ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆ : ಬಿ ಎಸ್ ಯಡಿಯೂರಪ್ಪ- Saaksha Tv
ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 130ರಿಂದ 135 ಸ್ಥಾನಗಲ್ಲಿ ನಾವು ಗೆಲ್ಲುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಇಂದು ವಿಧಾನಸಭೆಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲಾಗುತ್ತದೆ. ಕಾಂಗ್ರೆಸ್ ಮುಕ್ತ ಭಾರತಕ್ಕೆ ಬಿಜೆಪಿ ಪಣತೊಟ್ಟಿದೆ. ಅದೇ ರೀತಿ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲಾಗುತ್ತದೆ. ಬಿಜೆಪಿಯ ಆಡಳಿತವನ್ನು ಮೆಚ್ಚಿ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ ಹೇಳಿದರು.
ಹಾಗೇ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎಂಬ ಭ್ರಮೆಯಿಂದ ಪ್ರತಿಪಕ್ಷಗಳು ಹೊರಬರಬೇಕು. ಬಿಜೆಪಿ ಸರ್ಕಾರವನ್ನು ತರಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತದೆ. ಕನಿಷ್ಠ 130ರಿಂದ 135 ಸ್ಥಾನಗಳನ್ನು ಗೆದ್ದು ಮತ್ತೆ ನಾವು ಅಧಿಕಾರಕ್ಕೆ ಬರುವಲ್ಲಿ ಯಶಸ್ವಿಯಾಗುತ್ತೇವೆ
ಅಲ್ಲದೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲೂ ಧೂಳಿಪಟ ಆಗುತ್ತೆ. ನಿಮ್ಮ ರಾಷ್ಟ್ರಾಧ್ಯಕ್ಷರು ಯಾರು ಎಂಬುದೇ ನಿಮಗೆ ಗೊತ್ತಿಲ್ಲ. ನೀವು ಮತ್ತೆ ವಿರೋಧ ಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳಲು ಮಾನಸಿಕವಾಗಿ ಸಿದ್ಧರಾಗಿ ಎಂದು ಸಿದ್ದರಾಮಯ್ಯರಿಗೆ ಯಡಿಯೂರಪ್ಪ ಟಾಂಗ್ ಕೊಟ್ಟರು.








