ADVERTISEMENT
Thursday, July 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Hale Mysore

Bangalore | ಜಾತಿ ಪದ್ಧತಿ ಮಾನವ ಹಕ್ಕುಗಳ ಉಲ್ಲಂಘನೆ : ಬಿ.ಕೆ.ಹರಿಪ್ರಸಾದ್

Mahesh M Dhandu by Mahesh M Dhandu
February 25, 2022
in Hale Mysore, Newsbeat, ಹಳೇ ಮೈಸೂರು
bangalore-helava community congress MLC B K Hariprasad saaksha tv
Share on FacebookShare on TwitterShare on WhatsappShare on Telegram

Bangalore | ಜಾತಿ ಪದ್ಧತಿ ಮಾನವ ಹಕ್ಕುಗಳ ಉಲ್ಲಂಘನೆ : ಬಿ.ಕೆ.ಹರಿಪ್ರಸಾದ್

ಬೆಂಗಳೂರು : ಜಾತಿ ಪದ್ದತಿ ಮಾನವ ಹಕ್ಕುಗಳ ಉಲ್ಲಂಘನೆ. ಜಾತಿ ಹೆಸರಿನಲ್ಲಿ ದಬ್ಬಾಳಿಕೆ ಮತ್ತು ಜಾತಿಯ ಹೆಸರಿನಲ್ಲಿ ಶೋಷಣೆಯಾಗುತ್ತಿದೆ. ಇದಕ್ಕೆಲ್ಲಾ ಕಾರಣ ಧರ್ಮದ ಹೆಸರಿನ ಚೌಕಟ್ಟು. ಹೀಗಾಗಿ ಹಿಂದುಳಿದ ವರ್ಗಗಳ ಸಮುದಾಯಗಳು ತ್ರಿಶಂಕು ಸ್ಥಿತಿಯಲ್ಲಿವೆ ಎಂದು ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.

Related posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

July 29, 2026
sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

July 29, 2026

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅಖಿಲ ಕರ್ನಾಟಕ ಹೆಳವ ಸಮಾಜದ ರಾಜ್ಯ ಮಟ್ಟದ ಮುಖಂಡರ ಸಭೆ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಅವಕಾಶ ಸಿಗಬೇಕು. ಸಂವಿಧಾನ ಬಹುಸಂಖ್ಯಾತರಿಗೆ ಮೀಸಲು ಅಲ್ಲ. ಎಲ್ಲಾ ವರ್ಗದ ಜನರಿಗೂ ಸಂವಿಧಾನದಲ್ಲಿ ಅವಕಾಶವಿದೆ. ಈ ಅವಕಾಶ ಮತ್ತು ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು ಎಂದು ಸಲಹೆ ನೀಡಿದ್ರು.

ನೀವು ಯಾವ ಪಕ್ಷ ಅಂತ ನೋಡಬೇಡಿ. ನಿಮಗೆ ಯಾರು ಸಹಾಯ ಮಾಡುತ್ತಾರೋ ಅವರಿಗೆ ಮತ ಹಾಕಿ. ಜನಪ್ರತಿನಿಧಿಗಳಿಗೆ ನಮ್ಮ ಶಕ್ತಿ ಏನು ಎಂಬುದು ಗೊತ್ತಾಗುತ್ತದೆ ಎಂದ ಅವರು, ನಮ್ಮ ಸಾಮಾಜಿಕ ವ್ಯವಸ್ಥೆಯಲ್ಲಿ ಪರಿಶಿಷ್ಟ ಜಾತಿಗೆ ರಾಜಕೀಯ ಮೀಸಲಾತಿ ಇದೆ. ಆದ್ರೆ ಹಿಂದುಳಿದ ವರ್ಗಕ್ಕೆ ರಾಜಕೀಯ ಮೀಸಲಾತಿ ಇಲ್ಲ. ಹಾಗೇ ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಮೀಸಲಾತಿ ನೀಡಿದ್ದಾರೆ. ಆದ್ರೆ ಹಿಂದುಳಿದ ವರ್ಗಕ್ಕೆ ನೀಡಿದ್ದ ಮೀಸಲಾತಿಯನ್ನು ತೆಗೆದುಹಾಕಿದ್ದಾರೆ. ಹೀಗಾಗಿ ಹಿಂದುಳಿದ ವರ್ಗಗಳು ಸಾಕಷ್ಟು ಸವಾಲುಗಳನ್ನು ಎದುರಿಸಬೇಕಾಗಿದೆ ಎಂದು ಹೇಳಿದ್ರು.
ಸಂವಿಧಾನದಲ್ಲಿರುವ ನಮ್ಮ ಹಕ್ಕು ಮತ್ತು ಅವಕಾಶಗಳನ್ನು ಪಡೆದುಕೊಳ್ಳಲು ನಾವು ಶೈಕ್ಷಣಿಕವಾಗಿ ಮತ್ತು ಸಾಮಾಜಿಕವಾಗಿ ಸುಧಾರಣೆಯಾಗಬೇಕು. ಅಖಿಲ ಕರ್ನಾಟಕ ಹೆಳವ ಸಮಾಜಕ್ಕೆ ಆಗುತ್ತಿರುವ ಅನ್ಯಾಯವನ್ನು ಬಗೆಹರಿಸಲು ವಿಧಾನ ಪರಿಷತ್ ನಲ್ಲಿ ಪ್ರಸ್ತಾಪ ಮಾಡುತ್ತೇನೆ. ಅಲ್ಲದೆ ಹೆಳವ ಸಮಾಜ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಯವರ ಜೊತೆಗೂ ಚರ್ಚೆ ಮಾಡುವುದಾಗಿ ಈ ಸಂದರ್ಭದಲ್ಲಿ ಭರವಸೆ ನೀಡಿದ್ರು.

bangalore-helava community congress MLC B K Hariprasad saaksha tv

ಇದಕ್ಕೂ ಮುನ್ನ ಮಾತನಾಡಿದ ಅಖಿಲ ಕರ್ನಾಟಕ ಹೆಳವ ಸಮಾಜದ ರಾಜ್ಯಾಧ್ಯಕ್ಷರಾದ ಎಮ್. ನಾಗರಾಜ್, ಹೆಳವ ಸಮುದಾಯ ಅಕ್ಷರ ಜ್ಞಾನವಿಲ್ಲದಿದ್ದರೂ ಮೌಖಿಕವಾಗಿಯೇ ತಮ್ಮ ವಿಶಿಷ್ಟ ಕಲಾ ನೈಪುಣ್ಯತೆಯಿಂದ 500 ರಿಂದ 600 ವರ್ಷದ ವಂಶಾವಳಿ ಹೇಳುತ್ತದೆ. ಹೆಳವರು ಉಳಿದವರ ಕುಲದ ಕಥೆ ಹೇಳಿದರು, ಇತಿಹಾಸ ಕಟ್ಟಿಕೊಟ್ಟರು, ಆದರೆ ತಮ್ಮ ಇತಿಹಾಸವನ್ನು ಬರೆದಿಡಲಿಲ್ಲ, ತಮ್ಮ ಹಕ್ಕುಗಳಿಗಾಗಿ ಆಗ್ರಹಿಸಲಿಲ್ಲ. ಹೀಗಾಗಿ ಸರ್ಕಾರದ ಯಾವುದೇ ಸೌಲಭ್ಯಗಳು ಹೆಳವ ಸಮುದಾಯಕ್ಕೆ ಸಿಗುತ್ತಿಲ್ಲ. ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಹಾಗೂ ರಾಜಕೀಯವಾಗಿಯೂ ಹೆಳವ ಸಮಾಜ ತುಂಬಾ ಹಿನ್ನಡೆಯಲ್ಲಿದೆ. ಹೀಗಾಗಿ ಸರ್ಕಾರ ಮುಂದಿನ ದಿನಗಳಲ್ಲಿ ಹೆಳವ ಸಮಾಜದ ಅಭಿವೃದ್ದಿಗೆ ಸ್ಪಂದಿಸಬೇಕು ಮತ್ತು ಸಮುದಾಯ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.

ಹೆಳವರು ಮೂಲತಃ ಅಲೆಮಾರಿಗಳು, ಇವರಿಗೆ ಸುಲಭವಾಗಿ ಜಾತಿ ಪ್ರಮಾಣಪತ್ರ ಸಿಗುವುದಿಲ್ಲ. ಇವರು ಶೈಕ್ಷಣಿಕವಾಗಿ ಕೇವಲ 2%ರಷ್ಟು ಮಾತ್ರ ಮುಂದುವರೆದಿದ್ದಾರೆ, ಇವರಲ್ಲಿ ಬಹುತೇಕರ ಮತದಾರರ ಗುರುತಿನ ಚೀಟಿ ಇಲ್ಲ, ಪಡಿತರ ಚೀಟಿ ಮತ್ತು ಆಧಾರ ಕಾರ್ಡ್ ನÀಂತಹ ಗುರುತೂ ಸಹ ಇಲ್ಲ. ಸಂಘಟನಾತ್ಮಕವಾಗಿ, ರಾಜಕೀಯವಾಗಿ ಗುರುತಿಸಿಕೊಂಡಿಲ್ಲ ಎಂದು ತಮ್ಮ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಎಮ್. ನಾಗರಾಜ್ ಮಾಹಿತಿ ನೀಡಿದರು.

ಪ್ರವರ್ಗ-1ರಲ್ಲಿ ಸೇರಿಸಲಾದ ಹೆಳವ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ನಡೆಸಲು ಸರ್ಕಾರ ಹಂಪಿ ವಿಶ್ವವಿದ್ಯಾನಿಲಯಕ್ಕೆ ಸೂಚನೆ ನೀಡಿತ್ತು. ಆದರೆ ಕುಲಶಾಸ್ತ್ರೀಯ ಅಧ್ಯಯನ ಮುಗಿದು ಕರ್ನಾಟಕದ ಹೆಳವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬಹುದು ಎಂದು ವರದಿ ಬಂದು ಪರಿಶಿಷ್ಟ ಪಂಗಡ ಮತ್ತು ಬುಡಕಟ್ಟು ಅಧ್ಯಯನ ಸಂಸ್ಥೆ ಮೈಸೂರು ಇವರು ಶಿಫಾರಸು ಮಾಡಿ ನಾಲ್ಕು ವರ್ಷ ಕಳೆದರೂ ಸರ್ಕಾರ ಮಾತ್ರ ಹೇಳುವ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿಲ್ಲ ನಾಲ್ಕು ವರ್ಷಗಳಿಂದ ಈ ಕಡತವು ಸಮಾಜ ಕಲ್ಯಾಣ ಇಲಾಖೆಯಲ್ಲಿ ನೆನೆಗುದಿಗೆ ಬಿದ್ದಿದೆ. ಹೆಳವ ಸಮುದಾಯದ ಜನರ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು, ಅವರನ್ನೂ ಉಳಿದ ಸಮುದಾಯದವರಂತೆ ಪರಿಗಣಿಸಬೇಕು ಅನ್ನುವುದು ಈ ಸಮುದಾಯದ ಬಹುಕಾಲದ ಬೇಡಿಕೆಯಾಗಿದೆ ಎಂದರು.

bangalore-helava community congress MLC B K Hariprasad saaksha tv

ಸರ್ಕಾರಿ ದಾಖಲಾತಿಗಳು, ಪ್ರಮಾಣ ಪತ್ರ, ಗುರುತಿನ ಚೀಟಿ ಮತ್ತು ಹಕ್ಕುಪತ್ರಗಳನ್ನು ನೀಡಬೇಕು. ಹೆಳವರ ಮಕ್ಕಳಿಗೆ ಶಿಕ್ಷಣ ಲಭಿಸಬೇಕು ತನ್ಮೂಲಕ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಈ ಸಮುದಾಯವನ್ನು ಅಭಿವೃದ್ಧಿಗೊಳಿಸುವ ಅಗತ್ಯವಿದೆ. ಹಾಗೆಯೇ ಈ ಸಮಾಜಕ್ಕೆ ಸೂಕ್ತ ಮೀಸಲಾತಿ ಒದಗಿಸಿ ಆರ್ಥಿಕ ಪ್ರಗತಿಯ ಆಯಾಮವನ್ನೂ ಸರ್ಕಾರ ತುರ್ತಾಗಿ ಪರಿಗಣಿಸಬೇಕಿದೆ ಎಂದು ಎಮ್. ನಾಗರಾಜ್ ಒತ್ತಾಯಿಸಿದ್ದಾರೆ.

ಬಳಿಕ ಹೆಳವ ಸಮಾಜದ ಗುರು ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ಬಸವ ಭೃಂಗೇಶ್ವರ ಸ್ವಾಮಿಗಳು ಹಾಗೂ ಸಿದ್ದಪ್ಪನ ಕಟ್ಟೆ ಮಾವಿನ ಬಾವಿಯ ಸ್ವಾಮೀಜಿ ಶ್ರೀ ಬಸವರಾಜ ಗುರೂಜಿ ಅವರು ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯರು ಹಾಗೂ ಕರ್ನಾಟಕ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷರಾದ ಎಮ್. ಸಿ. ವೇಣುಗೋಪಾಲ್, ನಿವೃತ್ತ ಐಎಎಸ್ ಅಧಿಕಾರಿಗಳಾದ ಪಿ.ಎನ್. ಶ್ರೀನಿವಾಸಚಾರಿ, ಕೆ.ಆರ್. ನಿರಂಜನ್, ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಖಜಾಂಚಿ ಎಮ್.ಎ. ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.

Tags: #Saaksha TVB K Harprasadbangalorekarnataka
ShareTweetSendShare
Join us on:

Related Posts

bhagavad-gita-life-lessons-kannada-motivation

Astro- ಜೀವನದಲ್ಲಿ ಭರವಸೆಯ ನಂಬಿಕೆ ಕಳೆದುಕೊಂಡಾಗ ಧೈರ್ಯ ತುಂಬುವ ಭಗವದ್ಗೀತೆಯ 5 ಅಮೂಲ್ಯ ಮಾತುಗಳು..!

by admin
July 29, 2026
0

ಪ್ರತಿಯೊಬ್ಬರ ನಿಜ ಜೀವನದ ಬದುಕಿನಲ್ಲೂ ಎಲ್ಲವನ್ನೂ ಕಳೆದುಕೊಂಡಂತೆ ಭಾಸವಾಗುವ ಒಂದು ಕ್ಷಣ ಬಂದೇ ಬರುತ್ತದೆ. ದುಃಖಗಳು ಅಂತ್ಯವಿಲ್ಲದಂತೆ ಕಾಣುತ್ತವೆ ಮತ್ತು ತೊಂದರೆಗಳು ಒಂದರ ನಂತರ ಒಂದರಂತೆ ಬರುತ್ತಲೇ...

sathyanarayana-para-athletics-coach-success-story

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ ” ಸತ್ಯ ” ಸಾಧನೆಯ ಯಶೋಗಾಥೆ..!

by admin
July 29, 2026
0

ಅಂದು ಹೂ ಮಾರುತ್ತಿದ್ದ ಕೈಗಳಿಂದ ಇಂದು ಭಾರತಾಂಬೆಯ ಕೊರಳಿಗೆ ಪದಕಗಳ ಹಾರ..! ವಿಶೇಷ ಚೇತನ ಕ್ರೀಡಾಪಟುಗಳ ಬದುಕಿಗೆ ಬೆಳಕಾದ " ಸತ್ಯ " ಸಾಧನೆಯ ಯಶೋಗಾಥೆ..! ಸರಿ...

saransh-jain-test-call-up-india-srilanka-2026

Teamindia- ತಂದೆಯ ಕನಸನ್ನು ನನಸು ಮಾಡಿರುವ 33ರ ಹರೆಯದ ಸರನ್ಶ್..!

by admin
July 29, 2026
0

"ನೀನು ಇನ್ನೂ ಚೆನ್ನಾಗಿ ಆಡಿದ್ರೆ ನಾನು ಬೇಗ ಗುಣಮುಖನಾಗುತ್ತೇನೆ". ಇದು ಕ್ಯಾನ್ಸರ್‍ನಿಂದ ಬಳಲುತ್ತಿದ್ದ ತಂದೆ ತನ್ನ ಮಗನಿಗೆ ಬರೆದಿರುವ ಕೈಪಿಡಿಯ ಬರಹ. ತಂದೆಯ ಆಸೆಯಂತೆ ಮಗ ಇಂದು...

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

2ನೇ ಸಚಿವರ ಪಟ್ಟಿಯಲ್ಲಿ ನನ್ನ ಹೆಸರು ಇರಬಹುದು: ಜಮೀರ್ ಖಾನ್

by Shwetha
July 29, 2026
0

ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ...

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

ಇದು ನೇರ ಚಾರಿತ್ರ್ಯ ವಧೆ: ಪ್ರಲ್ಹಾದ್ ಜೋಶಿ ವಿರುದ್ಧ ಸುಳ್ಳು ಹೇಳಿಕೆ ನೀಡಿದ ಪ್ರಿಯಾಂಕಾ ಗಾಂಧಿ- ಕ್ಷಮೆಯಾಚನೆಗೆ ಪಟ್ಟು ಹಿಡಿದ ಪ್ರಲ್ಹಾದ್ ಜೋಶಿ

by Shwetha
July 29, 2026
0

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ನಿನ್ನೆ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಭಾರೀ ವಾಕ್ಸಮರ ನಡೆದಿದೆ. ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾಂಗ್ರೆಸ್ ಸಂಸದೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram