Shivamogga | ಪರೀಕ್ಷೆ ಇಲ್ಲದೇ ಪಾಸಾದ ವಿದ್ಯಾರ್ಥಿಗಳಿಗೆ ಶಾಕ್
2019-20 ನೇ ಸಾಲಿನ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ
ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿ ಸುದ್ದಿಗೋಷ್ಠಿ
ಮತ್ತೆ ಪರೀಕ್ಷೆ ಬಗ್ಗೆ ಕುಲಪತಿ ಪ್ರೋ. ವೀರಭದ್ರಯ್ಯ ಮಾಹಿತಿ
ಪರೀಕ್ಷೆ ನಡೆಸದೆ ಪಾಸ್ ಮಾಡಿದ್ದಕ್ಕೆ ಸಿಂಡಿಕೇಟ್ ಸಭೆಯಲ್ಲಿ ವಿರೋಧ
ಶಿವಮೊಗ್ಗ : ಕೊರೊನಾ ಸೋಂಕು ಕಾರಣದಿಂದಾಗಿ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ 2019-20ನೇ ಸಾಲಿನ ವಿದ್ಯಾರ್ಥಿಗಳನ್ನ ಪರೀಕ್ಷೆ ನಡೆಸದೇ ಪಾಸ್ ಮಾಡಲಾಗಿತ್ತು.
ಇದಕ್ಕೆ ಸಿಂಡಿಕೇಟ್ ಸಭೆಯಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಕುಲಪತಿ ಪ್ರೋ.ವೀರಭದ್ರಯ್ಯ ತಿಳಿಸಿದ್ದಾರೆ.
ಶಿವಮೊಗ್ಗ ವಿ.ವಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಸೋಂಕು ಹಿನ್ನೆಲೆಯಲ್ಲಿ 2019-20 ನೇ ಸಾಲಿನಲ್ಲಿ ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳನ್ನ ಪಾಸ್ ಮಾಡಲಾಗಿತ್ತು.
ಆದರೆ, ಪರೀಕ್ಷೆ ನಡೆಸದೆ ಪಾಸ್ ಮಾಡಿದ್ದಕ್ಕೆ ಸಿಂಡಿಕೇಟ್ ಸಭೆಯಲ್ಲಿ ವಿರೋಧ ವ್ಯಕ್ತವಾಗಿದೆ. ಈ ಕಾರಣಕ್ಕಾಗಿ ಪರೀಕ್ಷೆ ನಡೆಸಲು ತೀರ್ಮಾನ ಮಾಡಲಾಗಿದೆ.
ಇದಕ್ಕೆ ಎದುರಾಗಬಹುದಾದ ಕಾನೂನು ತೊಡಕಿನ ಕುರಿತು ಸಲಹೆ ಪಡೆಯಲು ಕುಲಸಚಿವರಿಗೆ ಸೂಚನೆ ನೀಡಲಾಗಿದೆ ಎಂದರು.
ಅಂದಹಾಗೆ 2019 -20ರಲ್ಲಿ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಹೀಗಾಗಿ ವಿವಿಯು ಸುಮಾರು 24 ಸಾವಿರ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಪಾಸ್ ಮಾಡಿತ್ತು.
ಈ ಬಗ್ಗೆ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ, ಸಿಂಡಿಕೇಟ್ ಸದಸ್ಯರೇ ರಾಜ್ಯಪಾಲರಿಗೆ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ದೂರ ನೀಡಿದ್ದರು. ಇದೀಗ ವಿವಿ ಪರೀಕ್ಷೆ ಇಲ್ಲದೇ ಪಾಸ್ ಆದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮುಂದಾಗಿದೆ.
KUVEMPU UNIVERSITY decides to conduct all 2019-20 exams