ADVERTISEMENT
Friday, March 20, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Cinema

ಬೆಂಗಳೂರು ಫಿಲ್ಮ್ ಫೆಸ್ಟಿವಲ್ – “ಪೆದ್ರೋ” ಗೆ ಸಿಗಲಿಲ್ಲ ಮನ್ನಣೆ – ರಿಷಬ್ ಅಸಮಧಾನ

Naveen Kumar B C by Naveen Kumar B C
March 2, 2022
in Cinema, Newsbeat, ಮನರಂಜನೆ
Share on FacebookShare on TwitterShare on WhatsappShare on Telegram

ಬೆಂಗಳೂರು ಫಿಲ್ಮ್ ಫೆಸ್ಟಿವಲ್ ನಲ್ಲಿ “ಪೆದ್ರೋ” ಗೆ ಸಿಗಲಿಲ್ಲ ಮನ್ನಣೆ – ರಿಷಬ್ ಅಸಮಧಾನ…

 

Related posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

March 20, 2026
ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

March 20, 2026

ಬೆಂಗಳೂರನಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ  ಸಿನಿಮೋತ್ಸವದಲ್ಲಿ ಪ್ರತಿ ಬಾರಿಯಂತೆ ಈ ಬಾರಿಯೂ ವಿವಾದಗಳು ತಲೆ ಎತ್ತಿವೆ.  ಅದರಲ್ಲೂ ಕರ್ನಾಟಕದಲ್ಲಿ ನಡೆಯುತ್ತಿರುವ ಸಿನಿಮಾ ಉತ್ಸವದಲ್ಲಿ ಕನ್ನಡದ ಸಿನಿಮಾಗಳಿಗೆ ಅನ್ಯಾಯವಾಗಿದೆ.  ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಸಿನಿಮಾಗಳ ಆಯ್ಕೆ ಪ್ರಕ್ರಿಯೆ ಸರಿಯಾಗಿಲ್ಲ ಎಂಬ ಆರೋಪ ಕೇಳಿಬಂದಿದೆ.

 

ಮಾ.3ರಿಂದ ಬೆಂಗಳೂರಿನಲ್ಲಿ ಆರಂಭವಾಗಲಿರುವ  ಸಿನಿಮೋತ್ಸವ ಜಗತ್ತಿನ ಹಲವು ಭಾಷೆಯ ನೂರಾರು ಸಿನಿಮಾಗಳು ಪ್ರದರ್ಶನಗೊಳ್ಳಲಿವೆ. ಕನ್ನಡದಿಂದ ಕೆಲವು ಚಿತ್ರಗಳು ಆಯ್ಕೆಯಾಗಿವೆ. ಇದರಲ್ಲಿ ರಿಷಬ್ ಶೆಟ್ಟಿ ನಿರ್ಮಾಣದಲ್ಲಿ ತಯಾರಾದ ‘ಪೆದ್ರೂ’ ಚಿತ್ರಕ್ಕೆ ಮನ್ನಣೆ ದೊರಕಿಲ್ಲ.

 

ಜಾಗತಿಕವಾಗಿ ಅನೇಕ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು, ಮೆಚ್ಚುಗೆ ಪಡೆದ ‘ಪೆದ್ರೂ’ ಸಿನಿಮಾವನ್ನು ಬೆಂಗಳೂರು ಸಿನಿಮೋತ್ಸವದಲ್ಲಿ ಆಯ್ಕೆ ಮಾಡದೇ ಇರುವುದಕ್ಕೆ ನಿರ್ಮಾಪಕ ರಿಷಬ್​ ಶೆಟ್ಟಿ, ನಿರ್ದೇಶಕ ನಟೇಶ್​ ಹೆಗಡೆ ಬೇಸರಿಸಿಕೊಂಡಿದ್ದಾರೆ.  ಈ ಕುರಿತು  ರಿಷಬ್​ ಶೆಟ್ಟಿ ಅವರು ಬಹಿರಂಗ ಪತ್ರ ಬರೆದು ಅಸಮಧಾನ ಹೊರಹಾಕಿದ್ದಾರೆ.

 


ರಿಷಬ್ ಶೆಟ್ಟಿ ಬರೆದ ಪತ್ರದ ಸಾರಾಂಶ ಇಲ್ಲಿದೆ…

 

‘ಎಲ್ಲರಿಗೂ ನಮಸ್ಕಾರ.. ರಿಷಬ್‌ ಶೆಟ್ಟಿ ಫಿಲ್ಮ್‌ ಸಂಸ್ಥೆಯಿಂದ ನಿರ್ಮಾಣವಾದ ಪೆದ್ರೊ ಸಿನಿಮಾದ ಟ್ರೇಲಲ್​ಗೆ ನೀವು ನೀಡಿದ ಪ್ರತಿಕ್ರಿಯೆ ನಮ್ಮನ್ನು ಪುಳಕಿತರನ್ನಾಗಿಸಿದೆ. ವರ್ಷದ ಹಿಂದೆ ನಾವು ಈ ಸಿನಿಮಾದ ಕಥೆಯನ್ನು ಯೋಚಿಸಿದಾಗ ಅಥವಾ ಮಲೆನಾಡಿನ ಮಳೆಯಲ್ಲಿ ಚಿತ್ರೀಕರಿಸುತ್ತಿದ್ದಾಗ ಖಂಡಿತವಾಗಿ ಇದು ಪಡೆಯುತ್ತಿರುವ ಅಂತರಾಷ್ಟ್ರೀಯ ಮಟ್ಟದ ಪ್ರಶಂಸೆಯ ಬಗ್ಗೆ ಯೋಚಿಸಿರಲಿಲ್ಲ. ಬೇರೆ ಬೇರೆ ಊರಿನಿಂದ ಬಂದ ನಾವು ನಮ್ಮದೇ ಕಥೆಯನ್ನು ನಮ್ಮದೇ ರೀತಿಯಲ್ಲಿ ಹೇಳಬೇಕು ಎಂಬುದಷ್ಟೇ ನಮಗಿದ್ದ ಗಟ್ಟಿ ನಿರ್ಧಾರ’

 

‘ಮೊನ್ನೆಯಷ್ಟೇ ಆಯೋಜಿಸಿದ್ದ ನಮ್ಮ ಸಿನಿಮಾದ ಪ್ರೈವೇಟ್‌ ಸ್ಕ್ರೀನಿಂಗ್​ಗೆ ಆಗಮಿಸಿ ಸಿನಿಮಾವನ್ನು ಬಹುವಾಗಿ ಮೆಚ್ಚಿದ ಗಿರೀಶ್‌ ಕಾಸರವಳ್ಳಿ, ಎಂ.ಎಸ್‌. ಸತ್ಯು, ವಸಂತ ಮೋಕಾಶಿ, ವಿವೇಕ್‌ ಶಾನಭಾಗ್‌, ಕವಿತಾ ಲಂಕೇಶ್‌ ಹಾಗೂ ಇನ್ನಿತರ ಹಿರಿಯರು ತೋರಿದ ಪ್ರೀತಿ ನಮ್ಮ ಹೃದಯವನ್ನು ಆರ್ದೃ ಗೊಳಿಸಿದೆ. ಜನರೊಂದಿಗೆ ನಮ್ಮ ಸಿನಿಮಾವನ್ನು ಹಂಚಿಕೊಳ್ಳುವ ಆಸೆಯನ್ನು ಇಮ್ಮಡಿಯಾಗಿಸಿದೆ’

‘ಜಗತ್ತಿನ ಹಲವು ಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು ಪ್ರಶಸ್ತಿ ಪಡೆದು ವಿಮರ್ಶಕರಿಂದ ಪ್ರಶಂಸೆ ಪಡೆದ ಪೆದ್ರೊ, ನಮ್ಮ ಬೆಂಗಳೂರಿನ ಚಿತ್ರೋತ್ಸವಕ್ಕೆ ಯಾಕೋ ರುಚಿಸಿಲ್ಲ. ಕೆಲವೊಮ್ಮೆ ಕಹಿಗುಳಿಗೆಯನ್ನೂ ನುಂಗಬೇಕು ಆರೋಗ್ಯದ ದೃಷ್ಟಿಯಿಂದ. ನಮ್ಮ ಸಿನಿಮಾ ಚಿತ್ರೋತ್ಸವದಿಂದ ಅವಕಾಶ ವಂಚಿತವಾಯಿತು ಎಂಬುದು ಎಷ್ಟು ಸತ್ಯವೋ ನಮ್ಮದೇ ಊರಿನ ಜನ ತಮ್ಮದೇ ಸಿನಿಮಾವನ್ನು ವೀಕ್ಷಿಸಲು ವಂಚಿತರಾದರು ಎಂಬುದು ಅಷ್ಟೇ ಸತ್ಯ. ಸಿನಿಮಾ ಎಂಬ ನದಿಗೆ ಎಲ್ಲ ತೊರೆಗಳೂ ಬಂದು ಸೇರಬೇಕು. ನಮ್ಮಲ್ಲಿಯ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅದಕ್ಕೆ

ತಡೆಗಾಲು ಒಡ್ಡುವ ಪ್ರಯತ್ನ ಮಾಡಿದ್ದಾರೆ. ನಾವೆಲ್ಲ ಇವತ್ತು ಕುಳಿತಿರುವ ಜಾಗ ನಮಗೆ ಸಿನಿಮಾ ಎಂಬ ಮಾಧ್ಯಮ ನೀಡಿದ ಭಕ್ಷೀಸು. ಒಂದು ಸಿನಿಮಾ ಜನರಿಗೆ ತಲುಪುವುದನ್ನು ತಪ್ಪಿಸುತ್ತೇವೆ ಎಂದುಕೊಂಡರೆ ನೀರನ್ನು ಹಿಮ್ಮುಖ ಹರಿಸುತ್ತೇವೆ ಎಂದುಕೊಂಡಂತೆ. ನಮ್ಮನ್ನು ಎಡೆಬಿಡದೆ ‘ಸಿನಿಮಾವನ್ನು ಎಲ್ಲಿ ನೋಡಬಹುದು’ ಎಂದು ಕೇಳುತ್ತಿರುವ ಪ್ರೀತಿಯ ಜನರಲ್ಲಿ ನಮ್ಮದು ಒಂದೇ ಕೋರಿಕೆ. ದಯವಿಟ್ಟು ಹೀಗೆ ಎಂದಿಗೂ ನಮ್ಮೊಂದಿಗಿರಿ. ಪೆದ್ರೊವನ್ನು ನಿಮ್ಮೆಡೆಗೆ ತಲುಪಿಸುವುದು ನಮ್ಮ ಭದ್ಧತೆ’ ಎಂದು ರಿಷಬ್​ ಶೆಟ್ಟಿ ಪತ್ರ ಬರೆದು ತಮ್ಮ ಅಸಮಧಾನವನ್ನ ತೋಡಿಕೊಂಡಿದ್ದಾರೆ.

Tags: bangalorefilm festivalRishabh Shetty
ShareTweetSendShare
Join us on:

Related Posts

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

ಸಂಪುಟ ಪುನಾರಚನೆಯೋ ಅಥವಾ ಅಧಿಕಾರ ಹಸ್ತಾಂತರವೋ ಕಾಲವೇ ನಿರ್ಣಯಿಸಲಿದೆ : ಕೆಸಿ ವೇಣುಗೋಪಾಲ್ ಹೇಳಿಕೆಗೆ ಡಿಕೆಶಿ ಮಾರ್ಮಿಕ ಉತ್ತರ!

by Shwetha
March 20, 2026
0

ಬೆಂಗಳೂರು: ರಾಜ್ಯ ಕಾಂಗ್ರೆಸ್ ವಲಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಚರ್ಚೆಗಳು ಗರಿಗೆದರಿವೆ. ಕರ್ನಾಟಕದಲ್ಲಿ ಪ್ರಭಾವಿ ಸಿಎಂ ಇದ್ದಾರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ...

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

ಇಸ್ರೇಲ್ ದಾಳಿಗೆ ಬ್ರೇಕ್ ಹಾಕಿದ ಟ್ರಂಪ್ : ಇರಾನ್ ಪ್ರತೀಕಾರಕ್ಕೆ ಬೆದರಿದ ಗಲ್ಫ್ ರಾಷ್ಟ್ರಗಳು

by Shwetha
March 20, 2026
0

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ನೇರ ಕಾದಾಟವು ತೈಲ ಮಾರುಕಟ್ಟೆಯ ಮೇಲೆ ಗಂಭೀರ ಪರಿಣಾಮ ಬೀರಿದ್ದು,...

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

ಭಾರತದ ಪ್ರಮುಖ ನಾಯಕರ ಹತ್ಯೆ ಮತ್ತು 3ನೇ ಮಹಾಯುದ್ಧದ ಕಾರ್ಮೋಡ: ಸಂತ ಬಾಳು ಮಾಮಾರ ಆಘಾತಕಾರಿ ಭವಿಷ್ಯವಾಣಿ!

by Shwetha
March 20, 2026
0

ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿಭಾಗದ ಲಕ್ಷಾಂತರ ಭಕ್ತರ ಆರಾಧ್ಯ ದೈವ, ಪವಾಡ ಪುರುಷ ಸಂತ ಬಾಳು ಮಾಮಾ ಅವರ ಭವಿಷ್ಯವಾಣಿಯೊಂದು ಇದೀಗ ಜಗತ್ತಿನಾದ್ಯಂತ ಸಂಚಲನ ಮೂಡಿಸಿದೆ. ಕುರಿ...

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

ರಾತ್ರಿ ಗ್ಯಾಸ್ ಖಾಲಿಯಾಯ್ತಾ? ಚಿಂತೆ ಬೇಡ: ನಿಮ್ಮ ಪಕ್ಕದ ಎಟಿಎಂ ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ, ಕ್ಷಣಾರ್ಧದಲ್ಲಿ ಸಿಲಿಂಡರ್ ಪಡೆಯಿರಿ

by Shwetha
March 20, 2026
0

ಅಡುಗೆ ಅನಿಲ ಸಿಲಿಂಡರ್ ಬುಕ್ಕಿಂಗ್ ಮಾಡಿ, ಡೆಲಿವರಿ ಬಾಯ್ ಬರುವವರೆಗೆ ಕಾಯುವ ದಿನಗಳಿಗೆ ಇನ್ನೇನು ಕಾಲ ಕೂಡಿದೆ. ದೇಶದ ಇಂಧನ ಕ್ಷೇತ್ರದ ದೈತ್ಯ ಸಂಸ್ಥೆಯಾದ ಭಾರತ್ ಪೆಟ್ರೋಲಿಯಂ...

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

ಭಾರತೀಯ ಚಿತ್ರರಂಗದಲ್ಲಿ ಧುರಂಧರ್ ಹವಾ ರಣವೀರ್ ಅಬ್ಬರಕ್ಕೆ ಫಿದಾ ಆದ ತಾರೆಯರು

by Shwetha
March 20, 2026
0

ಬಾಲಿವುಡ್‌ನ ಎನರ್ಜಿಟಿಕ್ ಸ್ಟಾರ್ ರಣವೀರ್ ಸಿಂಗ್ ಅವರ ಬಹುನಿರೀಕ್ಷಿತ ಸಿನಿಮಾ ಧುರಂಧರ್: ದಿ ರಿವೆಂಜ್ ಅಂತಿಮವಾಗಿ ಬೆಳ್ಳಿತೆರೆಗೆ ಅಪ್ಪಳಿಸಿದೆ. ಸಿನಿಮಾ ಪ್ರೇಮಿಗಳ ದೀರ್ಘಕಾಲದ ಕಾಯುವಿಕೆಗೆ ಮಾರ್ಚ್ 19...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram