ಬೆಂಗಳೂರು : ದೇಶದಾದ್ಯಂತ ಲಾಕ್ ಡೌನ್ 4.0 ಜಾರಿಯಲ್ಲಿದ್ದು, ರಾಜ್ಯ ಸರ್ಕಾರ ಮೇ 31 ರವರೆಗೆ ಪ್ರತೀ ಭಾನುವಾರ ರಾಜ್ಯಾದ್ಯಂತ ಕಂಪ್ಲೀಟ್ ಲಾಕ್ ಡೌನ್ ಗೆ ಆದೇಶ ನೀಡಿದೆ. ಈ ಅವಧಿಯಲ್ಲಿ ಎರಡು ಭಾನುವಾರಗಳು ಬರಲಿವೆ. ಕೆಲ ವಿನಾಯಿತಿಗಳ ನಡುವೆ ಈಗ ಮೊದಲ ಭಾನುವಾರ ಬಂದಿದ್ದು, ಇಂದು ಸಂಜೆಯಿಂದಲೇ ರಾಜ್ಯಾದ್ಯಂತ ಕರ್ಫ್ಯೂ ಜಾರಿಯಲ್ಲಿರುತ್ತದೆ. ಇಂದು ಸಂಜೆ 7 ಗಂಟೆಯಿAದ ಸೋಮವಾರ ಬೆಳಗ್ಗೆ 7 ಗಂಟೆ ವರೆಗೆ ಕರ್ಫ್ಯೂ ಜಾರಿಯಲ್ಲಿ ಇರಲಿದ್ದು, ಸಂಪೂರ್ಣ ಲಾಕ್ ಡೌನ್ ಇರಲಿದೆ.
ಹಾಗಾದರೆ ಭಾನುವಾರ ರಾಜ್ಯದಲ್ಲಿ ಏನಿರುತ್ತೆ..? ಏನಿರಲ್ಲ ಎಂಬುದನ್ನು ನೋಡೋದಾದರೆ:
ಏನಿರುತ್ತೆ
* ಹಣ್ಣು, ತರಕಾರಿ, ದಿನಸಿ, ಮಾಂಸದ ಅಂಗಡಿಗಳು
* ಆಸ್ಪತ್ರೆಗಳು, ಮೆಡಿಕಲ್ ಸ್ಟೋರ್ಸ್, ಫಾರ್ಮಸಿ ಗಳು
* ಡಾಕ್ಟರ್ಸ್, ನರ್ಸ್, ಆಂಬುಲೆನ್ಸ್, ಮಾಧ್ಯಮಗಳ ಓಡಾಟ
* ಅನಾರೋಗ್ಯ ಸಮಸ್ಯೆ ಇದ್ದವರು ಆಸ್ಪತ್ರೆಗೆ ತೆರಳಲು ಅನುಮತಿ
* ಗರ್ಭಿಣಿ ಸ್ತ್ರೀಯರು ಆಸ್ಪತ್ರೆಗೆ ತೆರಳಲು ಅನುಮತಿ
* ಮದುವೆ ಸಮಾರಂಭಗಳಿಗೆ ಅವಕಾಶ (ಷರತ್ತುಗಳ ಅನ್ವಯ)
ಏನಿರಲ್ಲ?
* ಸಾರ್ವಜನಿಕ ಸಂಚಾರಕ್ಕೆ ಅವಕಾಶ ಇಲ್ಲ
* ಯಾವುದೇ ಬಸ್ ಸಂಚಾರ ಇರಲ್ಲ
* ಅಗತ್ಯ ವಸ್ತುಗಳನ್ನ ಹೊರತು ಪಡಿಸಿ, ಉಳಿದ ಅಂಗಡಿ ಮುಂಗಟ್ಟುಗಳು ಬಂದ್
* ಪ್ರಮುಖ ರಸ್ತೆಗಳಿಗೆ ಬ್ಯಾರಿಕೆಟ್
* ಬ್ಯೂಟಿ ಪಾರ್ಲರ್, ಸಲೂನ್, ಸ್ಪಾ, ಬಟ್ಟೆ ಅಂಗಡಿ, ಚಪ್ಪಲಿ ಅಂಗಡಿಗಳು ಇರೋಲ್ಲ
* ಎಲ್ಲಾ ಕಾರ್ಖಾನೆಗಳು ಲಾಕ್
* ಖಾಸಗಿ ಕಂಪನಿಗಳೂ ಕೂಡ ಬಂದ್
* ಎಲ್ಲಾ ಪಾರ್ಕ್ ಗಳಿಗೂ ಬೀಗ, ಜಾಗಿಂಗ್ ವಾಕಿಂಗ್ ಗೆ ಪರ್ಮೀಷನ್ ಇಲ್ಲ.
* ಚಿನ್ನದ ಅಂಗಡಿಗಳು ಕೂಡ ಕ್ಲೋಸ್
* ಆಟೋ, ಟ್ಯಾಕ್ಸಿ ಕ್ಯಾಬ್ ಗಳು ರಸ್ತೆಗೆ ಇಳಿಯುವಂತಿಲ್ಲ
* ಖಾಸಗಿ ವಾಹನ ಬಳಸಿ ಓಡಾಡುವ ಹಾಗಿಲ್ಲ
* ಬೇರೆ ಜಿಲ್ಲೆಗೆ ಹೋಗಲು ಅವಕಾಶವಿಲ್ಲ
ಪ್ರತಿದಿನ ತೆರೆಯುತ್ತಿದ್ದ ಬಾರ್ಗಳು ಭಾನುವಾರ ಕ್ಲೋಸ್ ಆಗಲಿವೆ. ಕಮೀಷನರೇಟ್ ವ್ಯಾಪ್ತಿಯಲ್ಲಿ ಕಮೀಷನರ್ ಮತ್ತು ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಬಾರ್ ಕ್ಲೋಸ್ ಬಗ್ಗೆ ಆದೇಶ ಹೊರಡಿಸಲಿದ್ದಾರೆ.








