ICC T20I Rankings | ರಾಕೆಟ್ ವೇಗದಲ್ಲಿ ಮುನ್ನುಗ್ಗುತ್ತಿದ್ದಾನೆ ಸೂರ್ಯ
ಐಸಿಸಿ ಟಿ 20 ಶ್ರೇಯಾಂಕದಲ್ಲಿ ಟೀಂ ಇಂಡಿಯಾದ ಯುವ ಬ್ಯಾಟರ್ ಗಳಾದ ಸೂರ್ಯಕುಮಾರ್ ಮತ್ತು ವೆಂಕಟೇಶ್ ಅಯ್ಯರ್ ರಾಕೆಟ್ ವೇಗದಲ್ಲಿ ಮುನ್ನುಗ್ಗುತ್ತಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧ ನಡೆದ ಮೂರು ಪಂದ್ಯಗಳ ಟಿ 20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಈ ಇಬ್ಬರೂ, ರ್ಯಾಂಕಿಂಗ್ಸ್ ನಲ್ಲಿ ಜಿಗಿತ ಸಾಧಿಸಿದ್ದಾರೆ.
ಈ ಸರಣಿಯಲ್ಲಿ ಟಾಪ್ ಸ್ಕೋರರ್ ಆಗಿ ನಿಂತ ಸೂರ್ಯ ಕುಮಾರ್ ಯಾದವ್, 35 ಸ್ಥಾನಗಳು ಮೇಲೇರಿ 21 ನೇ ಸ್ಥಾನಕ್ಕೆ ಬಂದಿದ್ದಾರೆ.
ವೆಂಕಟೇಶ್ ಅಯ್ಯರ್ ಏಕಾಏಕಿ 203 ಸ್ಥಾನಗಳನ್ನ ಜಿಗಿದು 115ನೇ ಸ್ಥಾನದಲ್ಲಿದ್ದಾರೆ.
ಟೀಂ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಎರಡು ಸ್ಥಾನ ಕುಸಿದು ಆರನೇ ಸ್ಥಾನದಲ್ಲಿದ್ದರೆ, ಮಾಜಿ ನಾಯಕ ವಿರಾಟ್ ಕೊಹ್ಲಿ 10ನೇ ಸ್ಥಾನ ಕಾಯ್ದುಕೊಂಡಿದ್ದಾರೆ.
ಪಾಕಿಸ್ತಾನದ ಆಟಗಾರರಾದ ಬಾಬಿರ್ ಅಜೀಮ್ ಮತ್ತು ಮೊಹಮ್ಮದ್ ರಿಜ್ವಾನ್ ಮೊದಲ ಎರಡು ಸ್ಥಾನಗಳನ್ನು ಉಳಿಸಿಕೊಂಡಿದ್ದಾರೆ.
ಬೌಲರ್‌ಗಳು ಮತ್ತು ಆಲ್‌ರೌಂಡರ್‌ಗಳ ಮಟ್ಟಿಗೆ ಹೇಳುವುದಾದರೆ, ಈ ವಿಭಾಗದಲ್ಲಿ ಟಾಪ್-10 ಪಟ್ಟಿಯಲ್ಲಿ ಒಬ್ಬ ಟೀಂ ಇಂಡಿಯಾ ಕ್ರಿಕೆಟಿಗನೂ ಸ್ಥಾನ ಪಡೆದಿಲ್ಲ. ಭುವನೇಶ್ವರ್ ಕುಮಾರ್ 20ನೇ ಸ್ಥಾನದಲ್ಲಿದ್ದಾರೆ.
icc-t20i-rankings suryakumar-venkatesh-iyer-make-massive-jumpSaakshatv









