Karnataka | ಮಾ.4ಕ್ಕೆ ಅನುದಾನಿತ ಶಾಲಾ-ಕಾಲೇಜು ಬಂದ್!?
ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 4 ರಂದು ರಾಜ್ಯದಾದ್ಯಂತ ಅನುದಾನಿತ ಶಾಲಾ ಕಾಲೇಜುಗಳ ಬಂದ್ ಮಾಡಲು ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘ ನಿರ್ಧರಿಸಿದೆ.
ಈ ಬಗ್ಗೆ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ಅಧ್ಯಕ್ಷ ಡಿ.ಸಿ.ಗೋಪಿನಾಥ್ ಮಾಹಿತಿ ನೀಡಿದ್ದಾರೆ.
ಶನಿವಾರ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು, ‘ಅನುದಾನಿತ ಶಾಲಾ ಕಾಲೇಜುಗಳ ನೌಕರರಿಗೆ ಪಿಂಚಣಿ ಸೌಲಭ್ಯ ಒದಗಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 4ರಂದು ರಾಜ್ಯದಾದ್ಯಂತ ಅನುದಾನಿತ ಶಾಲಾ ಕಾಲೇಜುಗಳನ್ನು ಬಂದ್ ಮಾಡಲಿದ್ದೇವೆ.
ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಿಂದ ವಿಧಾನಸೌಧ ಚಲೋ ನಡೆಸಲಾಗುವುದು ಎಂದು ತಿಳಿಸಿದರು.
ಅಲ್ಲದೇ 2006ರ ನಂತರ ನೇಮಕವಾದ ನೌಕರರಿಗೂ ಸರ್ಕಾರಿ ನೌಕರರಂತೆ ನೂತನ ಪಿಂಚಣಿ ಯೋಜನೆಯನ್ನು ಯಥಾವತ್ತಾಗಿ ನೀಡಬೇಕು.
ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ವಿಧಿಸಿರುವ ನಿಯಮಗಳನ್ನು ಸಡಿಲಗೊಳಿಸಬೇಕು.
ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ನೀಡಬೇಕು ಹಾಗೂ ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಸರಳಗೊಳಿಸಬೇಕು ಎಂದು ಒತ್ತಾಯಿಸಿದರು.
PROTEST OF AIDED SCHOOL AND COLLEGE EMPLOYEES UNION ON THE 4TH OF MARCH saaksha tv









