ನಾಗರೀಕರನ್ನ ಕರೆತರುವ ಕೆಲಸವನ್ನ ಇಷ್ಟು ಗಂಭೀರವಾಗಿ ಪರಿಗಣಿಸಿದ ಇನ್ನೊಂದು ದೇಶವಿಲ್ಲ – ಪಿಯೂಷ್ ಗೋಯೇಲ್..
ಉಕ್ರೇನ್ ಬಿಕ್ಕಟ್ಟಿನ ನಡುವೆ, ಕೇಂದ್ರ ಸಚಿವ ಪಿಯೂಷ್ ಗೋಯಲ್ ಬುಧವಾರ ಭಾರತದ ಅಭಿಯಾನದ ಆಪರೇಷನ್ ಗಂಗಾ ಬಗ್ಗೆ ಮಾಹಿತಿ ನೀಡಿದ್ದಾರೆ. ನಾಗರಿಕರನ್ನು ಮನೆಗೆ ಕರೆತರುವ ಕೆಲಸವನ್ನು ಇಷ್ಟು ಗಂಭೀರವಾಗಿ ಪರಿಗಣಿಸಿದ ಬೇರೆ ಯಾವುದೇ ದೇಶಗಳ ಉದಾಹರಣೆ ಇಲ್ಲ ಎಂದು ಅವರು ಹೇಳಿದ್ದಾರೆ. ದೊಡ್ಡ ದೇಶಗಳೂ ವಿಫಲವಾಗಿವೆ.
ಉಕ್ರೇನ್‌ನಿಂದ ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯದಲ್ಲೂ ಕಾಂಗ್ರೆಸ್ ರಾಜಕೀಯ ಮಾಡಲು ಪ್ರಯತ್ನಿಸುತ್ತಿದೆ ಎಂದು ಗೋಯಲ್ ಆರೋಪಿಸಿದ್ದಾರೆ. ಕುಟುಂಬದಲ್ಲಿ ಬಿಕ್ಕಟ್ಟು ಬಂದಾಗ ಜನರು ಪರಸ್ಪರ ವಿವಾದಗಳನ್ನು ಬಿಟ್ಟು ಬಿಕ್ಕಟ್ಟನ್ನು ನಿಭಾಯಿಸಲು ಪ್ರಾರಂಭಿಸುತ್ತಾರೆ, ಆದರೆ ಈ ಸಮಯದಲ್ಲಿಯೂ ಕೆಲವು ಕಾಂಗ್ರೆಸ್ ನಾಯಕರು ತಪ್ಪು ಮಾಹಿತಿ ಹರಡಲು ಪ್ರಯತ್ನಿಸುತ್ತಿರುವುದು ದುರದೃಷ್ಟಕರ ಎಂದು ಹೇಳಿದರು.
ಈ ಬಿಕ್ಕಟ್ಟಿನ ಸಮಯದಲ್ಲಿ, ಕಾಂಗ್ರೆಸ್ ಪಕ್ಷವು ದೇಶವನ್ನು ಪ್ರೋತ್ಸಾಹಿಸಬೇಕಿತ್ತು. ಕೇಂದ್ರ ಸರ್ಕಾರದ ಜೊತೆ ನಿಂತು ಸಹಾಯ ಮಾಡಬಹುದಿತ್ತು ಎಂದು ಗೋಯಲ್ ಹೇಳಿದರು. ನಂತರ ಕೇರಳ ಕಾಂಗ್ರೆಸ್‌ನ ಟ್ವಿಟರ್ ಹ್ಯಾಂಡಲ್‌ನಿಂದ ಆಕ್ಷೇಪಾರ್ಹ ಮತ್ತು ತಪ್ಪು ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗಿದೆ. ಭಾರತಕ್ಕೆ ರಷ್ಯಾ ಮತ್ತು ಉಕ್ರೇನ್ ಎರಡು ದೇಶಗಳ ಸಹಾಯ ಬೇಕಾಗಿದೆ. ಕೆಲವು ಪ್ರಮುಖ ಕಾಂಗ್ರೆಸ್ ನಾಯಕರು ರಷ್ಯಾದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದರು. ಇವುಗಳು ಒಂದು ರೀತಿಯಲ್ಲಿ, ತೆರವು ಕಾರ್ಯಾಚರಣೆಗೆ ಅಡೆತಡೆ ಉಂಟು ಮಾಡುತ್ತವೆ.
ರಾಹುಲ್ ಗಾಂಧಿ ಅವರು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಮಾತುಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ. ಇಮ್ರಾನ್ ಖಾನ್ ಅವರ ಮಾತನ್ನು ರಾಹುಲ್ ಗಾಂಧಿ ಹಂಚಿಕೊಂಡರೆ ಅದು ನಾಚಿಕೆಗೇಡಿನ ಸಂಗತಿ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲೂ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ರಾಜಕೀಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವುದು ಕಳವಳಕಾರಿ ಸಂಗತಿ. ಉಕ್ರೇನ್‌ನ ನೆರೆಯ ದೇಶಗಳಿಗೆ ಹೋದ ನಮ್ಮ ಸಚಿವರು ಯಾವುದೇ ಅಧಿಕಾರಿಯ ಸೇವೆಯನ್ನು ತೆಗೆದುಕೊಳ್ಳುತ್ತಿರಲಿಲ್ಲ. ಸ್ವತಃ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.