Cricket : ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ
ಧರ್ಮಶಾಲಾದಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ 2 ನೇ ಟಿ 20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿದೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಮೊದಲ ಪಂದ್ಯದಲ್ಲಿ ಗೆದ್ದ ತಂಡವನ್ನೇ ರೋಹಿತ್ ಶರ್ಮ ಈ ಪಂದ್ಯದಲ್ಲೂ ಕಣಕ್ಕಿಳಿಸಿದ್ದಾರೆ. ಶ್ರೀಲಂಕಾ ತಂಡದಲ್ಲಿ 2 ಬದಲಾವಣೆಗಳನ್ನು ಮಾಡಲಾಗಿದೆ.
ಮೂರು ಪಂದ್ಯಗಳ ಟಿ 20 ಸರಣಿಯಲ್ಲಿ ಟಿಂ ಇಂಡಿಯಾ ಈಗಾಗಲೇ 1-0 ಅಂತರದೊಂದಿಗೆ ಮುನ್ನಡೆ ಸಾಧಿಸಿದೆ. ಈ ಪಂದ್ಯ ಗೆದ್ದು ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿದೆ. ಇತ್ತ ಲಂಕಾ ತಂಡ ಈ ಪಂದ್ಯ ಗೆದ್ದು ಸಮಬಲ ಸಾಧಿಸಲು ಪ್ಲಾನ್ ಮಾಡಿಕೊಂಡಿದೆ.
ತಂಡಗಳು ಹೀಗಿವೆ.
ಭಾರತ : ರೋಹಿತ್ ಶರ್ಮಾ(c), ಇಶಾನ್ ಕಿಶನ್(w), ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್
ಶ್ರೀಲಂಕಾ : ಪಾತುಮ್ ನಿಸ್ಸಾಂಕ, ಕಮಿಲ್ ಮಿಶ್ರಾ, ಚರಿತ್ ಅಸಲಂಕ, ದನುಷ್ಕ ಗುಣತಿಲಕ, ದಿನೇಶ್ ಚಂಡಿಮಲ್(ಪ), ದಸುನ್ ಶನಕ(ಸಿ), ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರ, ಪ್ರವೀಣ್ ಜಯವಿಕ್ರಮ, ಬಿನೂರ ಫೆರ್ನಾಂಡೋ, ಲಹಿರು ಕುಮಾರ








