NSE ಹಗರಣಕ್ಕೆ ಸಂಬಂಧಿಸಿದಂತೆ ಆನಂದ್ ಸುಬ್ರಮಣಿಯನ್ ಅವರನ್ನ ಬಂಧಿಸಿದ CBI
ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ (NSE) ಹಗರಣಕ್ಕೆ ಸಂಬಂಧಿಸಿದಂತೆ ಚೆನ್ನೈನಿಂದ ಎನ್ಎಸ್ಇ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಸುಬ್ರಮಣಿಯನ್ ಅವರನ್ನು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ ಬಂಧಿಸಿದೆ.
ಆನಂದ್ ಸುಬ್ರಮಣಿಯನ್ ಅವರು ಏಪ್ರಿಲ್ 1, 2013 ರಿಂದ ಮುಖ್ಯ ಕಾರ್ಯತಂತ್ರದ ಸಲಹೆಗಾರರಾಗಿದ್ದರು. ಮತ್ತು ಅವರು ಏಪ್ರಿಲ್ 01, 2015 ರಿಂದ ವ್ಯವಸ್ಥಾಪಕ ನಿರ್ದೇಶಕರು (MD) ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (CEO) ಆಗಿದ್ದ ಚಿತ್ರಾ ರಾಮಕೃಷ್ಣ ಅವರು, ಆನಂದ್ ಸುಬ್ರಮಣಿಯನ್ ಅವರನ್ನ ಗ್ರೂಪ್ ಆಪರೇಟಿಂಗ್ ಆಫೀಸರ್ (GOO) ಮತ್ತು ಸಲಹೆಗಾರರಾಗಿ ಮರು ನೇಮಕ ಮಾಡಿದ್ದರು, ಅಕ್ಟೋಬರ್ 21, 2016 ರವರೆಗೆ. ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಅನುಸರಿಸದೆ ಚಿತ್ರಾ ರಾಮಕೃಷ್ಣ ಅವರು ಆನಂದ್ ಸುಬ್ರಮಣ್ಯಂ ಅವರನ್ನು NSE ಗೆ ಕರೆತಂದಿದ್ದಾರೆ.
ರಾಷ್ಟ್ರೀಯ ಷೇರು ವಿನಿಮಯ ಕೇಂದ್ರದ (ಎನ್‌ಎಸ್‌ಇ) ಮಾಜಿ ಗ್ರೂಪ್ ಆಪರೇಟಿಂಗ್ ಆಫೀಸರ್ ಮತ್ತು ಅವರ ಮಾಜಿ ಬಾಸ್ ಚಿತ್ರಾ ಸುಬ್ರಮಣ್ಯಂ ಅವರ ನಿಕಟವರ್ತಿ ಆನಂದ್ ಸುಬ್ರಮಣಿಯನ್ ಅವರನ್ನ ವಿಚಾರಣೆಯ ಸಂದರ್ಭದಲ್ಲಿ ವಶಪಡಿಸಿಕೊಂಡ ದಾಖಲೆಗಳು ಮತ್ತು ವಸ್ತುಗಳನ್ನು ಸಿಬಿಐ ಪರಿಶೀಲಿಸುತ್ತಿದೆ.
ಮಂಗಳವಾರ ಚೆನ್ನೈನಲ್ಲಿ ನಡೆದ ವಿಚಾರಣೆಯ ವೇಳೆ, ಸಿಬಿಐ ಅಧಿಕಾರಿಗಳು ಆನಂದ್ ಸುಬ್ರಮಣಿಯನ್ ಅವರ ನಿವಾಸದಿಂದ ಸಂಭಾವ್ಯ ಸಾಕ್ಷ್ಯಗಳನ್ನು ವಶಪಡಿಸಿಕೊಂಡಿದ್ದಾರೆ, ಅವರು ಆಗಿನ ಎನ್‌ಎಸ್‌ಇ ಮುಖ್ಯಸ್ಥೆ ಚಿತ್ರಾ ರಾಮಕೃಷ್ಣ ಮೇಲೆ ಪ್ರಭಾವ ಬೀರಲು ‘ಯೋಗಿ’ಯಂತೆ ನಟಿಸಿದ್ದಾರೆ ಎಂದು ಶಂಕಿಸಲಾಗಿದೆ.








