ಎಲ್ಲೆಲ್ಲೂ VIRAT ಹವಾ… ಪಾಕಿಸ್ತಾನದಲ್ಲಿ 71ನೇ ಸೆಂಚೂರಿ
ಟೀಂ ಇಂಡಿಯಾ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಶತಕ ಬಾರಿಸಿ ಎರಡು ವರ್ಷಗಳು ಕಳೆದಿವೆ.
ಕೊಹ್ಲಿ ಕೊನೆಯ ಬಾರಿಗೆ 2019 ರಲ್ಲಿ ಬಾಂಗ್ಲಾದೇಶ ವಿರುದ್ಧ ಶತಕ ಸಿಡಿಸಿದ್ದರು. ಆದರೆ, ಕೊಹ್ಲಿಯ 71ನೇ ಶತಕಕ್ಕಾಗಿ ಭಾರತೀಯ ಅಭಿಮಾನಿಗಳೊಂದಿಗೆ ಇಡೀ ಕ್ರಿಕೆಟ್ ಜಗತ್ತು ಕಾತರದಿಂದ ಕಾಯುತ್ತಿದೆ.
ಅದರಂತೆ ಪಾಕಿಸ್ಥಾನದ ಅಭಿಮಾನಿಯೊಬ್ಬರು ಕೊಹ್ಲಿ ಪಾಕ್ ನೆಲದಲ್ಲಿ 71ನೇ ಶತಕ ಬಾರಿಸಲಿ ಎಂದು ಆಸೆ ವ್ಯಕ್ತಪಡಿಸಿದ್ದಾರೆ.
ರಾವಲ್ಪಿಂಡಿಯಲ್ಲಿ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಲ್ಲಿ ಕೊಹ್ಲಿ ಅಭಿಮಾನಿ ಈ ಪೋಸ್ಟರ್ ವಿಶೇಷ ಆಕರ್ಷಣೆಯಾಗಿತ್ತು. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
2008ರಲ್ಲಿ ಭಾರತ ತಂಡ ಕೊನೆಯ ಬಾರಿ ಪಾಕಿಸ್ತಾನ ಪ್ರವಾಸ ಕೈಗೊಂಡಿತ್ತು. ಆಗ ಕೊಹ್ಲಿ ಭಾರತ ತಂಡದ ಭಾಗವಾಗಿರಲಿಲ್ಲ.
ಅಂದಹಾಗೆ ಒಂದು ದಶಕದಿಂದ ಉಭಯ ತಂಡಗಳ ನಡುವಿನ ದ್ವಿಪಕ್ಷೀಯ ಸರಣಿಗಳು ನಡೆದಿಲ್ಲ.
ಎರಡು ತಂಡಗಳು ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿ ಮತ್ತು ಏಷ್ಯಾ ಕಪ್‌ನಂತಹ ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಮಾತ್ರ ಮುಖಾಮುಖಿಯಾಗಿವೆ. virat-kohli-71st-century-pakistan









