗುವುದು.

ಲಖಿಂಪುರ ಖೇರಿಯಲ್ಲಿ ಜೀಪು ಹರಿಸಿ ರೈತರ ಹತ್ಯೆಯ ಆರೋಪ ಹೊತ್ತಿರುವ ಆಶಿಶ್‌ ಮಿಶ್ರಾ ಅವರ ತಂದೆ, ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪ್ರಭಾವ ಎಷ್ಟಿದೆ ಎಂಬುದು ಸ್ಪಷ್ಟವಾಗಲಿದೆ. ಹತ್ಯೆ ಪ್ರಕರಣವು ರೈತರಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಇನ್ನೊಂದೆಡೆ, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪ್ರತಿನಿಧಿಸುವ ರಾಯ್​ ಬರೇಲಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿಯೂ ಮತದಾನ ನಡೆಯುತ್ತಿದೆ. ಮಾ.10ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಮಹಿಳಾ ಮತದಾರರನ್ನು ಪ್ರೇರೇಪಿಸಲು, ರಾಜ್ಯ ಪೊಲೀಸರು 137 “ಪಿಂಕ್ ಬೂತ್‌ಗಳನ್ನು” ರಚಿಸಿದ್ದಾರೆ, ಇದನ್ನು ಮಹಿಳಾ ಅಧಿಕಾರಿಗಳು ನಿರ್ವಹಿಸಿದ್ದಾರೆ. ಲಕ್ನೋದ ಕ್ರೈಸ್ಟ್ ಚರ್ಚ್ ಕಾಲೇಜು ಪೋಷಕರು ಮತ ಚಲಾಯಿಸುವ ವಿದ್ಯಾರ್ಥಿಗಳಿಗೆ 10 ಅಂಕಗಳನ್ನು ನೀಡುವುದಾಗಿ ಘೋಷಿಸಿದೆ.

ಏಳು ಹಂತದ ಯುಪಿ ಚುನಾವಣೆಯ ಉಳಿದ ಮೂರು ಹಂತಗಳಿಗೆ ಫೆಬ್ರವರಿ 27, ಮಾರ್ಚ್ 3 ಮತ್ತು 7 ರಂದು ಮತದಾನ ನಡೆಯಲಿದೆ. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ.

Tags: #Saaksha TVFive State ElectionUP Election 2022
ShareTweetSendShare
Join us on:

Related Posts

darshan-puttannaiah-sugarcane-farmers-price-hike-committee

 ದೆಹಲಿಯಲ್ಲಿ ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಧ್ವನಿ ಎತ್ತಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೇಂದ್ರದಿಂದ ಶೀಘ್ರವೇ ಮಹತ್ವದ ನಿರ್ಧಾರ ನಿರೀಕ್ಷೆ!

by admin
October 14, 2026
0

ದೆಹಲಿ: ದೇಶದ ಬೆನ್ನೆಲುಬಾಗಿರುವ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯದ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರ ನಿಯೋಗವು ದೇಶದ ರಾಜಧಾನಿ...

r-ashoka-demands-release-disability-honorarium-karnataka

ವಿಕಲಚೇತನರ ಗೌರವಧನ ತಡೆ ಅಮಾನವೀಯ ಎಂದ ಪ್ರತಿಪಕ್ಷದ ನಾಯಕ ಅಶೋಕ್ ಆಕ್ರೋಶ

by admin
October 14, 2026
0

ತಕ್ಷಣ ಗೌರವಧನ ಬಿಡುಗಡೆಗೆ ಆಗ್ರಹ; ಆಂಧ್ರ ಮಾದರಿಯಲ್ಲಿ 5 ಸಾವಿರಕ್ಕೆ ಹೆಚ್ಚಿಸಿ ಎಂದು ಒತ್ತಾಯ 19 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಯಕರ್ತರ ಸೇವಾ ಭದ್ರತೆಗೆ ಆಗ್ರಹಿಸಿ ಅಶೋಕ...

r-ashoka-demands-fir-honey-trap-allegations-karnataka

ಹನಿ ಟ್ರ್ಯಾಪ್’ ಬಗ್ಗೆ ಗಾಳಿಯಲ್ಲಿ ಗುಂಡು ಹಾರಿಸುವುದನ್ನು ನಿಲ್ಲಿಸಿ, ಸತ್ಯವನ್ನು ಬಹಿರಂಗಪಡಿಸಿ: ಆರ್. ಅಶೋಕ್

by admin
October 14, 2026
0

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಮೇಲೆಯೇ ಹಾಗೂ ತಮ್ಮ ಸಂಪುಟದ ಐದಾರು ಸಚಿವರ ಮೇಲೆ ‘ಹನಿ ಟ್ರ್ಯಾಪ್’ ಪ್ರಯತ್ನ ನಡೆದಿದೆ ಎಂದು ಹೇಳುತ್ತಿದ್ದಾರೆ. ತಮ್ಮ...

r-ashoka-demands-fir-sting-operation-case-karnataka

ಮುಖ್ಯಮಂತ್ರಿಗಳೇ, ಗಾಳಿಯಲ್ಲಿ ಗುಂಡು ಬೇಡ, ಕೂಡಲೇ ಎಫ್‌ಐಆರ್‌ ದಾಖಲಿಸಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

by admin
October 14, 2026
0

ಬೆಂಗಳೂರು,  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸ್ಟಿಂಗ್‌ ಆಪರೇಶನ್‌ ಬಗ್ಗೆ ಗಾಳಿಯಲ್ಲಿ ಗುಂಡು ಹಾರಿಸುವ ಬದಲು ಎಫ್‌ಐಆರ್‌ ದಾಖಲಿಸಿ ತನಿಖೆ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ...

cubbon-park-walkers-association-international-women-youth-achievers-awards-2026

ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ & ಫೋರಂ: 6ನೇ ಅಂತರರಾಷ್ಟ್ರೀಯ ಮಹಿಳಾ ಮತ್ತು ಯುವ ಸಾಧಕರ ಪ್ರಶಸ್ತಿ ಪ್ರದಾನ ಸಮಾರಂಭ 2026

by admin
October 14, 2026
0

ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಮತ್ತು ಫೋರಂ (Cubbon Park Walkers Association & Forum) ವತಿಯಿಂದ ಆಯೋಜಿಸಲಾದ '6ನೇ ಅಂತರರಾಷ್ಟ್ರೀಯ ಮಹಿಳಾ ಮತ್ತು ಯುವ ಸಾಧಕರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram