Mekedaru padayatre | ಈ ತಿಂಗಳ 27 ರಿಂದ ಕಾಂಗ್ರೆಸ್ ನೀರಿಗಾಗಿ ನಡಿಗೆ
ಬೆಂಗಳೂರು : ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಈ ತಿಂಗಳ 27 ರಿಂದ ನಮ್ಮ “ನೀರಿಗಾಗಿ ನಡಿಗೆ” ಪಾದಯಾತ್ರೆಯನ್ನು ಪುನರ್ ಆರಂಭ ಮಾಡುತ್ತಿದ್ದೇವೆ. ಕಳೆದ ಬಾರಿಯಂತೆ ಈ ಸಲವೂ ತಾವೆಲ್ಲ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ನಮ್ಮೊಂದಿಗೆ ಹೆಜ್ಜೆ ಹಾಕಬೇಕೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವ ಸಿದ್ದರಾಮಯ್ಯ, ನಮ್ಮ ಸರ್ಕಾರ ಮೇಕೆದಾಟು ಯೋಜನೆಗೆ 2017 ರಲ್ಲಿ ವಿಸ್ತೃತ ಯೋಜನಾ ವರದಿ ತಯಾರಿಸಿ, ಕೇಂದ್ರ ಜಲಮಂಡಳಿಗೆ ನೀಡಿತ್ತು. ಅವರು ಕೆಲವು ಸ್ಪಷ್ಟೀಕರಣ ಕೇಳಿ ರಾಜ್ಯಕ್ಕೆ ವಾಪಾಸು ಕಳಿಸಿದ್ದರು.
ಕೇಂದ್ರ ಜಲಮಂಡಳಿ ಕೇಳಿದ್ದ ಸ್ಪಷ್ಟೀಕರಣಕ್ಕೆ ಸಮ್ಮಿಶ್ರ ಸರ್ಕಾರದ ಜಲ ಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರು ಸೂಕ್ತ ಮಾಹಿತಿ ಒದಗಿಸಿದ್ದರು ಮತ್ತು ಪರಿಷ್ಕೃತ ಯೋಜನಾ ವರದಿಯನ್ನೂ ಸಿದ್ಧಪಡಿಸಿ ಕಳಿಸಿದ್ದರು.
ಮೇಕೆದಾಟು ಯೋಜನೆ ಜಾರಿಗೆ ಬೇಕಾದ ಒಂದು ಪರಿಸರ ಅನುಮತಿ ಪಡೆಯಲು ಕಳೆದ ಎರಡೂವರೆ ವರ್ಷಗಳಿಂದ ಬಿಜೆಪಿ ಸರ್ಕಾರದ ಡಬ್ಬಲ್ ಇಂಜಿನ್ ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಈ ಸರ್ಕಾರಕ್ಕೆ ಜನರ ಹಿತಾಸಕ್ತಿ ಮುಖ್ಯವಲ್ಲ.
ಬೆಂಗಳೂರು ನಗರದಲ್ಲಿ 5 ದಿನದ ಬದಲು ಮೂರೇ ದಿನ ಪಾದಯಾತ್ರೆ ಮಾಡುತ್ತೇವೆ. ಮಾರ್ಚ್ 3 ರಂದು ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಬೃಹತ್ ಬಹಿರಂಗ ಸಭೆ ನಡೆಸಿ ಪಾದಯಾತ್ರೆ ಮುಕ್ತಾಯ ಮಾಡುತ್ತೇವೆ.
ಪಾದಯಾತ್ರೆಯ ಯಶಸ್ಸಿಗೆ ತಮ್ಮೆಲ್ಲರ ಸಹಕಾರ ಅಗತ್ಯ. 6/7#Mekedatu
— Siddaramaiah (@siddaramaiah) February 25, 2022
ಬೆಂಗಳೂರು ನಗರದ ಶೇ. 25 ಕ್ಕೂ ಹೆಚ್ಚು ಜನರಿಗೆ ಕಾವೇರಿ ನೀರು ಲಭ್ಯವಿಲ್ಲ. ಮೇಕೆದಾಟು ಯೋಜನೆ ಜಾರಿಯಾದರೆ ಬೆಂಗಳೂರು ನಗರಕ್ಕೆ ಮುಂದಿನ 50 ವರ್ಷಗಳ ವರೆಗೆ ಕುಡಿಯುವ ನೀರಿನ ಸಮಸ್ಯೆ ಇರಲ್ಲ. ಜೊತೆಗೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಬಹುದು.
ಬೆಂಗಳೂರು ನಗರದಲ್ಲಿ 5 ದಿನದ ಬದಲು ಮೂರೇ ದಿನ ಪಾದಯಾತ್ರೆ ಮಾಡುತ್ತೇವೆ. ಮಾರ್ಚ್ 3 ರಂದು ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಬೃಹತ್ ಬಹಿರಂಗ ಸಭೆ ನಡೆಸಿ ಪಾದಯಾತ್ರೆ ಮುಕ್ತಾಯ ಮಾಡುತ್ತೇವೆ. ಪಾದಯಾತ್ರೆಯ ಯಶಸ್ಸಿಗೆ ತಮ್ಮೆಲ್ಲರ ಸಹಕಾರ ಅಗತ್ಯ.
ಬೆಂಗಳೂರು ನಗರದ ಶೇ. 25 ಕ್ಕೂ ಹೆಚ್ಚು ಜನರಿಗೆ ಕಾವೇರಿ ನೀರು ಲಭ್ಯವಿಲ್ಲ. ಮೇಕೆದಾಟು ಯೋಜನೆ ಜಾರಿಯಾದರೆ ಬೆಂಗಳೂರು ನಗರಕ್ಕೆ ಮುಂದಿನ 50 ವರ್ಷಗಳ ವರೆಗೆ ಕುಡಿಯುವ ನೀರಿನ ಸಮಸ್ಯೆ ಇರಲ್ಲ. ಜೊತೆಗೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಬಹುದು. 5/7#Mekedatu
— Siddaramaiah (@siddaramaiah) February 25, 2022
ತಮಿಳುನಾಡಿಗೆ ಅವರ ಪಾಲಿನ ನೀರು ಕೊಡುವುದಾಗಿ ಒಪ್ಪಿಕೊಂಡಿದ್ದೇವೆ. ಯೋಜನೆ ಬಗ್ಗೆ ತಕರಾರು ಮಾಡಲು ಅವರಿಗೆ ಯಾವುದೇ ಕಾನೂನಾತ್ಮಕ ಹಕ್ಕಿಲ್ಲ. ಕಾವೇರಿ ವಿವಾದವನ್ನು ಜೀವಂತವಾಗಿಡಲು ಅಲ್ಲಿನ ಎಲ್ಲಾ ಪಕ್ಷಗಳು ಪ್ರಯತ್ನ ಮಾಡುತ್ತಿವೆ ಎಂದು ತಿಳಿಸಿದ್ದಾರೆ.
Congress mekedaru-padayatre- on Feb 27








