Karnataka Budget 2022 : ಆರೋಗ್ಯ ಇಲಾಖೆಗೆ ಏನೆಲ್ಲಾ ಸಿಕ್ತು… ಕಂಪ್ಲೀಟ್ ಡೀಟೇಲ್ಸ್…!! ನಮ್ಮ ಕ್ಲಿನಿಕ್ ಸ್ಥಾಪನೆ, 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ, ಏರ್ ಅಂಬ್ಯುಲೆನ್ಸ್ ಸೇವೆ ETC
Karnataka Budget 2022 : ಆರೋಗ್ಯ ಇಲಾಖೆಗೆ ಏನೆಲ್ಲಾ ಸಿಕ್ತು… ಕಂಪ್ಲೀಟ್ ಡೀಟೇಲ್ಸ್…!!
Key Points
ಅಂಗಾಂಗ ಮರುಪಡೆಯುವಿಕೆ ಕೇಂದ್ರ
ನಮ್ಮ ಕ್ಲಿನಿಕ್ ಸ್ಥಾಪನೆ
ನಮ್ಮ ಕ್ಲಿನಿಕ್ ಸ್ಥಾಪನೆ
300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ
ಏರ್ ಅಂಬ್ಯುಲೆನ್ಸ್ ಸೇವೆ
ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಚೊಚ್ಚಲ ಬಜೆಟ್ ಮಂಡಿಸಿದ್ದಾರೆ.. ವಿಧಾನಸಭೆಯಲ್ಲಿ ಮಂಡಿಸಲಾದ 2022ರ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೃಷಿ , ಆರೋಗ್ಯ , ಮಹಿಳಾ ಸಬಲೀಕರ ಕ್ಷೇತ್ರಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ.. ಜೊತೆಗೆ ಎಲ್ಲಾ ಕ್ಷೇತ್ರಗಳಿಗೂ ಬಂಪರ್ ಕೊಡುಗೆ ನೀಡಲಾಗಿದೆ..
ಆರೋಗ್ಯ ಇಲಾಖೆಗೆ ಸರ್ಕಾರವು ಭರ್ಜರಿ ಗಿಫ್ಟ್ ನೀಡಿದೆ.. ಆರೋಗ್ಯ ಕ್ಷೇತ್ರದಲ್ಲಿ ಒಳ್ಳೊಳ್ಳೆ ಯೋಜನೆಗಳನ್ನ ಪರಿಚಯಿಸಿದೆ..
ಆರೋಗ್ಯ ಇಲಾಖೆಗೆ ಏನೆಲ್ಲಾ ಸಿಕ್ತು… ಕಂಪ್ಲೀಟ್ ಡೀಟೇಲ್ಸ್…
ಪ್ರಮುಖವಾಗಿ ಮನೆ ಬಾಗಿಲಿಗೇ ವೈದ್ಯಕೀಯ ಸೇವೆ ಪರಿಚಯಿಸಲಾಗಿದೆ.
ಗ್ರಾಮೀಣ ಭಾಗದ ಜನರ ಮನೆ ಬಾಗಿಲಿಗೆ ವೈದ್ಯಕೀಯ ಸೇವೆ ಒದಗಿಸಲು ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಬೀದರ್, ಚಾಮರಾಜನಗರ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ‘ಮುಖ್ಯಮಂತ್ರಿ ಆರೋಗ್ಯ ವಾಹಿನಿ’ ಎಂಬ ಹೊಸ ಯೋಜನೆಯಡಿ 11 ಕೋಟಿ ರೂ. ವೆಚ್ಚದಲ್ಲಿ ಸಂಚಾರಿ ಕ್ಲಿನಿಕ್ ಗಳನ್ನು ಸ್ಥಾಪನೆ ಮಾಡಲಾಗುವುದು.
ನಮ್ಮ ಕ್ಲಿನಿಕ್ ಸ್ಥಾಪನೆ
ರಾಜ್ಯದ ಪ್ರಮುಖ ನಗರಗಳಲ್ಲಿ 438 ‘ನಮ್ಮ ಕ್ಲಿನಿಕ್’ ಗಳನ್ನು ಸ್ಥಾಪಿಸಲು ಯೋಚಿಸಲಾಗಿದೆ. ಬೆಂಗಳೂರಿನ ಎಲ್ಲಾ ವಾರ್ಡಗಳಲ್ಲಿ ‘ನಮ್ಮ ಕ್ಲಿನಿಕ್’ ಗಳನ್ನ ಸ್ಥಾಪಿಸಲಾಗುವುದು. ಈ ಕ್ಲಿನಿಕ್ ಗಳಲ್ಲಿ ಅಸಾಂಕ್ರಾಮಿಕ ರೋಗಗಳ ಪತ್ತೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ತಜ್ಞರ ಬಳಿ ಕಳುಹಿಸುವ ಸೇವೆ ಒದಗಿಸಲಾಗುವುದು.
ತುರ್ತು ವೈದ್ಯಕೀಯ ಸೇವೆ ಒದಗಿಸಲು ಖಾಸಗಿ ವಲಯದಲ್ಲಿ ಏರ್ ಅಂಬ್ಯುಲೆನ್ಸ್ ಸೇವೆ
ನಿಮ್ಹಾನ್ಸ್ ಮೂಲಕ ಅಂಗಾಂಗ ಮರುಪಡೆಯುವಿಕೆ ಕೇಂದ್ರ ಪ್ರಾರಂಭ
ಕ್ಯಾನ್ಸರ್ ರೋಗಿಗಳಿಗೆ ಕಿಮೋಥೆರಪಿ ಸೌಕರ್ಯ ಒದಗಿಸಲು 10 ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ Infusion Center ಸ್ಥಾಪನೆ.
ಉಚಿತ ಡಯಾಲಿಸಿಸ್ ಸೇವೆಗಳ ಸೈಕಲ್ ಗಳನ್ನು ತಿಂಗಳಿಗೆ 30,000 ದಿಂದ 60,000 ಸೈಕಲ್ ಗಳಿಗೆ ಹೆಚ್ಚಿಸಲು 20 ಕೋಟಿ ರೂ. ಹೆಚ್ಚುವರಿ ಅನುದಾನ.
ಬೆಳಗಾವಿಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರ ಸ್ಥಾಪನೆ
ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 300 ಮಹಿಳಾ ಸ್ವಾಸ್ಥ್ಯ ಕೇಂದ್ರಗಳ ಸ್ಥಾಪನೆ
ರಾಮನಗರದ ಅರ್ಚಕರಹಳ್ಳಿ ಗ್ರಾಮದಲ್ಲಿ600ಕೋಟಿ ರೂ. ವೆಚ್ಚದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿವಿ ಕ್ಯಾಂಪಸ್ ನಿರ್ಮಾಣ
ಚಿತ್ರದುರ್ಗ ಜಿಲ್ಲೆಯಲ್ಲಿ ಹೊಸ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ.
ರಾಜ್ಯದಲ್ಲಿ 10 ಕೋಟಿಗಿಂತ ಹೆಚ್ಚು ಕೋವಿಡ್ ಲಸಿಕೆ ವಿತರಣೆ
ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಮೂರು ಹಂತಗಳಲ್ಲಿ ನಿರ್ಮಾಣ
ಕೋವಿಡ್ ಮೂರನೇ ಅಲೆಯ ನಿರ್ವಹಣೆ , ಸೌಲಭ್ಯಕ್ಕಾಗಿ 2, 240 ಕೋಟಿ ರೂ. ಅನುದಾನ
ಜಿಲ್ಲಾ ಮಟ್ಟದಲ್ಲಿ ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ಗಳನ್ನು ಪ್ರಾರಂಭಿಸಲು 200ಕ್ಕೂ ಹೆಚ್ಚು ಹಾಸಿಗೆಗಳಿರುವ ಸರ್ಕಾರಿ ಆಸ್ಪತ್ರೆಗಳು ಬೋಧನಾ ಆಸ್ಪತ್ರೆಗಳಾಗಿ ಪರಿವರ್ತನೆ.
ಗ್ರಾಮೀಣ ಜನರಿಗೆ ತಾಲೂಕು ಮಟ್ಟದಲ್ಲಿ ಹೃದಯ ಸಂಬಂಧಿ ಚಿಕಿತ್ಸೆ ಒದಗಿಸಲು 75 ತಾಲೂಕು ಆಸ್ಪತ್ರೆಗಳನ್ನು ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ ಮ್ಯಾಪಿಂಗ್….
ತುಮಕೂರಿನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಹೊಸ ಟ್ರಾಮಾ ಕೇರ್ ಕೇಂದ್ರ ಸ್ಥಾಪನೆ
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ 2024ರಲ್ಲಿ ಶತಮಾನೋತ್ಸವ ಆಚರಣೆ ಹಿನ್ನೆಲೆ, ಮುಂದಿನ 3 ವರ್ಷಗಳಲ್ಲಿ 89 ಕೋಟಿ ರೂ. ವೆಚ್ಚದಲ್ಲಿ ಕೆ. ಆರ್. ಆಸ್ಪತ್ರೆ ಕಟ್ಟಡಗಳ ನವೀಕರಣ.
ಶಿವಮೊಗ್ಗದಲ್ಲಿ ನೂತನವಾಗಿ ಸ್ಥಾಪಿಸಿರೋ ಆಯುಷ್ ವಿಶ್ವವಿದ್ಯಾಲಯದ ಬಲವರ್ಧನೆ
ಹಾವೇರಿ ಜಿಲ್ಲೆ ಸವಣೂರು ತಾಲೂಕಿನಲ್ಲಿ ಹೊಸ ಆಯುರ್ವೇದ ಕಾಲೇಜು ಸ್ಥಾಪನೆ
ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಆಯುಷ್ ವಿಭಾಗ ಪ್ರಾರಂಭ
ಹುಬ್ಬಳ್ಳಿಯಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಜಯದೇವ ಹೃದ್ರೋಗ ಸಂಸ್ಥೆ ಪ್ರಾದೇಶಿಕ ಕೇಂದ್ರ ಸ್ಥಾಪನೆ
ಶುಚಿ ಯೋಜನೆಯಡಿಯಲ್ಲಿ 19 ಲಕ್ಷ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ನ್ಯಾಪಕಿನ್‌ಗಳನ್ನು ವಿತರಣೆ.
ಈ ಯೋಜನೆ ಉತ್ತಮಪಡಿಸಲು ಮಹಿಳಾ ಸ್ವಸಹಾಯ ಗುಂಪುಗಳೊಂದಿಗೆ ಕೈಜೋಡಿಸಲಾಗೋದು. ದಕ್ಷಿಣ ಕನ್ನಡ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಮುಟ್ಟಿನ ಕಪ್ ಗಳ ವಿತರಣೆ