SP, BSP ಜಾತಿ ಆಧಾರದ ಮೇಲೆ ಕೆಲಸ ಮಾಡುತ್ತವೆ BJP ಎಲ್ಲರಿಗಾಗಿ ಕೆಲಸ ಮಾಡುತ್ತದೆ- ಅಮಿತ್ ಶಾ…
ಉತ್ತರ ಪ್ರದೇಶದಲ್ಲಿ ಅಧಿಕಾರದಲ್ಲಿದ್ದಾಗ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷವು ಜಾತಿಯ ಆಧಾರದ ಮೇಲೆ ಕೆಲಸ ಮಾಡುತ್ತಿದ್ದವು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ. 2017 ರಿಂದ ರಾಜ್ಯದ ಎಲ್ಲಾ ಸಮುದಾಯಗಳಿಗಾಗಿ ತಮ್ಮ ಬಿಜೆಪಿ ಕೆಲಸ ಮಾಡಿದೆ ಎಂದು ಅಮಿತ್ ಶಾ ಹೇಳಿದರು.
ಕುಶಿನಗರದಲ್ಲಿ ಪಕ್ಷದ ಅಭ್ಯರ್ಥಿಗಳ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾ, ಉತ್ತರ ಪ್ರದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹೆಣ್ಣು ಮಕ್ಕಳಿಗೆ ಉಚಿತ ಸ್ಕೂಟರ್ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುವ ಬಡ ಯುವಕರಿಗೆ ಉಚಿತ ಟ್ಯಾಬ್ಲೆಟ್ ಮತ್ತು ಸ್ಮಾರ್ಟ್‌ಫೋನ್‌ಗಳನ್ನು ನೀಡಲಾಗುವುದು ಎಂದು ಹೇಳಿದರು.
ಹಿಂದಿನ ಸರ್ಕಾರಗಳು “ಬುವಾ ಮತ್ತು ಭಟಿಜಾ” (ಮಾಯಾವತಿ ಮತ್ತು ಅಖಿಲೇಶ್ ಯಾದವ್) ಉತ್ತರ ಪ್ರದೇಶವನ್ನು ಜಾತಿಯ ಆಧಾರದ ಮೇಲೆ ವಿಂಗಡಿಸಿದ್ದರು. “ಒಂದು ಸರ್ಕಾರ ಅಧಿಕಾರಕ್ಕೆ ಬಂದು ಒಂದು ಜಾತಿಗೆ ಕೆಲಸ ಮಾಡುತ್ತದೆ, ಇನ್ನೊಂದು ಬಂದು ಇನ್ನೊಂದು ಜಾತಿಗೆ ಕೆಲಸ ಮಾಡುತ್ತದೆ.
ನಂತರ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸರ್ಕಾರ ರಚನೆಯಾಯಿತು ಅದು ಇಡೀ ಉತ್ತರ ಪ್ರದೇಶಕ್ಕಾಗಿ ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ತತ್ವದ ಮೇಲೆ ಕೆಲಸ ಮಾಡಿದೆ” ಎಂದು ಶಾ ಹೇಳಿದರು.








