ಭಾರತಕ್ಕೆ ಬಂದಳಿದ ಕನ್ನಡಿಗರನ್ನು ಉಚಿತವಾಗಿ ವಿಮಾನದ ಮೂಲಕ ಬೆಂಗಳೂರಿಗೆ ಕರೆತರಲು ನಿರ್ಧಾರ – Saaksha Tv
ಬೆಂಗಳೂರು: ಉಕ್ರೇನ್ನಿಂದ ಭಾರತಕ್ಕೆ ಬಂದಿಳಿದ ಕನ್ನಡಿಗರನ್ನು ವಿಮಾನದ ಮೂಲಕ ಬೆಂಗಳೂರಿಗೆ ಉಚಿತವಾಗಿ ಕರೆತರಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಟ್ವೀಟ್ ಮಾಡಿದ್ದಾರೆ.
ಉಕ್ರೇನ್ ನಿಂದ ಬಂದು ಕರ್ನಾಟಕ ಭವನದಲ್ಲಿ ತಂಗುವ ಎಲ್ಲರನ್ನೂ ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಉಚಿತವಾಗಿ ಬೆಂಗಳೂರಿಗೆ ವಿಮಾನದ ಮೂಲಕ ಕರೆತರಲು ಮಾನ್ಯ ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಎಲ್ಲ ಏರ್ಪಾಡುಗಳನ್ನು ಮಾಡಿದೆ.@BSBommai
— R. Ashoka (ಆರ್. ಅಶೋಕ) (@RAshokaBJP) February 26, 2022
ಉಕ್ರೇನ್ ನಿಂದ ಬಂದು ಕರ್ನಾಟಕ ಭವನದಲ್ಲಿ ತಂಗುವ ಎಲ್ಲರನ್ನೂ ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಉಚಿತವಾಗಿ ಬೆಂಗಳೂರಿಗೆ ವಿಮಾನದ ಮೂಲಕ ಕರೆತರಲು ಮಾನ್ಯ ಮುಖ್ಯಮಂತ್ರಿ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಎಲ್ಲ ಏರ್ಪಾಡುಗಳನ್ನು ಮಾಡಿದೆ ಎಂದು ಹೇಳಿದ್ದಾರೆ.
ಉಕ್ರೇನ್‌ನಲ್ಲಿ ವೈದ್ಯಕೀಯ ವ್ಯಾಸಂಗ ಮಾಡುತ್ತಿರುವ 91 ಕರ್ನಾಟಕ ವಿದ್ಯಾರ್ಥಿಗಳು ಉಕ್ರೇನ್ನಿಂದ ಬರಲು ಕಾಯುತ್ತಿದ್ದಾರೆ ಎಂದು ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಪಟ್ಟಿ ಬಿಡುಗಡೆ ಮಾಡಿದೆ. ಇವರಲ್ಲಿ 28 ಮಂದಿ ಬೆಂಗಳೂರಿನವರು.