Karnataka Budget 2022 : ‘Neet’ ರಾಜ್ಯದ ಪ್ರತಿ ತಾಲೂಕುಗಳಲ್ಲೂ ನೀಟ್ ಪರೀಕ್ಷೆಗೆ ತರಬೇತಿ
ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಚೊಚ್ಚಲ ಬಜೆಟ್ ಮಂಡಿಸಿದ್ದಾರೆ.. ವಿಧಾನಸಭೆಯಲ್ಲಿ ಮಂಡಿಸಲಾದ 2022ರ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೃಷಿ , ಆರೋಗ್ಯ , ಮಹಿಳಾ ಸಬಲೀಕರ ಕ್ಷೇತ್ರಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ.. ಜೊತೆಗೆ ಎಲ್ಲಾ ಕ್ಷೇತ್ರಗಳಿಗೂ ಬಂಪರ್ ಕೊಡುಗೆ ನೀಡಲಾಗಿದೆ..
ಮತ್ತೊಂದೆಡೆ ನೀಟ್ ತರಬೇತಿಗಾಗಿ ರಾಜ್ಯದ ಪ್ರತಿ ತಾಲೂಕುಗಳಲ್ಲೂ ನೀಟ್ ಪರೀಕ್ಷೆಗೆ ತರಬೇತಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ.
ಬಡಮಕ್ಕಳಿಗೆ ವೈದ್ಯಕೀಯ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಲು ಸರ್ಕಾರದ ವತಿಯಿಂದ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ನೀಟ್ ಪರೀಕ್ಷೆಗೆ ತರಬೇತಿ ನೀಡಲಾಗುವುದು. ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳಲ್ಲಿ ಸರ್ಕಾರಿ ಕೋಟಾದಲ್ಲಿ ಪ್ರವೇಶ ಪಡೆಯುವ ಬಡ ವಿದ್ಯಾರ್ಥಿಗಳಿಗೆ ಬ್ಯಾಂಕುಗಳಿಂದ ಶೈಕ್ಷಣಿಕ ಸಾಲ ಒದಗಿಸಲು ರಾಜ್ಯ ಸರ್ಕಾರವು ನೆರವಾಗಲಿದೆ ಎಂದು ಬೊಮ್ಮಾಯಿ ತಮ್ಮ ಬಜೆಟ್‌ನಲ್ಲಿ ತಿಳಿಸಿದ್ದಾರೆ.