VIRAT ಮತ್ತೆ RCB ಕ್ಯಾಪ್ಟನ್ ಆಗೋ ಚಾನ್ಸ್ ಇಲ್ಲ…
IPL-2022 ಸೀಸನ್‌ಗೆ ಬಹುತೇಕ ಎಲ್ಲಾ ಫ್ರಾಂಚೈಸಿಗಳು ನಾಯಕರನ್ನು ನೇಮಿಸಿಕೊಂಡಿದ್ದರೂ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮಾತ್ರ ಇನ್ನೂ ನಾಯಕನನ್ನು ಘೋಷಣೆ ಮಾಡಿಲ್ಲ.
IPL-2021 ಸೀಸನ್ ನಂತರ ವಿರಾಟ್ ಕೊಹ್ಲಿ RCB ನಾಯಕತ್ವದಿಂದ ಕೆಳಗಿಳಿದಿದ್ದಾರೆ.
ಆದರೆ, ಈ ಋತುವಿನಲ್ಲಿ ವಿರಾಟ್ ಕೊಹ್ಲಿ ಮತ್ತೆ ಆರ್‌ಸಿಬಿ ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಕೂಡ ವಿರಾಟ್ ಕೊಹ್ಲಿ ಅವರನ್ನ ಒಪ್ಪಿಸೋದಾಗಿ ತಿಳಿಸಿದೆ.
ಹೀಗಾಗಿ ಆರ್ ಸಿಬಿ ಅಭಿಮಾನಿಗಳು ಮತ್ತೆ ವಿರಾಟ್ ಕೊಹ್ಲಿ ನಾಯಕರಾಗಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದಾರೆ.
ಇದೀಗ ಈ ವಿಚಾರವಾಗಿ ಆರ್‌ಸಿಬಿ ತಂಡದ ಮಾಜಿ ನಾಯಕ ಹಾಗೂ ನ್ಯೂಜಿಲೆಂಡ್‌ನ ಸ್ಪಿನ್ ದಂತಕತೆ ಡೇನಿಯಲ್ ವೆಟ್ಟೋರಿ ಪ್ರತಿಕ್ರಿಯಿಸಿದ್ದಾರೆ.
ವಿರಾಟ್ ಕೊಹ್ಲಿಗೆ ಮತ್ತೆ ಬೆಂಗಳೂರು ತಂಡವನ್ನು ಮುನ್ನಡೆಸುವ ಅವಕಾಶವಿಲ್ಲ ಎಂದು ವಿಟೋರಿ ಕಡ್ಡಿಮುರಿದಂತೆ ಹೇಳಿದ್ದಾರೆ.
“ವಿರಾಟ್ ಕೊಹ್ಲಿ ಮತ್ತೆ RCB ನಾಯಕರಾಗುವ ಸಾಧ್ಯತೆ ಇಲ್ಲ. ಈ ಬಗ್ಗೆ ನಾವು ಯೋಚಿಸುವ ಅಗತ್ಯವಿಲ್ಲ.
ಒಂದು ಬಾರಿ ಕ್ಯಾಪ್ಟನ್ಸಿಯಿಂದ ಕೆಳಗಿಳಿದ ಮೇಲೆ ಮತ್ತೆ ನಾಯಕತ್ವ ವಹಿಸಿಕೊಳ್ಳುವುದು ಅಸಾಧ್ಯ.
ಫ್ರಾಂಚೈಸಿ ಕ್ರಿಕೆಟ್ ಅಥವಾ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಮತ್ತೆ ನಾಯಕತ್ವ ವಹಿಸಿಕೊಳ್ಳುವುದು ಸಾಧ್ಯವಿಲ್ಲ.
ಹಾಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ, ಮ್ಯಾಕ್ಸ್ ವೆಲ್ ಅಥವಾ ಫಾಫ್ ಡುಪ್ಲಸೀಸ್ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಬಹುದು.
ನನ್ನ ಪ್ರಕಾರ ಮ್ಯಾಕ್ಸ್ ವೆಲ್ ಅವರನ್ನ ಆರ್ ಸಿಬಿ ನಾಯಕರನ್ನಾಗಿ ಘೋಷಣೆ ಮಾಡಬಹುದು.
ಆದ್ರೆ ಮ್ಯಾಕ್ಸಿ ಆರಂಭದ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ತಿಳಿದುಬಂದಿದೆ.
ಒಂದು ವೇಳೆ ಮ್ಯಾಕ್ಸಿ ಅಲಭ್ಯರಾದ್ರೆ ಡುಪ್ಲಸೀಸ್ ಗೆ ನಾಯಕತ್ವ ನೀಡಬಹುದು ಎಂದು ನಾನು ಭಾವಿಸುತ್ತೇನೆ ಎಂದು ಡೇನಿಯಲ್ ತಿಳಿಸಿದ್ದಾರೆ.
ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗುದ್ದಾಡಲಿದೆ.
virat-kohli-will-never-lead-rcb-again









