Ishan Kishan | ಒಂದೇ ಒಂದು ಇನ್ನಿಂಗ್ಸ್.. ಧೋನಿ.. ಪಂತ್ ದಾಖಲೆ ಉಡೀಸ್
ಟೀಂ ಇಂಡಿಯಾ ಯುವ ವಿಕೆಟ್ ಕೀಪರ್ ಇಶಾನ್ ಕಿಶನ್ ಅಪರೂಪದ ಸಾಧನೆ ಮಾಡಿದ್ದಾರೆ.
ಇಶಾನ್ ಕಿಶನ್ ಟಿ20 ಪಂದ್ಯವೊಂದರಲ್ಲಿ ಟೀಂ ಇಂಡಿಯಾ ಪರ ಅತಿ ಹೆಚ್ಚು ರನ್ ಗಳಿಸಿದ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ.
ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಇಶಾನ್ ಬಿರುಸಿನ ಇನ್ನಿಂಗ್ಸ್ ಆಡಿದರು.
57 ಎಸೆತಗಳಲ್ಲಿ 10 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 89 ರನ್ ಗಳಿಸಿದರು.
ಈ ಮೂಲಕ ಇಶಾನ್ ಟೀಂ ಇಂಡಿಯಾ ವಿಕೆಟ್ ಕೀಪರ್ ಆಗಿ ಪಂದ್ಯವೊಂದರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು.
ಭಾರತ ತಂಡದ ಮಾಜಿ ನಾಯಕ ಎಂಎಸ್ ಧೋನಿ 2017ರಲ್ಲಿ ಬೆಂಗಳೂರಿನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ 56 ರನ್ ಗಳಿಸಿ ವಿಕೆಟ್ ಕೀಪರ್ ಆಗಿ ಒಂದು ಪಂದ್ಯದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದರು.
ಧೋನಿ ದಾಖಲೆಯನ್ನು ರಿಷಬ್ ಪಂತ್ 2019 ರಲ್ಲಿ ಬ್ರೇಕ್ ಮಾಡಿದರು.
ಅವರು ವೆಸ್ಟ್ ಇಂಡೀಸ್ ವಿರುದ್ಧ 42 ಎಸೆತಗಳಲ್ಲಿ 65 ರನ್ ಗಳಿಸಿದ್ದರು. ಇದೀಗ ಈ ದಾಖಲೆಯನ್ನು ಇಶಾನ್ ಕಿಶಾನ್ ಉಡಾಯಿಸಿದ್ದಾರೆ.
ಕೆರಿಬಿಯನ್ ಮೇಲೆ ಸರಣಿ ಕ್ಲೀನ್ ಸ್ವೀಪ್ ಮಾಡಿದ ಟೀಂ ಇಂಡಿಯಾ, ಶ್ರೀಲಂಕಾ ತಂಡವನ್ನು ಧ್ವಂಸಗೊಳಿಸಿದೆ.
ಮೊದಲ ಟಿ20ಯಲ್ಲಿ ರೋಹಿತ್ ಸೇನಾ 62 ರನ್ಗಳ ಜಯ ಸಾಧಿಸಿದೆ.
ishan-kishan-breaks-dhoni-rishabh-pant-record saaksha tv









