CM Bommai | ಉಜ್ವಲ ಭವಿಷ್ಯಕ್ಕೆ ನ್ಯಾನೋ ತಂತ್ರಜ್ಞಾನ!
‘ಬೆಂಗಳೂರು ಇಂಡಿಯಾ ನ್ಯಾನೋ –2022″ ಸಮ್ಮೇಳನ
ಬೆಂಗಳೂರು ಇಂಡಿಯಾ ನ್ಯಾನೋ –2022ಗೆ ಸಿಎಂ ಚಾಲನೆ
ಜನರ ಜೀವನಮಟ್ಟ ಸುಧಾರಿಸಲು ತಂತ್ರಜ್ಞಾನ ಸಹಕಾರಿ
ನ್ಯಾನೋ ಎಲ್ಲವನ್ನು ಒಳಗೊಂಡ ಬಲಿಷ್ಠ ಕ್ಷೇತ್ರವಾಗಲಿದೆ
ಇಂದಿನಿಂದ ಆರಂಭವಾದ ‘ಬೆಂಗಳೂರು ಇಂಡಿಯಾ ನ್ಯಾನೋ –2022″ ಸಮ್ಮೇಳನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಿದರು.
ನಂತರ ಮಾತನಾಡಿದ ಮುಖ್ಯಮಂತ್ರಿ, ನ್ಯಾನೋ ತಂತ್ರಜ್ಞಾನದ ವ್ಯಾಪ್ತಿ ವಿಸ್ತಾರವಾಗಿದ್ದು, ಜನರ ಜೀವನಮಟ್ಟ ಸುಧಾರಿಸಲು ತಂತ್ರಜ್ಞಾನ ಸಹಕಾರಿಯಾಗಿದೆ. ಸರ್ಕಾರ, ನ್ಯಾನೋ ತಂತ್ರಜ್ಞಾನದ ಕೆಲಸ ಕಾರ್ಯಗಳಿಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಮೇಕ್ ಇನ್ ಇಂಡಿಯಾ ಮತ್ತು ಆತ್ಮ ನಿರ್ಭರ ಭಾರತದಡಿ ಹಲವು ಕಾರ್ಯಕ್ರಮಗಳನ್ನು ಘೋಷಿಸಿದ್ದು, ಭವಿಷ್ಯದಲ್ಲಿ ನ್ಯಾನೋ ಎಲ್ಲವನ್ನು ಒಳಗೊಂಡ ಬಲಿಷ್ಠ ಕ್ಷೇತ್ರವಾಗಿ ಹೊರಹೊಮ್ಮಲಿದೆ ಎಂದು ತಿಳಿಸಿದರು.
ಇನ್ನು ಈ ಕಾರ್ಯಕ್ರಮದಲ್ಲಿ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ, ಜವಾಹರ್ ಲಾಲ್ ನೆಹರು ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದ ಗೌರವಾಧ್ಯಕ್ಷ ವಿಜ್ಞಾನಿ ಪ್ರೊಫೆಸರ್ ಸಿ.ಎನ್. ಆರ್. ರಾವ್ , ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಅಪರ ಮುಖ್ಯಕಾರ್ಯದರ್ಶಿ ರಮಣ ರೆಡ್ಡಿ ಸೇರಿದಂತೆ ಇತರೆ ವಿಜ್ಞಾನಿಗಳು ಉಪಸ್ಥಿತರಿದ್ದರು. CM Bommai on nano technalogy CONFERENCE Bangalore









