ತರಕಾರಿ ಮಾರುಕಟ್ಟೆಯಲ್ಲಿ ಸ್ಪೋಟ ಸಂಭವಿಸಿ, ಒರ್ವ ಮೃತ 14 ಮಂದಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಉಧಂಪುರದಲ್ಲಿ ಸ್ಫೋಟ ಸಂಭವಿಸಿದ್ದು ಓರ್ವ ನಾಗರಿಕ ಮೃತಪಟ್ಟು, 14 ಮಂದಿ ಗಾಯಗೊಂಡಿದ್ದಾರೆ. ಮಧ್ಯಾಹ್ನ ಮಾರುಕಟ್ಟೆಯಲ್ಲಿ ಈ ಸ್ಫೋಟ ಸಂಭವಿಸಿದೆ. ಸ್ಪೋಟದಲ್ಲಿ ಗಾಯಗೊಂಡವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಪೊಲೀಸ್ ಸಿಬ್ಬಂದಿ ಮತ್ತು ಇತರ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ. ಸಲಾಥಿಯಾ ಚೌಕ್ ಬಳಿ ಸ್ಫೋಟ ಸಂಭವಿಸಿದೆ.
ತರಕಾರಿ ಮಾರುವ ಬೀದಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಮತ್ತೊಂದೆಡೆ, ಉಧಮ್‌ಪುರದ ತಹಸೀಲ್ದಾರ್ ಕಚೇರಿ ಬಳಿ ರೆಹ್ರಿಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 13 ಜನರು ಗಾಯಗೊಂಡಿದ್ದಾರೆ ಎಂದು ಪಿಎಂಒ ಸಚಿವ ಡಾ. ಜಿತೇಂದ್ರ ಸಿಂಗ್ ಸಂದೇಶದಲ್ಲಿ ತಿಳಿಸಿದ್ದಾರೆ.
ಘಟನೆಯ ಕುರಿತು ತನಿಖೆ ನಡೆಸುವಂತೆ ಪೊಲೀಸರು ಮತ್ತು ಆಡಳಿತಕ್ಕೆ ಆದೇಶಿಸಲಾಗಿದೆ. ಇದಲ್ಲದೇ ಎಲ್ಲಾ ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಕೋರಲಾಗಿದೆ. ಎಂದು ಡಿಸಿ ಚಿಬ್ ಅವರು ತಿಳಿಸಿದ್ದಾರೆ.
ಮೂರು ದಿನಗಳ ಹಿಂದೆ ಭಾನುವಾರ ಶ್ರೀನಗರದ ಮಾರುಕಟ್ಟೆಯಲ್ಲಿ ಸ್ಫೋಟ ಸಂಭವಿಸಿತ್ತು, ಇಬ್ಬರು ಸಾವನ್ನಪ್ಪಿ 23 ಮಂದಿ ಗಾಯಗೊಂಡಿದ್ದರು.Jammu and Kashmir: Blast at Salathia Chowk in Udhampur, one killed, 14 civilians injured, chaos on the spot






