ರಷ್ಯಾ- ಉಕ್ರೇನ್ ಸಂಘರ್ಷವನ್ನು ಅಂತ್ಯಗೊಳಿಸಲು ಮೋದಿ ಅವರು ಮಧ್ಯಪ್ರವೇಶಿಸಬೇಕು – Saaksha Tv
ನವದೆಹಲಿ: ರಷ್ಯಾ- ಉಕ್ರೇನ್ ಸಂಘರ್ಷವನ್ನು ಅಂತ್ಯಗೊಳಿಸಲು ಭಾರತ ಮಧ್ಯಪ್ರವೇಶ ಮಾಡಬೇಕು ಎಂದು ಭಾರತದಲ್ಲಿರುವ ಉಕ್ರೇನ್ ರಾಯಭಾರಿ ಡಾ. ಇಗೊರ್ ಪುಲಿಖಾ ಮನವಿ ಮಾಡಿಕೊಂಡಿದ್ದಾರೆ.
ಖಾಸಗಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು ಪ್ರಧಾನಿ ಮೋದಿ ಅವರು ಅತ್ಯಂತ ಶಕ್ತಿಶಾಲಿ ಮತ್ತು ಗೌರವಾನ್ವಿತ ನಾಯಕರಲ್ಲಿ ಒಬ್ಬರು, ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಈ ವಿಚಾರವಾಗಿ ಚರ್ಚೆ ನಡೆಸಬೇಕು ಎಂದು ಕೋರಿದ್ದಾರೆ.
#WATCH | Delhi: Dr Igor Polikha, Ambassador of Ukraine to India seeks Government of India's intervention amid #RussiaUkraineConflict; urges PM Narendra Modi to speak with Russian President Vladimir Putin. pic.twitter.com/L1b48I42DN
— ANI (@ANI) February 24, 2022
ಈ ಸಂದರ್ಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಮಾತನಾಡಬಲ್ಲರು ಎಂದು ನಾನು ಭಾವಿಸುತ್ತೇನೆ. ಅವರು ನಮ್ಮ ಅಧ್ಯಕ್ಷರೊಂದಿಗೂ ಮಾತನಾಡಬಹದು. ಇತಿಹಾಸದಲ್ಲಿ ಹಲವು ಬಾರಿ ಭಾರತ ಶಾಂತಿಪಾಲನಾ ಪಾತ್ರ ನಿರ್ವಹಿಸಿದೆ. ಈ ಯುದ್ಧವನ್ನು ನಿಲ್ಲಿಸಲು ನಿಮ್ಮ ಬಲವಾದ ಬೆಂಬಲವನ್ನು ನಾವು ಕೋರುತ್ತೇವೆ. ಎಂದು ಡಾ ಇಗೊರ್ ಪೋಲಿಖಾ ತಿಳಸಿದ್ದಾರೆ. ಈ ಕುರಿತು ANI ವರದಿ ಮಾಡಿದೆ.








